ಸಿದ್ದಾಪುರ: ಶಂಕರನಾರಾಯಣ ಸ.ಹಿ.ಪ್ರಾ.ಶಾಲೆ; ಮುಖ್ಯ ಶಿಕ್ಷಕರ ವರ್ಗಾವಣೆ ಖಂಡಿಸಿ ಪ್ರತಿಭಟನೆ
Team Udayavani, May 16, 2022, 12:52 PM IST
ಸಿದ್ದಾಪುರ: ಶಂಕರನಾರಾಯಣ ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಪ್ರಭಾರ ಮುಖ್ಯ ಶಿಕ್ಷಕರಾಗಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದ ಸಂತೋಷ್‌ಕುಮಾರ ಶೆಟ್ಟಿ ಅವರನ್ನು ಶಿಕ್ಷಣ ಇಲಾಖೆ ವರ್ಗಾವಣೆ ಮಾಡಿದ್ದು ಇದನ್ನು ಖಂಡಿಸಿ ಶಾಲಾ ಪ್ರಾರಂಭೋತ್ಸವದ ದಿನದಂದೇ ಪೋಷಕರು ಪ್ರತಿಭಟನೆ ನಡೆಸಿದರು.
ಸಂತೋಷ್ ಕುಮಾರ ಶೆಟ್ಟಿ ಅವರು ಶಂಕರನಾರಾಯಣ ಸರಕಾರಿ ಹಿ.ಪ್ರಾ. ಶಾಲೆಗೆ ಶಿಕ್ಷಕರಾಗಿ ಬರುವಾಗ 110 ವಿದ್ಯಾರ್ಥಿಗಳು ಇದ್ದಿದ್ದರು. ಕಳೆದ ಶೈಕ್ಷಣಿಕ ವರ್ಷದಲ್ಲಿ 310 ವಿದ್ಯಾರ್ಥಿಗಳು ಸೇರ್ಪಡೆಗೊಂಡಿದ್ದರು. ಈ ಶೈಕ್ಷಣಿಕ ವರ್ಷದಿಂದ ಇನ್ನೂ ನೂರು ವಿದ್ಯಾರ್ಥಿಗಳು ಸೇರ್ಪಡೆಯಾಗುವ ನಿರೀಕ್ಷೆ ಇದೆ ಎನ್ನಲಾಗುತ್ತಿದೆ.
ಆದರೆ ಸಂತೋಷ್‌ಕುಮಾರ ಶೆಟ್ಟಿ ಅವರ ವರ್ಗಾವಣೆ ಮಕ್ಕಳ ಹೆತ್ತವರಲ್ಲಿ ಹಾಗೂ ಪೋಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಈ ಹಿನ್ನೆಲೆಯಲ್ಲಿ ಮೇ 16ರ ಶೈಕ್ಷಣಿಕ ವರ್ಷ ಪ್ರಾರಂಭ ದಿನದಂದೇ ಪೋಷಕರು ಒಂದು ಮಕ್ಕಳನ್ನು ಕೂಡ ಶಾಲೆಗೆ ಕಳುಹಿಸದೆ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ನಡೆಸುತ್ತಿರುವ ಶಾಲೆಗೆ ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಅರುಣ್ ಕುಮಾರ್ ಶೆಟ್ಟಿ ಭೇಟಿ ನೀಡಿ ಮನವಿ ಸ್ವೀಕಾರ ಮಾಡಿದರು.
ಪ್ರತಿಭಟನೆಯ ಬಗ್ಗೆ ಕ್ಷೇತ್ರ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಹಾಗೂ ಸಚಿವರಿಗೆ ಮತ್ತು ಶಿಕ್ಷಣ ಇಲಾಖೆಗೆ ಪೋಷಕರು ಪತ್ರ ಕೂಡ ಬರೆದಿದ್ದಾರೆ. ಗುಣಮಟ್ಟದ ಶಿಕ್ಷಣ ಹಾಗೂ ಶಾಲೆಯ ಅಭಿವೃದ್ಧಿ ಕಂಡು 13 ಗ್ರಾಮಗಳಿಂದ ಹಲವು ವಾಹನಗಳ ಮೂಲಕ ವಿದ್ಯಾರ್ಥಿಗಳು ಬರುತ್ತಿದ್ದಾರೆ. ಉನ್ನತ ಸ್ಥಿತಿಯಲ್ಲಿರುವ ಶಾಲೆಗೆ ಶಿಕ್ಷಣ ಸಂತೋಷ್ ಕುಮಾರ ಶೆಟ್ಟಿ ಅವರ ವರ್ಗಾವಣೆ ಪ್ರತಿಭಟನೆಯ ಹಾದಿ ಹಿಡಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.