“ಸಾಂಪ್ರದಾಯಿಕ ಪದ್ಧತಿಗೆ ಆಧುನಿಕ ಸ್ಪರ್ಶದಿಂದ ಕೃಷಿಯಲ್ಲಿ ಕ್ರಾಂತಿ’

ಭತ್ತದ ನೇರ ಕೂರಿಗೆ ಬಿತ್ತನೆ ಪ್ರಾತ್ಯಕ್ಷಿಕೆಯ ಕ್ಷೇತ್ರೋತ್ಸವ ಕಾರ್ಯಕ್ರಮ ಉದ್ಘಾಟನೆ

Team Udayavani, Oct 27, 2020, 2:02 AM IST

“ಸಾಂಪ್ರದಾಯಿಕ ಪದ್ಧತಿಗೆ ಆಧುನಿಕ ಸ್ಪರ್ಶದಿಂದ ಕೃಷಿಯಲ್ಲಿ ಕ್ರಾಂತಿ’

ತೆಕ್ಕಟ್ಟೆ: ಸಾಂಪ್ರದಾಯಿಕ ಪದ್ಧತಿಗೆ ಆಧುನಿಕ ಸ್ಪರ್ಶ ನೀಡಿದ ಫಲವಾಗಿ ಇಂದು ಕೃಷಿಯಲ್ಲಿ ಕ್ರಾಂತಿಯಾಗಿದೆ. ಕೃಷಿ ಚಟುವಟಿಕೆಯಲ್ಲಿ ತಂತ್ರಜ್ಞಾನಗಳನ್ನು ಸಮರ್ಪಕವಾಗಿ ಬಳಸಿದಾಗ ಉತ್ತಮ ಇಳುವರಿ ಕಂಡುಕೊಳ್ಳಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಚಿಂತನೆ ಅಗತ್ಯವಿದೆ ಎಂದು ನಿವೃತ್ತ ಸಹಾಯಕ ಕೃಷಿ ಅಧಿಕಾರಿ ಶಂಕರ ಶೇರೆಗಾರ್‌ ಹೇಳಿದರು.

ಅವರು ಅ. 24ರಂದು ಉಳೂ¤ರು ಕಟ್ಟೆತನ ದೇಗುಲದಲ್ಲಿ ಉಡುಪಿ ಜಿಲ್ಲಾ ಪಂಚಾಯತ್‌, ಕೃಷಿ ಇಲಾಖೆ ಉಡುಪಿ, ಕೃಷಿ ಇಲಾಖೆ ಕುಂದಾಪುರ ಹಾಗೂ ಗ್ರಾಮ ಪಂಚಾಯತ್‌ ಕೆದೂರು ಇವರ ಸಹಯೋಗದೊಂದಿಗೆ ನಡೆದ 2020-21ನೇ ಸಾಲಿನ ರಾಷ್ಟ್ರೀಯ ಆಹಾರ ಭದ್ರತಾ ಅಭಿಯಾನ (ಅಕ್ಕಿ) ಯೋಜನೆಯಡಿ ಭತ್ತದ ನೇರ ಕೂರಿಗೆ ಬಿತ್ತನೆ ಪ್ರಾತ್ಯಕ್ಷಿಕೆಯ ಕ್ಷೇತ್ರೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಕೃಷಿ ಪದ್ಧ‌ªತಿಯಲ್ಲಿ ವಿಜ್ಞಾನಿಗಳಿಗಿಂತಲೂ ಗ್ರಾಮೀಣ ರೈತರ ಅನುಭವವೇ ಬಹಳ ಮುಖ್ಯವಾದುದು. ಹಿಂದಿನ ಕಾಲದಲ್ಲಿನ ದೀಪಾವಳಿಯ ತಿಂಗಳಲ್ಲಿ ಗದ್ದೆಗೆ ದೀಪ ಇಡುವುದು, ಹೊಟ್‌ ಸುಡುವ ಪದ್ಧತಿ ಹಾಗೂ ಗದ್ದೆಯಲ್ಲಿ ಮಣ್ಣು ಸುಡುವುದು (ಸುಡ್ಮಣ್ಣು) ಮಹತ್ವದ ವಿಷಯ. ಇಂತಹ ಪ್ರಕ್ರಿಯೆಗಳು ರಾತ್ರಿ ವೇಳೆಯಲ್ಲಿ ಕೀಟಗಳನ್ನು ಆಕರ್ಷಿಸಿ ಪರೋಕ್ಷವಾಗಿ ಕೀಟಗಳನ್ನು ನಿರ್ಮೂಲನೆ ಮಾಡುತ್ತಿದ್ದವು. ಆದರೆ ಪ್ರಸ್ತುತ ಆಧುನಿಕ ಕಾಲಘಟ್ಟದಲ್ಲಿ ಇದನ್ನು ಮರೆಯುತ್ತಿರುವುದು ವಿಪರ್ಯಾಸ ಎಂದು ಹೇಳಿದರು.

ಹಿರಿಯ ಪ್ರಗತಿಪರ ಕೃಷಿಕ ರವೀಂದ್ರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ತಾ| ಕೃಷಿ ಅಧಿಕಾರಿ ಸುನಿಲ್‌ ನಾಯ್ಕ ಮಾತನಾಡಿ, ಹಳೆಯ ಕೃಷಿ ಪದ್ಧತಿಗೆ ತಳಿ ಸಂಶೋಧನೆಯ ಫಲವಾಗಿ ಇಂದು ಆಹಾರ ಸ್ವಾವಲಂಬನೆಯಲ್ಲಿ ಯಶಸ್ವಿಯಾಗಲು ಕಾರಣವಾಗಿದೆ. ಕೊರೊನಾ ಆತಂಕದ ನಡುವೆಯೂ ಕೂಡ ಹಡಿಲು ಭೂಮಿ ಪುನಶ್ಚೇತನಗೊಂಡಿದೆ ಎಂದರು.

ಕೆದೂರು ಗ್ರಾ.ಪಂ. ನಿಕಟಪೂರ್ವ ಸದಸ್ಯ ಪ್ರಶಾಂತ್‌ ಶೆಟ್ಟಿ ಉಳೂ¤ರು, ಯುವ ಸಾವಯವ ಕೃಷಿಕ ಸಂದೇಶ್‌ ಶೆಟ್ಟಿ, ತಾಲೂಕು ತಾಂತ್ರಿಕ ವ್ಯವಸ್ಥಾಪಕಿ ರಮಿತಾ ಶೆಟ್ಟಿ, ಧಾರವಾಡ ಕೃಷಿ ವಿಶ್ವ ವಿದ್ಯಾನಿಲಯದ ಅಂತಿಮ ವರ್ಷದ ವಿದ್ಯಾರ್ಥಿನಿ ಸಮೃದ್ಧಿ, ದಿನೇಶ್‌ ಆಲೂರು, ಗೀತಾ ಶೆಟ್ಟಿ ಹಾಗೂ ಗ್ರಾಮದ ರೈತರು ಉಪಸ್ಥಿತರಿದ್ದರು.

ತಾಲೂಕು ತಾಂತ್ರಿಕ ವ್ಯವಸ್ಥಾಪಕಿ ರಮಿತಾ ಶೆಟ್ಟಿ ಸ್ವಾಗತಿಸಿ, ಪ್ರತಾಪ್‌ ಶೆಟ್ಟಿ ಉಳೂ¤ರು ನಿರೂಪಿಸಿ, ವಂದಿಸಿದರು.

ರೈತ ಸಂವಾದ
ರೈತ ಸಂವಾದದಲ್ಲಿ ಸ್ಥಳೀಯ ಸಾವಯವ ರೈತ ಮಹಿಳೆ ಕನಕಾ ಕೊಠಾರಿ ಮಾತನಾಡಿ, ಕೃಷಿ ಇಲಾಖೆಯಿಂದ ಉತ್ತಮ ಬೀಜವನ್ನು ನೀಡಿ. ಅಲ್ಲದೆ ನೇರ ಕೂರಿಗೆ ಬಿತ್ತನೆಯ ಪದ್ಧತಿಯಿಂದ ಕಳೆ ನಿಯಂತ್ರಿಸುವುದು ಕಷ್ಟವಾಗುತ್ತಿದೆ. ಈ ಬಾರಿ ಬೀಜ ಬಿತ್ತನೆಗಿಂತ ಹೆಚ್ಚು ಹುಲ್ಲು ಹುಟ್ಟಿದೆ. ಮುಂದಿನ ದಿನಗಳಲ್ಲಿ ಕಳೆ ತೆಗೆಯುವ ಮೆಶಿನ್‌ ಹಾಗೂ ಕಳೆ ಕಡಿಮೆಯಾಗುವ ವಿಶೇಷ ತಳಿ ಒದಗಿಸಿ ಎಂದು ಹೇಳಿದರು.

ಟಾಪ್ ನ್ಯೂಸ್

Nandini-Dosa

New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Nandini-Dosa

New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.