Kundapura; ಇಂದು, ನಾಳೆ ಅತಿಥಿ ಶಿಕ್ಷಕರ ಮುಷ್ಕರ
Team Udayavani, Aug 22, 2023, 11:28 PM IST
ಕುಂದಾಪುರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆ. 23 ಮತ್ತು 24ರಂದು ಅತಿಥಿ ಶಿಕ್ಷಕರು ಸರಕಾರಿ ಶಾಲೆಗಳಿಂದ ಹೊರಬಂದು ಪ್ರತಿಭಟನೆ ನಡೆಸಲಿದ್ದಾರೆ.
ರಾಜ್ಯ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರು ರಾಜ್ಯದ ಸರಕಾರಿ ಶಾಲೆಗಳಲ್ಲಿ 11-12 ವರ್ಷಗಳಿಂದ ಕಡಿಮೆ ವೇತನ, ಸೇವಾ ಭದ್ರತೆ, ಕೃಪಾಂಕ ಸೇರಿದಂತೆ ಯಾವುದೇ ರೀತಿಯ ಸೌಲಭ್ಯಗಳಿಲ್ಲದಿದ್ದರೂ ಪ್ರಾಮಾಣಿಕತೆಯಿಂದ ಮಕ್ಕಳ ಶೈಕ್ಷಣಿಕ ಬದುಕನ್ನು ಕಟ್ಟಿಕೊಡುವಲ್ಲಿ ಕಾರ್ಯನಿರತವಾಗಿದೆ.
ಸರಕಾರದ ಹಂತದಲ್ಲಿ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧಿಕಾರ ವರ್ಗಕ್ಕೆ ಸಾಕಷ್ಟು ಬಾರಿ ಮನವಿ ಮಾಡಲಾಗಿದೆ ಹಾಗೂ ಮಾರ್ಚ್, ಜುಲೈಯಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದಾಗ ಅಲ್ಲಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಬಂದು ನಮ್ಮ ಅಹವಾಲು ಸ್ವೀಕರಿಸಿ ಬೇಡಿಕೆಗಳ ಈಡೇರಿಕೆಯ ಭರವಸೆ ನೀಡಿದ್ದಾರೆ.
ಸಚಿವ ಮಧು ಬಂಗಾರಪ್ಪ ಸಮ್ಮುಖದಲ್ಲಿ ಅತಿಥಿ ಶಿಕ್ಷಕರ ಸಮಸ್ಯೆಗಳ ಬಗ್ಗೆ ಸಭೆಯನ್ನು ಮಾಡಿದ್ದು, ಸಚಿವರು ಕೂಡ ಸೂಕ್ತ ಭರವಸೆ ನೀಡಿದ್ದಾರೆ. ಆದರೆ ಈ ವರೆಗೆ ಯಾವುದೂ ಈಡೇರಿಲ್ಲ ಎಂದು ಸಂಘ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದ ಸಮಸ್ತ ಅತಿಥಿ ಶಿಕ್ಷಕರು ಎರಡು ದಿನಗಳ ಕಾಲ ಸಾಮೂಹಿಕವಾಗಿ ಹಾಗೂ ಸಾಂಕೇತಿಕವಾಗಿ “ಶಾಲೆ ತೊರೆಯೋಣ’ ಅಭಿಯಾನ ನಡೆಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.