ಕೋಟೇಶ್ವರದಲ್ಲಿ ಪ್ರಯಾಣಿಕರ ತಂಗುದಾಣದ ಕೊರತೆ
ಬಸ್‌ಗಾಗಿ ಮರಗಳಡಿಯಲ್ಲಿ ನಿಲ್ಲಬೇಕಾದ ಅನಿವಾರ್ಯತೆ
Team Udayavani, Sep 16, 2020, 10:32 PM IST
ಸರಿಯಾದ ಬಸ್ ನಿಲ್ದಾಣ ಇಲ್ಲದಿರುವ ಕೋಟೇಶ್ವರ ಪೇಟೆ .
ಕೋಟೇಶ್ವರ: ಧಾರ್ಮಿಕ, ಶೈಕ್ಷಣಿಕ ಹಾಗೂ ವ್ಯಾಪಾರಿ ಕೇಂದ್ರವಾಗಿ ಬೆಳೆಯುತ್ತಿರುವ ಕೋಟೇಶ್ವರದಲ್ಲೊಂದು ಸಕಲ ಸೌಕರ್ಯಗಳನ್ನು ಒಳಗೊಂಡ ಪೂರ್ಣ ಪ್ರಮಾಣದ ಬಸ್ ನಿಲ್ದಾಣದ ಕೊರತೆ ಇದೆ. ಇದರಿಂದ ಪ್ರಯಾಣಿಕರು ಆಶ್ರಯಕ್ಕಾಗಿ ಮರಗಳಡಿ ನಿಲ್ಲಬೇಕಾದ ಪರಿಸ್ಥಿತಿ ಇದೆ.
ಬೀಜಾಡಿ, ಗೋಪಾಡಿ, ಕಟ್ಕೇರೆ, ಕಾಳಾವರ, ಕುಂಭಾಶಿ, ಪರಿಸರದ ಗ್ರಾಮಸ್ಥರಿಗೆ ಕೋಟೇಶ್ವರ ಎಲ್ಲ ವ್ಯವಹಾರಗಳಿಗೆ ಕೇಂದ್ರ ಸ್ಥಾನವಾಗಿದೆ. ವಿವಿಧ ಕಾರಣಗಳಿಗೆ ಇಲ್ಲಿಗೆ ಆಗಮಿಸುವ ಇತರ ಜಿಲ್ಲೆಗಳ ಮಂದಿ ಇಲ್ಲಿ ಪರಿಪೂರ್ಣ ಬಸ್ ನಿಲ್ದಾಣದ ಕೊರತೆಯಿಂದ ಇತರೆಡೆ ಬಸ್‌ಗಾಗಿ ಆಶ್ರಯಿಸಬೇಕಾದ ಪರಿಸ್ಥಿತಿ ಇದೆ.
ಸಾರ್ವಜನಿಕ ಶೌಚಾಲಯದ ಕೊರತೆ
ಇಲ್ಲಿ ಸಾರ್ವಜನಿಕ ಶೌಚಾಲಯವೂ ಇಲ್ಲ. ಕುಡಿಯುವ ನೀರಿನ ವ್ಯವಸ್ಥೆಯ ಕೊರತೆ ಈಗ ಇರುವ ಬಸ್ ತಂಗುದಾಣದಲ್ಲಿ ಕಂಡು ಬಂದಿದ್ದು ನಿಲ್ದಾಣದ ಒಂದು ಪಾರ್ಶ್ವದಲ್ಲಿ ಬೇಸಗೆ ಹಾಗೂ ಮಳೆಗಾಲದಲ್ಲಿ ಬಸ್ ಕಾಯಲು ಸೂಕ್ತ ವ್ಯವಸ್ಥೆಯಿಲ್ಲದೇ ಬ್ಯಾಂಕ್ ಬಳಿ ಕಾದು ನಿಲ್ಲಬೇಕಾದ ಅನಿವಾರ್ಯತೆ ಇದೆ.
ಸೂಕ್ತ ನಿಲ್ದಾಣ ಅಗತ್ಯ
ಸುಮಾರು ಇಪ್ಪತ್ತು ಸಾವಿರ ಜನಸಂಖ್ಯೆ ಹೊಂದಿರುವ ಕೋಟೇಶ್ವರದಲ್ಲಿ ಸಮರ್ಪಕ ಬಸ್ ನಿಲ್ದಾಣ ಇಲ್ಲದಿರುವುದು ಪ್ರಯಾಣಿಕರ ಪಾಲಿಗೆ ಕಿರಿಕಿರಿ ಉಂಟುಮಾಡಿದೆ. ಬಹೋಪಯೋಗಿ ಬಸ್ ನಿಲ್ದಾಣ ನಿರ್ಮಾಣದ ಬಗ್ಗೆ ಗ್ರಾಮಸ್ಥರು ಸಂಬಂಧಪಟ್ಟವರನ್ನು ಆಗ್ರಹಿಸಿದ್ದಾರೆ.
ಪ್ರತ್ಯೇಕ ಸ್ಥಳವಿಲ್ಲ
ಕೋಟೇಶ್ವರದಲ್ಲಿ ಪ್ರತ್ಯೇಕ ಬಸ್ ತಂಗುದಾಣ ನಿರ್ಮಿಸಲು ಸ್ಥಳಾವಕಾಶವಿಲ್ಲ . ಇರುವ ವ್ಯವಸ್ಥೆ ಬಳಸಿ ವಿಸ್ತರಿಸಿ ಬಸ್ ನಿಲ್ದಾಣ ನಿರ್ಮಿಸಲಾಗಿದೆ. ಇದಕ್ಕೆ ಪೂರಕವಾಗಿ ಗ್ರಾ. ಪಂ. ಬಳಿ ಬಸ್ ತಂಗುದಾಣ ನಿರ್ಮಿಸುವ ಬಗ್ಗೆ ತೀರ್ಮಾನವಾಗಿದ್ದರೂ ಕಾನೂನಿನ ಚೌಕಟ್ಟಿನಲ್ಲಿ ಅದು ಕಷ್ಟಸಾಧ್ಯವಾಗಿದ್ದು ಇರುವ ವ್ಯವಸ್ಥೆಯಲ್ಲೇ ಅಚ್ಚುಕಟ್ಟಾಗಿ ಪ್ರಯಾಣಿಕರ ಬೇಡಿಕೆಗೆ ಅನುಸಾರವಾಗಿ ಸೌಕರ್ಯ ಒದಗಿಸುವ ಪ್ರಯತ್ನ ಮಾಡಲಾಗುವುದು.
-ತೇಜಪ್ಪ ಕುಲಾಲ್, ಪಿಡಿಒ, ಕೋಟೇಶ್ವರ ಗ್ರಾ.ಪಂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.