ವಡ್ಡರ್ಸೆ: ಎಂ.ಜಿ. ಕಾಲನಿ ಪ್ರದೇಶಕ್ಕೆ ತಹಶೀಲ್ದಾರ್, ಠಾಣಾಧಿಕಾರಿಗಳ ಭೇಟಿ
Team Udayavani, May 26, 2020, 5:01 AM IST
ಕೋಟ: ಬ್ರಹ್ಮಾವರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್‌ಗೆ ಕೋವಿಡ್-19 ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಅವರು ವಾಸವಿದ್ದ ಕೋಟ ಸಮೀಪ ವಡ್ಡರ್ಸೆ ಗ್ರಾ.ಪಂ. ವ್ಯಾಪ್ತಿಯ ಯಾಳಕ್ಲು ಹಾಗೂ ಎಂಜಿ. ಕಾಲನಿ ಪ್ರದೇಶವನ್ನು ಕಂಟೈನ್ಮೆಂಟ್ ಝೋನ್‌ಗೆ ತಹಶೀಲ್ದಾರರು, ಠಾಣಾಧಿಕಾರಿಗಳು ಭೇಟಿ ನೀಡಿದರು.
ಈ ಭಾಗದ ಹಲವು ಮನೆಗಳಿಗೆ ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಗೋರಯ್ಯ ಹಾಗೂ ಕೋಟ ಠಾಣಾಧಿಕಾರಿ ನಿತ್ಯಾನಂದ ಗೌಡ ಸೋಮವಾರ ಬೆಳಗ್ಗೆ ಭೇಟಿ ನೀಡಿ ಗ್ರಾಮಸ್ಥರಿಗೆ ಮುನ್ನೆಚ್ಚರಿಕೆ ಕುರಿತು ತಿಳಿಸಿದರು ಹಾಗೂ ಆರೋಗ್ಯದ ಬಗ್ಗೆ ವಹಿಸುವಂತೆ ಮಾಹಿತಿ ನೀಡಿದರು.
ಸ್ಥಳೀಯ ವಡ್ಡರ್ಸೆ ಗ್ರಾ.ಪಂ. ನೇತೃತ್ವದಲ್ಲಿ ನಿಯೋಜಿತಗೊಂಡ ಪ್ರತಿನಿಧಿಗಳು ಅಗತ್ಯ ಸಾಮಗ್ರಿಗಳನ್ನು ಪೂರೈಕೆ ಮಾಡು ತ್ತಿದ್ದು, ಗ್ರಾ.ಪಂ. ಅಧ್ಯಕ್ಷೆ ಹೇಮಾ, ಪಿ.ಡಿ.ಒ. ಉಮೇಶ್, ಗ್ರಾ.ಪಂ. ಸದಸ್ಯ ಕೋಟಿ ಪೂಜಾರಿ ಹಾಗೂ ಇನ್ನಿತರ ಸದಸ್ಯರ ನೇತೃತ್ವದಲ್ಲಿ ಸ್ಥಳೀಯರ ಕುಂದು ಕೊರತೆಗಳನ್ನು ಆಲಿಸಲಾಗುತ್ತಿದೆ. ಆಶಾ, ಆರೋಗ್ಯ ಕಾರ್ಯಕರ್ತೆಯರು ಸ್ಥಳೀಯ ಮನೆಗಳಿಗೆ ಭೇಟಿ ನೀಡುತ್ತಿದ್ದಾರೆ.
ಹಾಲು ಪೂರೈಕೆ ಸ್ಥಗಿತ
ಈ ಭಾಗದ ಸುಮಾರು 35ಕ್ಕೂ ಹೆಚ್ಚು ಮನೆಗಳಿಂದ 150 ಲೀಟರ್ ಹಾಲನ್ನು ಸ್ಥಳೀಯ ಮಧುವನ ಹಾಲು ಉತ್ಪಾದಕರ ಸಂಘಕ್ಕೆ ಪೂರೈಕೆ ಮಾಡಲಾಗುತಿತ್ತು. ಇದೀಗ ಲಾಕ್‌ಡೌನ್ ಆಗಿರುವುದರಿಂದ ಹಾಲು ಪೂರೈಕೆ ಸ್ಥಗಿತಗೊಂಡಿದ್ದು, ಸ್ಥಳೀಯ ನಿವಾಸಿಗಳಿಗೆ ನೀಡುತ್ತಿದ್ದಾರೆ.
ಬಫರ್ ಝೋನ್ ಕಡಿತಕ್ಕೆ ಮನವಿ
ಎಂ.ಜಿ. ಕಾಲನಿ ಯಾಳಕ್ಲು ಪ್ರದೇಶ ದಿಂದ ಹೊರಗಡೆ ಇದೆ. ಆದರೂ ಇದನ್ನು ಬಫರ್ ಝೋನ್ ಎಂದು ಘೋಷಿಸಿ ಲಾಕ್ ಮಾಡಲಾಗಿದೆ. ಇದರಿಂದಾಗಿ ಕಾಲನಿಯ 150ಕ್ಕೂ ಹೆಚ್ಚು ಮನೆಗಳ ಕೂಲಿ ಕಾರ್ಮಿಕರು, ದೈನಂದಿನ ದುಡಿಮೆಯನ್ನು ನಂಬಿ ಬದುಕುವ ಬಡ ವರ್ಗದವರಿಗೆ ಸಮಸ್ಯೆಯಾಗಿದೆ. ಆದ್ದರಿಂದ ಎಂ.ಜಿ. ಕಾಲನಿಯಿಂದ ಯಾಳಕ್ಲು ಸಂಪರ್ಕಿಸುವ ರಸ್ತೆಯನ್ನು ಮಾತ್ರ ಲಾಕ್ ಮಾಡಬೇಕು ಎಂ.ಜಿ. ಕಾಲನಿಗೆ ವಿನಾಯಿತಿ ನೀಡಬೇಕು ಎಂದು ಸ್ಥಳೀಯುರು ತಹಶೀಲ್ದಾರರಿಗೆ ಮನವಿ ಮಾಡಿದರು.
ಸೆಲೂನ್‌ಗಳು ಬಂದ್
ಸ್ಥಳೀಯ ಪ್ರದೇಶದಲ್ಲಿ ಕೋವಿಡ್-19 ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಕೋಟ ಹೋಬಳಿಯ ಕೋಟ, ಸಾಲಿಗ್ರಾಮ, ಸಾಸ್ತಾನ, ಸಾೖಬ್ರಕಟ್ಟೆ, ಕೊಕ್ಕರ್ಣೆ, ಬ್ರಹ್ಮಾವರ ಸಹಿತ ಹಲವು ಕಡೆಗಳ ಸೆಲೂನ್ ಶಾಪ್‌ಗ್ಳು ಸೋಮವಾರದಿಂದ ಕಾರ್ಯ ಸ್ಥಗಿತಗೊಳಿಸಿದ್ದು ಮೇ 31ರ ತನಕ ಅಂಗಡಿಯನ್ನು ತೆರೆಯದಿರಲು ಕೋಟ ವಲಯ ಸವಿತಾ ಸಮಾಜ ಕರೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್
Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.