ಅಪೌಷ್ಟಿಕ ಮಕ್ಕಳ ಹೆತ್ತವರ ಅಲೆದಾಟಕ್ಕೆ ತಡೆ

 ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೇ ದಾಖಲೆಗೆ ಅವಕಾಶ ,ರಾಜ್ಯದಲ್ಲೇ ಮೊದಲ ಪ್ರಯೋಗ

Team Udayavani, Jan 22, 2021, 2:40 AM IST

ಅಪೌಷ್ಟಿಕ ಮಕ್ಕಳ ಹೆತ್ತವರ ಅಲೆದಾಟಕ್ಕೆ ತಡೆ

ಕುಂದಾಪುರ:  ತೀವ್ರತೆರನಾದ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಇನ್ನು ಮುಂದೆ ತಾಲೂಕು ಸರಕಾರಿ ಆಸ್ಪತ್ರೆ ಪುನರ್ವಸತಿ ಕೇಂದ್ರಕ್ಕೆ ಕರೆತರಬೇಕಿಲ್ಲ. ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೇ ಅವರ ಅಪೌಷ್ಟಿಕತೆಗೆ ನೀಡುವ ಆರೈಕೆ ಚಿಕಿತ್ಸೆ ಲಭ್ಯವಾಗಲಿದೆ.

ಈ ಪ್ರಯೋಗ ರಾಜ್ಯದಲ್ಲೇ ಮೊದಲ ಬಾರಿಗೆ ಕುಂದಾಪುರದಲ್ಲಿ ಮಾಡಲಾಗಿದ್ದು ಇಲಾಖೆಯ ಗಮನ ಸೆಳೆದಿದೆ. ಇತರೆಡೆಯೂ ವಿಸ್ತರಣೆಯಾಗುವ ಸಾಧ್ಯತೆಯಿದೆ.

ದಾಖಲು  :

ಅಪೌಷ್ಟಿಕತೆಯಿಂದ ಬಳಲುವ ಮಕ್ಕಳ ಪೋಷಣೆಗೆ ಜಾರಿಯಾದ ಪ್ರಧಾನಮಂತ್ರಿಗಳ ಯೋಜನೆ ಪೋಷಣ್‌ ಅಭಿಯಾನ್‌ ಯೋಜನೆ ಜಾರಿಯಲ್ಲಿದೆ. ಅದಕ್ಕೂ ಮೊದಲೂ  ಅಪೌಷ್ಟಿಕತೆಯ ಮಕ್ಕಳನ್ನು ಸರಕಾರಿ ಆಸ್ಪತ್ರೆಯ ಎನ್‌ಆರ್‌ಸಿ ವಿಭಾಗದಲ್ಲಿ ದಾಖಲು ಮಾಡಿ 14 ದಿನಗಳ ಕಾಲ ಆರೈಕೆ ಮಾಡಿ ಪೌಷ್ಟಿಕವಾಗಿ ಇರುವಂತೆ ಮಾಡಲಾಗುತ್ತಿತ್ತು.

ಇದಕ್ಕೆ ಪ್ರತ್ಯೇಕ ಅನುದಾನವೂ ಇದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೂಲಕ ಗುರುತಿಸಲ್ಪಟ್ಟ ಮಕ್ಕಳನ್ನು ಇಲ್ಲಿ ಆರೈಕೆಗೆ ಕರೆತರಲಾಗುತ್ತಿತ್ತು.

ಸ್ಥಳೀಯವಾಗಿ ದಾಖಲು :

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕುಂದಾಪುರ ತಾಲೂಕು ವಿಭಾಗದವರು ತಾಲೂಕು ಆರೋಗ್ಯಾಧಿಕಾರಿಯವರ ಜತೆ ಸಮಾಲೋಚಿಸಿ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೇ ಈ ಚಿಕಿತ್ಸೆ ದೊರಕಿಸಿಕೊಡುವಂತೆ ಕೇಳಿದರು.

ಅದರಂತೆ ಅತಿಹೆಚ್ಚು ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿರುವ ವ್ಯಾಪ್ತಿಯ 5 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಆಯ್ದು ಅಲ್ಲಿ 3 ದಿನಗಳ ಕಾಲ ಪ್ರಾಯೋಗಿಕವಾಗಿ ಆರೈಕೆ ಮಾಡಲಾಯಿತು. ಉಳಿಕೆ 11 ದಿನ ಅಂಗನವಾಡಿ ಕಾರ್ಯಕರ್ತರು ಪ್ರತಿದಿನ ಮಕ್ಕಳ ಮನೆಗೆ ಹೋಗಿ ಪೌಷ್ಟಿಕ ಆಹಾರ ನೀಡುತ್ತಿರುವ ಕುರಿತು ಪರಾಮರ್ಶೆ ನಡೆಸಿದರು. ಇದು ಯಶಸ್ವಿಯಾಗಿದ್ದು 3 ದಿನಗಳಲ್ಲಿ ಮಕ್ಕಳು ತಲಾ 500 ಗ್ರಾಂ ತೂಕ ಹೆಚ್ಚಿಸಿಕೊಂಡಿದ್ದಾರೆ. 2ನೆಯ ಹಂತದಲ್ಲಿ ಇನ್ನೂ 5 ಪಿಎಚ್‌ಸಿಗಳಲ್ಲಿ ಶಿಶು ಆರೈಕೆ ನಡೆಯಲಿದೆ. ಕುಂದಾಪುರ, ಬೈಂದೂರು ತಾಲೂಕಿನಲ್ಲಿ 19 ತೀವ್ರತೆರನಾದ ಅಪೌಷ್ಟಿಕತೆಯ ಮಕ್ಕಳಿದ್ದು 270 ಸಾಧಾರಣ ಅಪೌಷ್ಟಿಕತೆಯ ಮಕ್ಕಳಿದ್ದಾರೆ. ಪ್ರಯೋಗಾತ್ಮಕವಾಗಿ ಪಿಎಚ್‌ಸಿಗಳಲ್ಲಿ ಆರೈಕೆ ಮಾಡಲಾಗಿದ್ದು ಯಶಸ್ವಿಯಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೂ ಸಾಧ್ಯ ವಾಗದ ಪ್ರಕರಣಗಳಿದ್ದರೆ ತಾಲೂಕು ಸರಕಾರಿ ಆಸ್ಪತ್ರೆಯ ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲು ನಿರ್ಧರಿಸಲಾಗಿದೆ.

ಭೇಟಿ :

ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ| ನವೀನ್‌ ಭಟ್‌, ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಜಿಲ್ಲಾ ಉಪ ನಿರ್ದೇಶಕರು ಮಕ್ಕಳ ಮನೆಗೆ ಭೇಟಿ ನೀಡಿ ಸಮಾಲೋಚನೆ ನಡೆಸಿ ಧೈರ್ಯ ತುಂಬಿದ್ದರು.

ಸದಾ ಹೊಸತನದ ಆವಿಷ್ಕಾರಗಳು, ಜನರ ಬಳಿಗೇ ಆರೋಗ್ಯ ಎನ್ನುವ ಕಲ್ಪನೆಯನ್ನು ಸಾಕಾರ ಗೊಳಿಸುತ್ತಿರುವ ತಾಲೂಕು ಆರೋಗ್ಯಾಧಿಕಾರಿ ಡಾ| ನಾಗಭೂಷಣ ಉಡುಪ ಅವರು ಪೂರಕವಾಗಿ ಸ್ಪಂದಿಸಿ ವ್ಯವಸ್ಥೆಗೊಳಿಸಿದರು.

ತರಕಾರಿ ತೋಟ :

ಪೋಷಣ್‌ ಅಭಿಯಾನದಲ್ಲಿ ತಾಲೂಕಿನ ಅಂಗನವಾಡಿಗಳಲ್ಲಿ ಪೌಷ್ಟಿಕ ಆಹಾರ, ಹಣ್ಣು ಹಂಪಲು, ಸೊಪ್ಪು ಹಾಗೂ ತರಕಾರಿ ತೋಟಗಳನ್ನು ರಚಿಸಲಾಗುತ್ತಿದೆ. 412 ಅಂಗನವಾಡಿಗಳಲ್ಲಿ ಆಗಬೇಕಿದ್ದರೂ ಆವರಣ ಇಲ್ಲದ, ಭದ್ರತೆ ಇಲ್ಲದ, ಸರಿಯಾದ ಸ್ಥಳಾವಕಾಶ ಇಲ್ಲದೆಡೆ ತೋಟ ರಚನೆ ಕಷ್ಟ. ಈಗಾಗಲೇ 46 ಕಡೆ ರಚಿಸಲಾಗಿದೆ.

ಸೀಮಂತ, ಅನ್ನಪ್ರಾಶನ :

ಪೋಷಣ್‌ ಅಭಿಯಾನದ ಪ್ರಕಾರ ಮೊದಲ 1 ಸಾವಿರ ದಿನಗಳವರೆಗೆ ಗರ್ಭಿಣಿ, ಮಗು, ಬಾಣಂತಿಯ ಆರೋಗ್ಯದ ಮೇಲ್ವಿಚಾರಣೆಯನ್ನು  ನಡೆಸಲಾಗುತ್ತದೆ. ಆರೋಗ್ಯ ಮಾಹಿತಿ, ಪೌಷ್ಟಿಕ ಆಹಾರಗಳಲ್ಲದೇ ಸೀಮಂತ, ಅನ್ನಪ್ರಾಶನದಂತಹ ಕಾರ್ಯಕ್ರಮಗಳನ್ನು ಕೂಡ ನಡೆಸಲಾಗುತ್ತಿದೆ. ಕಳೆದ ವರ್ಷ ಫೆಬ್ರವರಿ ಅನಂತರ ಸ್ಥಗಿತಗೊಂಡಿದ್ದ ಈ ಕಾರ್ಯಕ್ರಮಗಳು ಈಗ ಪುನಾರಂಭಗೊಂಡಿದೆ. ಪೋಷಣ್‌ ಅಭಿಯಾನ ಒಟ್ಟು 21 ಹಂತಗಳಲ್ಲಿದ್ದು  ಈವರೆಗೆ 8 ಹಂತದವರೆಗಿನ ತರಬೇತಿಯನ್ನು ನೀಡಲಾಗಿದೆ.

ಕುಂದಾಪುರ, ಬೈಂದೂರು ತಾಲೂಕು :

ತೀವ್ರ ಅಪೌಷ್ಟಿಕ ಮಕ್ಕಳು : 19

ಸಾಧಾರಣ ಅಪೌಷ್ಟಿಕ ಮಕ್ಕಳು : 279

ಅಂಗನವಾಡಿ  ಕೇಂದ್ರಗಳು : 412

ಆರೋಗ್ಯ ಇಲಾಖೆ ಸಹಕಾರದಲ್ಲಿ ಪಿಎಚ್‌ಸಿಗಳಲ್ಲಿ ಅಪೌಷ್ಟಿಕ ಮಕ್ಕಳ ಆರೈಕೆಯನ್ನು ಯಶಸ್ವಿಯಾಗಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇತರ ಪಿಎಚ್‌ಸಿಗಳಲ್ಲೂ ಮಾಡಲಾಗುವುದು. ಪೋಷಣ್‌ ಅಭಿಯಾನ ಅನ್ವಯ ಸೀಮಂತ, ಅನ್ನಪ್ರಾಶನ, ಅಂಗನವಾಡಿಗಳಲ್ಲಿ ತರಕಾರಿ ತೋಟ ರಚನೆ, ಆರೋಗ್ಯ ಮಾಹಿತಿ ನಡೆಸಲಾಗುತ್ತಿದೆ. ಈ ಯೋಜನೆ ಅಂಗನವಾಡಿಯ ಕೆಲಸ ಚಟುವಟಿಕೆಗಳನ್ನು ಒಂದೇ ಚೌಕಟ್ಟಿಗೆ ತರುತ್ತದೆ.ಶ್ವೇತಾ, ಸಿಡಿಪಿಒ, ಕುಂದಾಪುರ

 

-ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

Kota-Shrinivas

Manipal: ಕೇಂದ್ರ ಸರಕಾರದ ಯೋಜನೆ ಫ‌ಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ

puttige-5

Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ

UP-Puttige

Udupi: ವಿಶ್ವಶಾಂತಿಗೆ ಭಗವದ್ಗೀತೆಯೇ ಮೂಲಾಧಾರ: ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.