ತಾಯಿ ಮಕ್ಕಳ ಆಸ್ಪತ್ರೆಗೆ ವೈದ್ಯರ ಮಂಜೂರು ಕ್ಷಿಪ್ರವಾಗಲಿ 

Team Udayavani, Aug 23, 2021, 3:00 AM IST

ತಾಯಿ ಮಕ್ಕಳ ಆಸ್ಪತ್ರೆಗೆ ವೈದ್ಯರ ಮಂಜೂರು ಕ್ಷಿಪ್ರವಾಗಲಿ 

ಕುಂದಾಪುರದ ಬಹುವರ್ಷಗಳ ಬೇಡಿಕೆಯಾದ ತಾಯಿ ಮಕ್ಕಳ ಆಸ್ಪತ್ರೆ ಕೊನೆಗೂ ಮಂಜೂರಾಗಿದೆ. ಈ ಮೂಲಕ ಹೆರಿಗೆ ಆಸ್ಪತ್ರೆ ಇದ್ದ ಕಟ್ಟಡ ಇನ್ನು ಮುಂದೆ ಪೂರ್ಣ ಪ್ರಮಾಣದಲ್ಲಿ ತಾಯಿ ಮಕ್ಕಳ ಆಸ್ಪತ್ರೆಯಾಗಿ ರೂಪುಗೊಳ್ಳಲಿದೆ. ಆದೇಶ ದಾಖಲೆಗಷ್ಟೇ ಸೀಮಿತವಾಗುವ ಬದಲು ವೈದ್ಯರ ನೇಮಕ ಕ್ಷಿಪ್ರವಾಗಿ ಆಗಬೇಕಿದೆ.

ಕುಂದಾಪುರದಲ್ಲಿ ಲಕ್ಷ್ಮೀ ಸೋಮ ಬಂಗೇರ ನೆನಪಿನಲ್ಲಿ ಜಿ. ಶಂಕರ್‌ ಅವರು 3 ಕೋ.ರೂ. ವೆಚ್ಚದಲ್ಲಿ 100 ಹಾಸಿಗೆಗಳ ಹೆರಿಗೆ ಆಸ್ಪತ್ರೆ ಕಟ್ಟಡ ನಿರ್ಮಿಸಿಕೊಟ್ಟಿದ್ದಾರೆ. ತಾಯಿ ಮಕ್ಕಳ ಆಸ್ಪತ್ರೆ ಇದರಲ್ಲೇ ನಡೆಸಬಹುದಾಗಿದ್ದು ಮಾನವ ಸಂಪನ್ಮೂಲ ಒದಗಿಸಿಕೊಡಬೇಕೆಂದು 2019ರಲ್ಲಿ ಮನವಿ ಸಲ್ಲಿಸಲಾಗಿತ್ತು. ಅದರಂತೆ ಸರಕಾರ ತಾಯಿ ಮರಣ, ಶಿಶು ಮರಣ ಕಡಿಮೆಗೊಳಿಸುವ ಸಲುವಾಗಿ ಕುಂದಾಪುರಕ್ಕೆ ತಾಯಿ ಮಕ್ಕಳ ಆಸ್ಪತ್ರೆ ಮಂಜೂರು ಮಾಡಿದೆ.

ರಾಜ್ಯದ 15 ಆಸ್ಪತ್ರೆಗಳಿಗೆ 339 ಹುದ್ದೆಗಳನ್ನು ಮಂಜೂರು ಮಾಡಲಾಗಿದೆ. ಈ ಪೈಕಿ ಶುಶ್ರೂಷಕಿಯರ ಹುದ್ದೆಗೆ 82 ಹುದ್ದೆಗಳು ಗುತ್ತಿಗೆ ಆಧಾರದಲ್ಲಿ, ಉಳಿದ 81 ಹುದ್ದೆಗಳು ನೇರ ನೇಮಕಾತಿಯಲ್ಲಿ, ಕಿರಿಯ ಶುಶ್ರೂಷಕರು, ಫಾರ್ಮಾಸಿಸ್ಟ್‌, ಪ್ರಯೋಗಶಾಲಾ ತಂತ್ರಜ್ಞ , ಡಾಟಾ ಎಂಟ್ರಿ ಆಪರೇಟರ್‌, ಡಿ ಗ್ರೂಪ್‌ನ 118 ಹುದ್ದೆಗಳನ್ನು ಹೊರಗುತ್ತಿಗೆ ಆಧಾರದಲ್ಲಿ, ಸ್ವೀಪರ್‌, ಗಾರ್ಡ್‌ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಿಸಬೇಕಾಗುತ್ತದೆ. ಕುಂದಾಪುರಕ್ಕೆ  ಒಟ್ಟು 16  ಸಿಬಂದಿ ನೇಮಕವಾಗಬೇಕಿದೆ. ಅರಿವಳಿಕೆ ತಜ್ಞ  1, ರೇಡಿಯಾಲಜಿಸ್ಟ್‌ 1, ಶುಶ್ರೂಷಕರು 6, ಶುಶ್ರೂಶಕಿ ಕಿರಿಯ  1, ಕಿರಿಯ ಪ್ರಯೋಗಶಾಲಾ ತಂತ್ರಜ್ಞ 1, ದ್ವಿತೀಯ ದರ್ಜೆ ಸಹಾಯಕ 2, ಡಾಟಾ ಎಂಟ್ರಿ ಆಪರೇಟರ್‌ 1, ಗ್ರೂಪ್‌ ಡಿ 3 ಹುದ್ದೆ ಮಂಜೂರಾಗಿದೆ.

ಕುಂದಾಪುರದ ಆಸ್ಪತ್ರೆಗೆ ಅವಶ್ಯವಿರುವ ವ್ಯವಸ್ಥೆಗಳೆಲ್ಲ ಪೂರ್ಣ ಪ್ರಮಾಣದಲ್ಲಿ ಆದಲ್ಲಿ ಜಿಲ್ಲಾ ಕೇಂದ್ರದ ಆಸ್ಪತ್ರೆಯ ಒತ್ತಡವೂ ಕಡಿಮೆಯಾಗಲಿದೆ. ಗ್ರಾಮಾಂತರ ಪ್ರದೇಶಕ್ಕೆ ಇದು ಕೇಂದ್ರ ಸ್ಥಾನದಲ್ಲಿಯೂ ಇರುವುದರಿಂದ ತುರ್ತು ಸಂದರ್ಭಗಳಲ್ಲಿ ದೂರದ ಪ್ರದೇಶಗಳಿಗೆ ಪ್ರಯಾಣಿಸುವಾಗ ಆಗುವ ವಿಳಂಬವೂ ತಪ್ಪಲಿದೆ. ಸಕಾಲದಲ್ಲಿ ಉತ್ತಮ ಚಿಕಿತ್ಸೆ ದೊರೆಯಲು ಸಾಧ್ಯವಾಗಲಿದೆ.

ಕುಂದಾಪುರ ಸರಕಾರಿ ಆಸ್ಪತ್ರೆ ಕೊರೊನಾ ಚಿಕಿತ್ಸೆಯಲ್ಲಿ ರಾಜ್ಯದಲ್ಲೇ ಅತ್ಯುತ್ತಮ ಚಿಕಿತ್ಸೆಗಾಗಿ ಹೆಸರು ಪಡೆದಿತ್ತು. ಜಿಲ್ಲಾಸ್ಪತ್ರೆ ಹೊರತಾಗಿ ಉಪವಿಭಾಗ ಆಸ್ಪತ್ರೆಯೊಂದು ಪ್ರತ್ಯೇಕವಾಗಿ ಕೊರೊನಾ ಚಿಕಿತ್ಸೆಗೆ ತೆರೆದುಕೊಂಡಿದ್ದು ಇಲ್ಲಿಯೇ. ದಾಖಲೆ  ಸಂಖ್ಯೆಯಲ್ಲಿ ಹೆರಿಗೆ ಆಗಿದ್ದು ಭಟ್ಕಳ, ಬೈಂದೂರು, ಕುಂದಾಪುರ ತಾಲೂಕಿನ ಮಂದಿ ಇಲ್ಲಿಗೆ ಆಗಮಿಸಿದ್ದರು. ಸೌಕರ್ಯ ಇನ್ನಷ್ಟು ಹೆಚ್ಚಿದಲ್ಲಿ ದೂರದ ಪ್ರದೇಶದ ಜನರೂ ಇಲ್ಲಿಗೆ ಆಗಮಿಸಿ ಚಿಕಿತ್ಸೆ ಪಡೆಯುವ ಸಾಧ್ಯತೆಗಲು ಹೆಚ್ಚು.

ಕುಂದಾಪುರದ ಆಸ್ಪತ್ರೆಯಲ್ಲಿ ಈಗಾಗಲೇ ಆಕ್ಸಿಜನ್‌ ಪ್ಲಾಂಟ್‌ ಕೂಡ ಸಿದ್ಧವಾಗಿದ್ದು ಬೆಡ್‌ಗಳ ಸಂಖ್ಯೆ ಹೆಚ್ಚಿಸಲಾಗಿದೆ. ಪೂರ್ಣ ಪ್ರಮಾಣದಲ್ಲಿ ತಾಯಿ ಮಕ್ಕಳ ಆಸ್ಪತ್ರೆ ಪ್ರಾರಂಭವಾದರೆ ಬಡವರಿಗೆ ಚಿಕಿತ್ಸೆಯ ಬಾಗಿಲು ತೆರೆದಂತೆ. ಆದ್ದರಿಂದ ನೇಮಕಾತಿ ಪ್ರಕ್ರಿಯೆ ಕ್ಷಿಪ್ರವಾಗಿ ನಡೆದರೆ ಕೊರೊನಾದಂತಹ ಸಂಕಷ್ಟದ ಸಮಯ ಎದುರಾದರೂ ಅದನ್ನು ಎದುರಿಸಲು ಸಾಕಷ್ಟು ಸಹಕಾರಿಯಾಗಲಿದೆ. ಆದುದರಿಂದ ಈ ಬಗ್ಗೆ ಸಂಬಂಧಿಸಿದವರು ತತ್‌ಕ್ಷಣ ಗಮನ ಹರಿಸುವುದು ಉತ್ತಮ.

-ಸಂ.

ಟಾಪ್ ನ್ಯೂಸ್

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

Amparu: ಬೈಕ್‌ ಸ್ಕಿಡ್‌; ಸವಾರ ಚಿಕಿತ್ಸೆಗೆ ಸ್ಪಂದಿಸದೆ ಸಾವು

Amparu: ಬೈಕ್‌ ಸ್ಕಿಡ್‌; ಸವಾರ ಚಿಕಿತ್ಸೆಗೆ ಸ್ಪಂದಿಸದೆ ಸಾವು

6(1

Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ

5

Kundapura: ಬಸ್‌ ತಂಗುದಾಣಗಳೇ ಮಾಯ; ಜನರು ಅಯೋಮಯ!

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

15-uv-fusion

Cleanliness: ಮನೆ ಮನೆಯಿಂದ ದೇಶವೇ ಸ್ವಚ್ಚ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.