“ಜವಾಬ್ದಾರಿಯುತ ನಾಗರಿಕರಾಗಿ ತಪ್ಪದೇ ಮತದಾನ ಮಾಡಿ’

Team Udayavani, Apr 18, 2019, 6:30 AM IST

matadana-madi

ಕುಂದಾಪುರ: ಭಾರತೀಯರೆಲ್ಲರೂ ಮುಕ್ತವಾಗಿ ಮತದಾನದಲ್ಲಿ ಭಾಗ ವಹಿಸುವಂತೆ ಚುನಾವಣ ಆಯೋಗ ಎಲ್ಲ ವ್ಯವಸ್ಥೆ ಮಾಡಿದೆ. ಪ್ರತಿ ಮನೆ ಮನೆಗೂ ಮತದಾರರ ಛಾಯಾಚಿತ್ರ ಇರುವ ಮತಚೀಟಿ ವಿತರಿಸಲಾಗಿದೆ.

ಗುರುತುಚೀಟಿ ಅಥವಾ ಅಗತ್ಯ ದಾಖಲೆ ತೆಗೆದುಕೊಂಡು ಹೋಗಿ ಮತಚಲಾಯಿಸಿ ಎಂದು ಕುಂದಾಪುರದ ಸಹಾಯಕ ಆಯುಕ್ತ, ಜಿಲ್ಲೆಯ ಉಪಚುನಾವಣಾಧಿಕಾರಿ ಡಾ| ಎಸ್‌. ಎಸ್‌. ಮಧುಕೇಶ್ವರ ಹೇಳಿದರು.

ಅವರು ರೋಟರಿ ಕುಂದಾಪುರ ದಕ್ಷಿಣದ ಆಶ್ರಯದಲ್ಲಿ ರೋಟರಿ ಕ್ಲಬ್‌ ಕುಂದಾಪುರ, ರೋಟರಿ ಕ್ಲಬ್‌ ಮಿಡ್‌ಟೌನ್‌, ರೋಟರಿ ಕ್ಲಬ್‌ ಸನ್‌ರೈಸ್‌, ರೋಟರಿಕ್ಲಬ್‌ ರಿವರ್‌ಸೈಡ್‌ ಸಹಯೋಗದೊಂದಿಗೆ ನಡೆದ “ಮತದಾನ ಪ್ರಕ್ರಿಯೆ ಮತ್ತು ಮತ ಚಲಾವಣೆ ಹಕ್ಕು’ ಬಗ್ಗೆ ಮಾಹಿತಿ ಸಮಾವೇಶ ದಲ್ಲಿ ಚುನಾವಣ ಪ್ರಕ್ರಿಯೆಯ ಸಂಪೂರ್ಣ ವಿವರ ನೀಡಿದರು.

ಬೆಳಗ್ಗೆ 7 ರಿಂದ ಸಂಜೆ 6ರ ತನಕ ಅವಕಾಶವಿದೆ. ಯಾವ ಕಾರಣಕ್ಕೂ ಮತ ಚಲಾಯಿಸದೇ ಇರಬೇಡಿ. ದೇಶದ ಹಿತದೃಷ್ಟಿಯಿಂದ ಪ್ರತಿಯೊಂದು ಮತ ಅಮೂಲ್ಯವಾಗಿರುತ್ತದೆ. ಮತ ಚಲಾಯಿ ಸದೇ ಪ್ರವಾಸ ಹೋಗುವ ಕೆಲಸ ಮಾಡ ಬಾರದು. ಯಾವುದೇ ಆಮಿಷಕ್ಕೆ ಬಲಿ ಬೀಳ ಬೇಡಿ. ಜವಾಬ್ದಾರಿಯುತ ನಾಗರಿಕ ರಾಗಿ ತಮ್ಮ ಹಕ್ಕಿನ ಮತ ಚಲಾಯಿಸಿ ಎಂದರು.

ಯಾವುದೇ ನೀತಿ ಸಂಹಿತೆ ಉಲ್ಲಂಘನೆ ಕಂಡುಬಂದಲ್ಲಿ ಚುನಾವಣಾಧಿಕಾರಿಗಳಿಗೆ ನೇರವಾಗಿ ಮೊಬೈಲ್‌ ಮೂಲಕ ಮಾಹಿತಿ ನೀಡುವ ಸೌಲಭ್ಯ, ಮತದಾನ ಪ್ರಕ್ರಿಯೆಯಲ್ಲಿ ಅಂಗವಿಕಲರಿಗೆ, ಅಂಧರಿಗೆ, ವೃದ್ಧರಿಗೆ ಮತಚಲಾಯಿಸಲು ಇರುವ ಅವಕಾಶ, ಸುಳ್ಳು ದೂರು ನೀಡುವುದು, ಅಕ್ರಮ ಮತದಾನಕ್ಕೆ ಪ್ರಯತ್ನ ನಡೆಸುವುದು ಮುಂತಾದ ಕ್ರಿಯೆಗಳಿಗೆ ಇರುವ ಶಿಕ್ಷೆ ಬಗ್ಗೆ ಅವರು ಮಾಹಿತಿ ನೀಡಿದರು.

ಉಪವಿಭಾಗಾಧಿಕಾರಿಗಳ ಚುನಾವಣಾ ಸಹಾಯಕ ಅಧಿಕಾರಿ ಚಂದ್ರಶೇಖರ ಶೆಟ್ಟಿ, ಮತಯಂತ್ರ, ವಿವಿಪ್ಯಾಟ್‌, ಮತ ಚಲಾವಣೆ ದಾಖಲಾಗುವ ರೀತಿ, ಅಭ್ಯರ್ಥಿ ಗಳು ಪಡೆದ ಮತಗಳ ಎಣಿಕೆ ಮುಂತಾದ ಬಗ್ಗೆ ಪ್ರಾತ್ಯಕ್ಷಿಕೆ ನಡೆಸಿದರು.

ರೋಟರಿ ಕುಂದಾಪುರ ದಕ್ಷಿಣದ ಅಧ್ಯಕ್ಷ ಜಾನ್ಸನ್‌ ಡಿ’ಆಲ್ಮೇಡಾ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕುಂದಾಪುರದ ಅಧ್ಯಕ್ಷ ಗೋಪಾಲ ಶೆಟ್ಟಿ ಉಪವಿಭಾಗಾಧಿಕಾರಿಗಳನ್ನು ಪರಿಚ ಯಿಸಿದರು. ರೋಟರಿ ಮಿಡ್‌ಟೌನ್‌ ಅಧ್ಯಕ್ಷ ಪ್ರಭಾಕರ ರಾವ್‌ ಅತಿಥಿ ಗಳನ್ನು ಗೌರವಿಸಿದರು. ರೋಟರಿ ಸನ್‌ರೈಸ್‌ ಅಧ್ಯಕ್ಷ ಅಬ್ಬುಶೇಖ್‌ ಅಭಿನಂದನ ಮಾತುಗಳನ್ನಾ ಡಿದರು. ರೋಟರಿ ದಕ್ಷಿಣದ ಕಾರ್ಯದರ್ಶಿ ರಾಮ ಪ್ರಸಾದ ಶೇಟ್‌ ಕಾರ್ಯಕ್ರಮದ ವಿವರ ನೀಡಿದರು. ರೋಟರಿ ರಿವರ್‌ಸೈಡ್‌ನ‌ ನಿಯೋಜಿತ ಅಧ್ಯಕ್ಷ ರಾಜು ಪೂಜಾರಿ ವಂದಿಸಿದರು.

ಟಾಪ್ ನ್ಯೂಸ್

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

2

Kundapura: ಒಂದು ಕರೆಗಾಗಿ 3-4 ಕಿ.ಮೀ. ನಡೆಯಬೇಕು!

Court-1

Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು

de

Kundapura: ಮಲಗಿದ್ದಲ್ಲಿಯೇ ವ್ಯಕ್ತಿ ಸಾವು

Brahmavar

Kumbhashi: ಅಪಘಾತದ ಗಾಯಾಳು ಆತ್ಮಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.