ಖಂಬದಕೋಣೆ: ಕ್ವಾರಂಟೈನ್ ನಿರ್ವಹಣೆಗೆ ಸ್ಥಳೀಯರ ಸಹಕಾರ
Team Udayavani, May 21, 2020, 5:15 AM IST
ಉಪ್ಪುಂದ: ವಿವಿಧೆಡೆ ಕ್ವಾರಂಟೈನ್ ಕೇಂದ್ರಗಳ ನಿರ್ವಹಣೆಯಲ್ಲಿ ದೋಷದ ಕುರಿತು ಕೇಳಿ ಬರುತ್ತಿದ್ದಂತೆಯೇ ಖಂಬದಕೋಣೆ ಪರಿಸರದಲ್ಲಿ ಕ್ವಾರಂಟೈನ್ ಕೇಂದ್ರ ನಿರ್ವಹಣೆಗೆ ಸ್ಥಳೀಯರು ಸಾಥ್ ನೀಡಿ ವ್ಯವಸ್ಥೆಗೆ ಸಹಾಯ ಮಾಡಿದ್ದಾರೆ.
ಮೇ 13 ರಿಂದ ಇಲ್ಲಿ ಹೊರರಾಜ್ಯಗಳಿಂದ ಆಗಮಿಸಿದ ಮಕ್ಕಳು, ಮಹಿಳೆಯರು ಸಹಿತ 83 ಮಂದಿಗೆ ಕ್ವಾರಂಟೈನ್ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. 24 ಗಂಟೆ ಉತ್ತಮ ನೀರಿನ ವ್ಯವಸ್ಥೆ ಇದೆ. ಶ್ರೀ ಕ್ಷೇತ್ರ ಕೊಲ್ಲೂರಿನಿಂದ ಬೆಳಗ್ಗೆ ಉಪಾಹಾರ, ಮಧ್ಯಾಹ್ನ ಮತ್ತು ರಾತ್ರಿ ಉಚಿತವಾಗಿ ಊಟದ ವ್ಯವಸ್ಥೆ ಮಾಡಲಾಗಿದೆ.
ಹೆಸರು ಹೇಳಲು ಇಷ್ಟಪಡದ ನಾಯ್ಕನಕಟ್ಟೆ ಗೆಳೆಯರು ಒಂದಾಗಿ ಪ್ರತಿದಿನ ಬೆಳಗ್ಗೆ 8 ಗಂಟೆಗೆ ಇಡ್ಲಿ ಚಟ್ನಿ ಅಥವಾ ಉಪ್ಪಿಟ್ಟು ಕೇಸರಿಬಾತ್ ಮತ್ತು ಅಪರಾಹ್ನ 3 ಗಂಟೆಗೆ ಟೀ ಜತೆ ಬೋಂಡಾ/ ವಡೆ ವಿತರಿಸುತ್ತಾರೆ. ದಾನಿಗಳೊಬ್ಬರು ಮಧ್ಯಾಹ್ನ ಊಟದ ಸಮಯದಲ್ಲಿ ಪ್ರತಿದಿನ ಸಿಹಿ ಬಡಿಸುತ್ತಾರೆ.
ಮಕ್ಕಳಿಗೆ ಮತ್ತು ಅಗತ್ಯ ಇರುವವರಿಗೆ ಬಿಸಿನೀರು/ ಹಾಲು ಒದಗಿಸುತ್ತಾರೆ. ಮುಂಬಯಿ ಉದ್ಯಮಿ ಉಪ್ಪು³ಂದ ನಿವಾಸಿಯೊಬ್ಬರು ಈ ಭಾಗದ ಕ್ವಾರಂಟೈನ್ ಕೇಂದ್ರಗಳಿಗೆ ಶುದ್ಧೀಕರಿಸಿದ ನೀರಿನ ಬಾಟಲಿ ವಿತರಿಸಿದ್ದಾರೆ. ಪೊಲೀಸ್, ಇಲಾಖಾ ಅಧಿಕಾರಿಗಳ ಮೇಲ್ವಿಚಾರಣೆ ನಡೆಯುತ್ತಿದೆ. ಎಲ್ಲರ ಕನಿಷ್ಠ ಬೇಡಿಕೆಗೆ ಸ್ಪಂದಿಸಲು ಗೆಳೆಯರ ಬಳಗ ಸದಾ ಸಿದ್ಧವಿದೆ ಎಂದು ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಸುನಿಲ್ ನಾಯ್ಕನಕಟ್ಟೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
Udupi: ವಿಶ್ವಶಾಂತಿಗೆ ಭಗವದ್ಗೀತೆಯೇ ಮೂಲಾಧಾರ: ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.