Kundapura: ಊರಿಗೆ ಹೆಮ್ಮೆ: ಶಾಸಕ ಗಂಟಿಹೊಳೆ

ಚಿತ್ರಕೂಟ ಚಿಕಿತ್ಸಾಲಯದ ಪಾರ್ಶ್ವವಾಯು ಪುನರ್ವಸತಿ ವಿಭಾಗ ಉದ್ಘಾಟನೆ

Team Udayavani, Sep 6, 2024, 9:44 AM IST

Kundapura: ಊರಿಗೆ ಹೆಮ್ಮೆ: ಶಾಸಕ ಗಂಟಿಹೊಳೆ

ಕುಂದಾಪುರ: ಚಿತ್ರಕೂಟ ಆಯುರ್ವೇದ ಸಂಸ್ಥೆಯನ್ನು ಆರಂಭಿಸುವ ಮೂಲಕ ಆಲೂರಿಗೆ ಡಾ| ಬಾಯರಿ ಅವರು ದೊಡ್ಡ ಕೊಡುಗೆ ನೀಡಿದ್ದಾರೆ. ಇದರ ಯಶಸ್ಸು ಕೇವಲ ಅವರಿಗೆ ಮಾತ್ರವಲ್ಲ, ಇಡೀ ಊರಿಗೆ ಸಲ್ಲುತ್ತದೆ. ಈ ಪುಟ್ಟ ಊರಿಗೆ ಚಿಕಿತ್ಸೆಗಾಗಿ ವಿದೇಶಿಗರು ಕೂಡ ಬರುತ್ತಿರುವುದು ಹೆಮ್ಮೆಯ ವಿಚಾರ. ಸಂಸ್ಥೆ ಇನ್ನಷ್ಟು ಪ್ರಗತಿ ಕಾಣಲಿ ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.

ಅವರು ಗುರುವಾರ ಆಲೂರಿನ ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯದಲ್ಲಿ ನೂತನವಾಗಿ ನಿರ್ಮಿಸಿರುವ ಪಾರ್ಶ್ವ ವಾಯು ಪುನರ್ವಸತಿ ವಿಭಾಗವನ್ನು ಉದ್ಘಾಟಿಸಿ ಮಾತನಾಡಿದರು.

ಸಮ್ಮಾನ ಸ್ವೀಕರಿಸಿದ ಆಯುರ್ವೇದ ಗುರು ಡಾ| ರಘುರಾಮ ಶಾಸ್ತ್ರೀ ಮಾತನಾಡಿ, ಎಲ್ಲರೂ ಕನಸು ಕಾಣು ವುದು ಸಹಜ. ಆದರೆ ಅದನ್ನು ನನಸು ಮಾಡುವುದು ಮುಖ್ಯ. ಆ ಕಾರ್ಯವನ್ನು ಡಾ| ರಾಜೇಶ್‌ ಬಾಯರಿ ಮಾಡಿದ್ದಾರೆ ಎಂದರು.

ಗ್ರಾಮೀಣ ಭಾಗದಲ್ಲಿ ಈ ಸಂಸ್ಥೆಯನ್ನು ಕಟ್ಟಿ ಬೆಳೆಸಿರುವುದರ ಹಿಂದೆ ಅವರ ಅಪಾರ ಪರಿಶ್ರಮ, ಸೇವಾ ಮನೋಭಾವ ಇದೆ ಎಂದು ಉಡುಪಿ ಎಸ್‌ಡಿಎಂಸಿ ಆಯುರ್ವೇದ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ನಾಗರಾಜ್‌ ಪೂಜಾರಿ ಹೇಳಿದರು.

ಕುಂದಾಪುರದ ಉದ್ಯಮಿ ಅಭಿನಂದನ್‌ ಶೆಟ್ಟಿ ಮಾತನಾಡಿ, ನಗರದ ವ್ಯಾಮೋಹ ಹೆಚ್ಚುತ್ತಿರುವ ಈ ಕಾಲಘಟ್ಟದಲ್ಲೂ ಡಾ| ಬಾಯರಿಯವರು ತನ್ನೂರಿನಲ್ಲೇ ಆಯುರ್ವೇದ ಸಂಸ್ಥೆಯನ್ನು ಸ್ಥಾಪಿಸಿ, ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗುತ್ತಿರುವುದು ಖುಷಿಯ ವಿಚಾರ.ಚಿತ್ರಕೂಟದ ಮೂಲಕ ಆಲೂರು, ಚಿತ್ತೂರು ಗ್ರಾಮಗಳು ಎಲ್ಲೆಡೆ ಗುರುತಿಸುವಂತಾಗಲಿ ಎಂದು ಹಾರೈಸಿದರು.
ʼಲಾವಣ್ಯʼ ಕಾಸ್ಮೆಟಿಕ್‌ ವಿಭಾಗವನ್ನು ಆಲೂರು ಗ್ರಾ.ಪಂ. ಅಧ್ಯಕ್ಷ ರಾಜೇಶ್‌ ದೇವಾಡಿಗ ಉದ್ಘಾಟಿಸಿದರು. ಮಹಾಬಲ ಬಾಯರಿ ಉಪಸ್ಥಿತರಿದ್ದರು.

ವ್ಯವಸ್ಥಾಪಕ ನಿರ್ದೇಶಕ ಡಾ| ರಾಜೇಶ್‌ ಬಾಯರಿ ಪ್ರಸ್ತಾವಿಸಿ, ಚಿತ್ರಕೂಟದ ಚಿಕಿತ್ಸಾ ಪದ್ಧತಿ, ಸಂಸ್ಥೆ ನಡೆದು ಬಂದ ಹಾದಿ ಬಗ್ಗೆ ವಿವರಿಸಿದರು.

ಸ್ಥಳೀಯ ಶಾಲಾ ಶಿಕ್ಷಕಿ ಶ್ರೀಮತಿ ಜಿ. ಹೆಗ್ಗಡೆ ಅವರನ್ನು ಸಮ್ಮಾನಿಸಲಾಯಿತು. ಆದ್ಯಾ ಬಾಯರಿ ಪರಿಚಯಿಸಿ, ಡಾ| ಅನುಲೇಖಾ ಬಾಯರಿ ವಂದಿಸಿದರು. ಭಾಗ್ಯಶ್ರೀ ಐತಾಳ್‌ ನಿರೂಪಿಸಿದರು.

ಟಾಪ್ ನ್ಯೂಸ್

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Gangolli: Disgusted person commits suicide

Gangolli: ಜುಗುಪ್ಸೆಗೊಂಡು ವ್ಯಕ್ತಿ ಆತ್ಮಹತ್ಯೆ

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 6ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 6ನೇ ರೀಲ್ಸ್ ಪ್ರಸಾರ

Udupi: ‘ಕಲ್ಜಿಗ’ ಸಿನೆಮಾ ಕೊರಗಜ್ಜ ನೇಮ ದೃಶ್ಯಕ್ಕೆ ಕತ್ತರಿ ಹಾಕುವಂತೆ ಒತ್ತಾಯ

Udupi: ‘ಕಲ್ಜಿಗ’ ಸಿನೆಮಾದಲ್ಲಿ ಕೊರಗಜ್ಜ ನೇಮ ದೃಶ್ಯಕ್ಕೆ ಕತ್ತರಿ ಹಾಕುವಂತೆ ಒತ್ತಾಯ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.