ಹಿರಿಯ ಯಕ್ಷಗಾನ ಕಲಾವಿದ ಮಜ್ಜಿಗೆಬೈಲು ಆನಂದ ಶೆಟ್ಟಿ ಇನ್ನಿಲ್ಲ
Team Udayavani, Jul 10, 2022, 10:48 PM IST
ಕುಂದಾಪುರ: ಬಡಗುತಿಟ್ಟಿನ ಹಿರಿಯ ವೇಷಧಾರಿಗಳಾದ ಮಜ್ಜಿಗೆಬೈಲು ಆನಂದ ಶೆಟ್ಟಿ(78) ಇಂದು (10 ಜುಲೈ ) ಯಡಾಡಿಯ ಸ್ವಗೃಹದಲ್ಲಿ ರಾತ್ರಿ ನಿಧನ ಹೊಂದಿದರು.
ಪರಂಪರೆಯ ಪ್ರಾತಿನಿಧಿಕ ಪುರುಷ ಮತ್ತು ಎರಡನೆ ವೇಷಧಾರಿಯಾಗಿ ಕಲಾ ರಸಿಕರ ಮೆಚ್ಚುಗೆಗೆ ಪಾತ್ರರಾಗಿದ್ದ ಅವರು ಪೆರ್ಡೂರು, ಮಾರಣಕಟ್ಟೆ, ಸಾಲಿಗ್ರಾಮ, ಗೋಳಿಗರಡಿ ಮತ್ತು ದೀರ್ಘ ಕಾಲ ಮಂದಾರ್ತಿ ಮೇಳದಲ್ಲಿ ನಾಲ್ಕು ದಶಕಗಳ ಕಾಲ ಕಲಾಸೇವೆಗೈದ ಸಜ್ಜನ ಕಲಾವಿದರಾಗಿದ್ದರು.
ಯಕ್ಷಗಾನ ಕಲಾರಂಗ ಸಹಿತ ಹಲವಾರು ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿದ್ದವು. ಪತ್ನಿ, ಮೂವರು ಪುತ್ರಿಯರನ್ನು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
ಆನಂದ ಶೆಟ್ಟರು ಪಾರಂಪರಿಕ ವರ್ಚಸ್ಸಿನ ಪ್ರಾತಿನಿಧಿಕರಾಗಿ ನಡುಬಡಗಿನ ವೇಷವೈವಿಧ್ಯದಲ್ಲಿ ತನ್ನದೇ ಛಾಪು ಮೂಡಿಸಿ ಸಮಕಾಲಿನ ರಂಗಭೂಮಿಗೆ ಒಗ್ಗಿಕೊಳ್ಳದೆ ಸನಾತನ ಕಲಾಸಾರವನ್ನೇ ಗಂಭೀರವಾಗಿ ಹೀರಿಕೊಂಡ ಶಿಷ್ಟ ಕಲಾವಿದರು.ಡೇರೆ ಮೇಳಗಳ ಹೊಸ ಪ್ರಸಂಗಗಳು ಯಕ್ಷಗಾನಕ್ಕೆ ಲಗ್ಗೆ ಇಟ್ಟಾಗಲೂ ತನ್ನತನದೊಂದಿಗೆ ರಾಜಿ ಮಾಡಿಕೊಳ್ಳದೆ ಮುಂದುವರಿದವರು.
ಇದನ್ನೂ ಓದಿ : ಶ್ರೀರಂಗಪಟ್ಟಣ : ಕಾರು – ಬೈಕ್ ನಡುವೆ ಭೀಕರ ಅಪಘಾತ : ಓರ್ವ ಸಾವು, ಇನ್ನೋರ್ವನ ಸ್ಥಿತಿ ಗಂಭೀರ
ಗತ್ತು ಗಾಂಭೀರ್ಯದ ನಡೆ ಪ್ರೌಢ ಸಾಹಿತ್ಯ ಯಕ್ಷಗಾನೀಯ ಸೊಗಡು ಮೈವೆತ್ತ ಅವರ ವೇಷಗಳಲ್ಲಿ ನಡುತಿಟ್ಟಿನ ಎರಡು ಶೈಲಿಗಳನ್ನು ಗುರುತಿಸಬಹುದಾಗಿದೆ. ಕರ್ಣ, ಜಾಂಬವ, ಭೀಷ್ಮ, ವಿಭೀಷಣ ಮುಂತಾದ ಎರಡನೇ ವೇಷಗಳಲ್ಲಿ ಹಾರಾಡಿ ಶೈಲಿಯ ಛಾಪು , ಸುಧನ್ವ, ಅರ್ಜುನ, ತಾಮ್ರಧ್ವಜ, ಪುಷ್ಕಳ, ದೇವವ್ರತ ಮುಂತಾದ ಪುರುಷ ವೇಷಗಳಲ್ಲಿ ಮಟಪಾಡಿ ಶೈಲಿಯ ಕಿರುಹೆಜ್ಜೆಯನ್ನು ಗುರುತಿಸಬಹುದಾಗಿದೆ.
ಬಹುಕಾಲ ಮೊಳಹಳ್ಳಿ ಹೆರಿಯ ನಾಯ್ಕರೊಂದಿಗಿನ ಅವರ ಪುರುಷವೇಷ ಮಂದಾರ್ತಿ ಮೇಳದ ರಂಗಸ್ಥಳವನ್ನು ತುಂಬಿಸಿತ್ತು.
ಸುಮಾರು 50 ವರ್ಷ ಬಡಗುತಿಟ್ಟಿನ ರಂಗಸ್ಥಳವನ್ನು ಶ್ರೀಮಂತಗೊಳಿಸಿದ ಶೆಟ್ಟರು ಅರ್ಜುನ, ಪುಷ್ಕಳ, ಸುಧನ್ವ ಮುಂತಾದ ಪುರುಷವೇಷಗಳಿಗೆ ಜೀವತುಂಬಿ ತಿರುಗಾಟದ ಕೊನೆಯಲ್ಲಿ ಹಲವು ವರ್ಷ ಮಂದಾರ್ತಿ ಮೇಳದಲ್ಲಿ ಎರಡನೇ ವೇಷದಾರಿಯಾಗಿ ಬಡ್ತಿ ಹೊಂದಿ ಕರ್ಣ, ಜಾಂಬವ, ಮಾರ್ತಾಂಡತೇಜ ಮುಂತಾದ ಪ್ರಧಾನ ವೇಷಗಳಿಗೆ ನ್ಯಾಯ ಒದಗಿಸಿದ್ದರು..ಹಾರಾಡಿ ರಾಮ ಗಾಣಿಗ ಪ್ರಶಸ್ತಿ, ಉಡುಪಿ ಯಕ್ಷಗಾನ ಕಲಾರಂಗ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿ ಸನ್ಮಾನಗಳು ಗಳು ಸಂದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
Udupi: ವಿಶ್ವಶಾಂತಿಗೆ ಭಗವದ್ಗೀತೆಯೇ ಮೂಲಾಧಾರ: ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.