ಎಲ್ಲ ಆಶ್ವಾಸನೆ ಈಡೇರಿಕೆಗೆ ಬದ್ಧ: ಸಂಸದ ಬಿ.ವೈ. ರಾಘವೇಂದ್ರ
Team Udayavani, Jun 1, 2019, 10:47 AM IST
ಕುಂದಾಪುರ : ಶಿವಮೊಗ್ಗದ 8 ವಿಧಾನಸಭಾ ಕ್ಷೇತ್ರಗಳ ಪೈಕಿ ಬೈಂದೂರಲ್ಲಿ 1 ಲಕ್ಷಕ್ಕೂ ಮಿಕ್ಕಿ ಮತ ಸಿಕ್ಕಿದ್ದು, ಗರಿಷ್ಠ 72 ಸಾವಿರ ಮತಗಳ ಅಂತರದ ಮುನ್ನಡೆಯೂ ಸಿಕ್ಕಿದೆ. ಕ್ಷೇತ್ರದಲ್ಲಿ ಆಗಬೇಕಿರುವ ವಿಮಾನ ನಿಲ್ದಾಣ ಸಹಿತ ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ಮತ್ತು ಸಮಸ್ಯೆಗಳ ಕುರಿತು ಶಾಸಕರೊಂದಿಗೆ ಚರ್ಚೆ ನಡೆಸಿ ಅಗತ್ಯ ಕ್ರಮಕೈಗೊಳ್ಳಲಾಗುವುದು. ಚುನಾವಣೆ ಸಂದರ್ಭ ನೀಡಿರುವ ಎಲ್ಲ ಆಶ್ವಾಸನೆಗಳನ್ನು ಈಡೇರಿಸಲು ಬದ್ಧ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಅವರು ಶುಕ್ರವಾರ ಬೈಂದೂರು ವಿಧಾನಸಭಾ ಕ್ಷೇತ್ರಾದ್ಯಂತ ವಿವಿಧೆಡೆಗಳಲ್ಲಿ ನಡೆದ ಬಿಜೆಪಿ ವಿಜಯೋತ್ಸವ ಯಾತ್ರೆಯಲ್ಲಿ ಮಾತನಾಡಿದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅಪೂರ್ವ ಬೆಂಬಲ ವ್ಯಕ್ತವಾಗಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಕೇಂದ್ರದಲ್ಲಿ ಮತ್ತೂಮ್ಮೆ ಅಧಿಕಾರಕ್ಕೇರಲು ಸಹಾಯವಾಗಿದೆ. ನರೇಂದ್ರ ಮೋದಿಯವರು ಪ್ರಧಾನಿಯಾಗಬೇಕು ಎನ್ನುವ ದೇಶದ ಬಹುತೇಕ ಜನರ ಆಸೆಯೂ ಕೈಗೂಡಿದ್ದು, ಪಕ್ಷದ ಮೇಲಿಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳುವ ಪ್ರಯತ್ನ ನಡೆಸಲಾಗುವುದು ಎಂದು ಹೇಳಿದರು
ವಿಜಯೋತ್ಸವ ಯಾತ್ರೆಯು ಕೊಲ್ಲೂರಿನಿಂದ ಆರಂಭಗೊಂಡು, ಗೋಳಿಹೊಳೆ, ಬೈಂದೂರು, ಉಪ್ಪುಂದ, ಶಿರೂರು, ಬಿಜೂರು, ಕೆರ್ಗಾಲು, ಕಿರಿಮಂಜೇಶ್ವರ ಅರೆಹೊಳೆ ಕ್ರಾಸ್, ಮರವಂತೆ, ಗುಜ್ಜಾಡಿ, ತಲ್ಲೂರು, ನೇರಳಕಟ್ಟೆ, ಅಂಪಾರು, ಶಂಕರನಾರಾಯಣ, ಸಿದ್ದಾಪುರದ ಮೂಲಕ ಸಾಗಿ, ನೆಂಪುವಿನಲ್ಲಿ ಸಮಾಪನಗೊಂಡಿತು.
ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ಶಿವಮೊಗ್ಗ ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಗೌಡ, ಕ್ಷೇತ್ರಾಧ್ಯಕ್ಷ ಸದಾನಂದ ಉಪ್ಪಿನಕುದ್ರು, ಪ್ರಧಾನ ಕಾರ್ಯದರ್ಶಿಗಳಾದ ಬಾಲಚಂದ್ರ ಭಟ್, ದೀಪಕ್ ಕುಮಾರ್ ಶೆಟ್ಟಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಪ್ರಿಯದರ್ಶಿನಿ ದೇವಾಡಿಗ, ರಾಜ್ಯ ರೈತಮೋರ್ಚಾ ಉಪಾಧ್ಯಕ್ಷ ದತ್ತಾತ್ರೇಯ, ಜಿ.ಪಂ. ಸದಸ್ಯರು ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಅಂಬರ್‌ಗ್ರೀಸ್ ಮಾರಾಟ ಜಾಲ: ಅಧಿಕಾರಿಗಳಿಗೆ ಹಲ್ಲೆಗೈದ ನಾಲ್ವರ ಬಂಧನ
Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!
Shiroor: ಡಿವೈಡರ್‌ಗೆ ಕಾರು ಢಿಕ್ಕಿ
Kundapura: ಕಸದಿಂದಲೇ ಕಲಾಕೃತಿ; ಕಾಲ್ತೋಡಿನಲ್ಲೊಂದು ಸುಂದರ ಅಂಗನವಾಡಿ
ಹೆಬ್ಬಾಗಿಲಿನಲ್ಲಿ ಆರಂಭವಾದ ಶಾಲೆ ಇಂದು ಈ ಊರ ಮಕ್ಕಳ ಪಾಲಿನ ಶಿಕ್ಷಣದ ಹೆಬ್ಬಾಗಿಲೇ ಆಗಿದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.