Kundapura: ಮೂಡು ತಾರಿಬೇರು ಶಾಲೆ: ರಂಗಮಂದಿರಕ್ಕೆ ಶಿಲಾನ್ಯಾಸ
70ನೇ ವರ್ಷಾಚರಣೆ ಸಂಭ್ರಮದಲ್ಲಿರುವ ಶಾಲೆಯ ಪುಟಾಣಿಗಳ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ
Team Udayavani, Sep 10, 2024, 2:05 PM IST
ಕುಂದಾಪುರ: ಆಲೂರು ಗ್ರಾಮದ ಮೂಡು ತಾರಿಬೇರು ಸರಕಾರಿ ಕಿ.ಪ್ರಾ. ಶಾಲೆಯಲ್ಲಿ ಕೊನೆಗೂ ರಂಗ ಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗಿದೆ. ಹಳೆ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಊರವರ ಸಹಕಾರದೊಂದಿಗೆ ರಂಗ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಾಗಿದೆ.
ಈ ಶಾಲೆ ಆರಂಭಗೊಂಡು 70 ವರ್ಷಗಳಾದರೂ ಇನ್ನೂ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ರಂಗ ಮಂದಿರ ಇರಲಿಲ್ಲ ಅನ್ನುವ ಕೊರಗಿತ್ತು. ಅದನ್ನು ಈಗ ನಿವಾರಿಸಲು ಹಳೆ ವಿದ್ಯಾರ್ಥಿ ಸಂಘದವರು ಮುಂದಾಗಿದ್ದು, ಅವರಿಗೆ ಊರಿನ ಅನೇಕರು ಕೈಜೋಡಿಸುತ್ತಿದ್ದಾರೆ.
ರಂಗಮಂದಿರಕ್ಕೆ ಅಡಿಗಲ್ಲು ಹಾಕುವ ಸಮಾರಂಭದಲ್ಲಿ ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ನಾಗೇಶ್ ಚಾತ್ರ, ಅಧ್ಯಕ್ಷ ಕಿರಣ್ ಗಾಣಿಗ, ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು, ಊರಿನ ಗಣ್ಯರು, ಪೋಷಕರು, ಊರವರು ಉಪಸ್ಥಿತರಿದ್ದರು.
ಬೈಂದೂರು ವಲಯದ ಆಲೂರು ಗ್ರಾಮದ ಮೂರು ತಾರಿಬೇರು ಶಾಲೆಯಲ್ಲಿ ಮಕ್ಕಳ ಸಾಂಸ್ಕೃತಿಕ ಚಟುವಟಿಕೆಗಳಿಗಾಗಿ ಸಭಾಭವನ ಅಥವಾ ರಂಗ ಮಂದಿರವಿಲ್ಲದೆ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ತರಗತಿ ಕೊಠಡಿಯಲ್ಲಿಯೇ ನಡೆಯುವಂತಾಗಿತ್ತು. ಶಾಲಾ ವಾರ್ಷಿಕೋತ್ಸವ, ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲು ಸಮಸ್ಯೆಯಾಗುತ್ತಿತ್ತು.
1954ರಲ್ಲಿ ಆರಂಭಗೊಂಡಿರುವ ಮೂಡು ತಾರಿಬೇರು ಶಾಲೆ ಈಗ 70ನೇ ವರ್ಷಾಚರಣೆ ಸಂಭ್ರಮದಲ್ಲಿದೆ. ಸಾವಿರಾರು ಮಂದಿ ಮಕ್ಕಳ ಬದುಕು ರೂಪಿಸಿದ ಶಿಕ್ಷಣ ಸಂಸ್ಥೆಯಿದು.
ಸುದಿನ ವರದಿ
ಮೂಡುತಾರಿಬೇರು ಶಾಲೆಯಲ್ಲಿ ರಂಗ ಮಂದಿರ ಅಥವಾ ಸಭಾಭವನ ಇಲ್ಲದೇ ಇರುವುದರಿಂದ ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ಅಡ್ಡಿಯಾಗುತ್ತಿದೆ ಅನ್ನುವುದರ ಬಗ್ಗೆ “ಉದಯವಾಣಿ ಸುದಿನ’ವು ಕಳೆದ ವರ್ಷದ ಆ. 20ರಂದು ವಿಶೇಷ ವರದಿ ಪ್ರಕಟಿಸಿ, ಗಮನಸೆಳೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ
Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.