![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 25, 2021, 3:20 AM IST
ಆಲೂರು: ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಹರ್ಕೂರು ಗ್ರಾಮದ ನಾರ್ಕಳಿ – ಹೋಯಿಗೇರಿ ಸಂಪರ್ಕ ರಸ್ತೆಯು ಸಂಪೂರ್ಣ ಕೆಸರುಮಯವಾಗಿದ್ದು, ಈ ಮಾರ್ಗದಲ್ಲಿ ವಾಹನ ಚಲಾಯಿಸುವುದು ಸವಾರರಿಗೆ ಒಂದು ರೀತಿಯ ಸರ್ಕಸ್‌ನಂತಾಗಿದೆ. ನಿತ್ಯ ನೂರಾರು ವಾಹನಗಳು ಸಂಚರಿಸುತ್ತಿದ್ದು, ರಾಡಿಯೆದ್ದ ರಸ್ತೆಯಿಂದಾಗಿ ಪಾದಚಾರಿಗಳು ಸಂಕಷ್ಟ ಅನುಭವಿಸುವಂತಾಗಿದೆ.
ಆಲೂರು ಗ್ರಾ.ಪಂ. ವ್ಯಾಪ್ತಿಯ ಹರ್ಕೂರು ಗ್ರಾಮದ ನಾರ್ಕಳಿ- ಹೋಯಿಗೇರಿ ರಸ್ತೆಯು ಸಂಪೂರ್ಣ ಕೆಸರುಮಯವಾಗಿದ್ದು, ವಾಹನ ಸಂಚಾರವೇ ಕಷ್ಟಕರವಾಗಿದೆ. ಈ ಮಣ್ಣಿನ ರಸ್ತೆಯ ಅಭಿವೃದ್ಧಿಗೆ ಅನೇಕ ವರ್ಷಗಳಿಂದ ಗ್ರಾಮಸ್ಥರು ಬೇಡಿಕೆ ಇಡುತ್ತಿದ್ದರೂ, ಇನ್ನೂ ಅಭಿವೃದ್ಧಿಗೆ ಮಾತ್ರ ಕಾಲ ಕೂಡಿ ಬಂದಿಲ್ಲ.
3 ಕಿ.ಮೀ. ಮಣ್ಣಿನ ರಸ್ತೆ:
ನಾರ್ಕಳಿ, ಹೋಯಿಗೇರಿ ಇನ್ನಿತರ ಪ್ರದೇಶಗಳಿಂದ ಮುಖ್ಯ ಪೇಟೆಯಾದ ಆಲೂರಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದ್ದು, ಈ ಭಾಗದಲ್ಲಿ ಸುಮಾರು 400ಕ್ಕೂ ಮಿಕ್ಕಿ ಮನೆಗಳಿವೆ. ನಿತ್ಯ ನೂರಾರು ವಾಹನಗಳು ಈ ಮಾರ್ಗದಲ್ಲಿ ಸಂಚರಿಸುತ್ತವೆ. ಸುಮಾರು 3 ಕಿ.ಮೀ. ಉದ್ದಕ್ಕೂ ಮಣ್ಣಿನ ರಸ್ತೆಯಾಗಿಯೇ ಇದ್ದು, ಅಲ್ಲಲ್ಲಿ ಕೆಸರುಮಯ ಆಗಿದ್ದಲ್ಲದೆ, ಕೆಲವೆಡೆ ರಸ್ತೆಯ ಮಣ್ಣು ಮಳೆಗೆ ಕೊಚ್ಚಿ ಹೋಗಿ, ಹೊಂಡ ಬಿದ್ದಿದ್ದು, ದ್ವಿಚಕ್ರ ಸವಾರರಂತೂ ಸರ್ಕಸ್ ಮಾಡಿಕೊಂಡೇ ಸಂಚರಿಸಬೇಕಾದ ಸ್ಥಿತಿಯಿದೆ.
ಪ್ರಮುಖ ಕೊಂಡಿ :
ನಾಡಿನ ಪ್ರಸಿದ್ಧ ದೇವಸ್ಥಾನವಿರುವ ಶ್ರೀ ಮಹಿಷಮರ್ದಿನಿ ದೇವರ ಸನ್ನಿಧಿಯನ್ನು ಸಂಪರ್ಕಿಸುವ ರಸ್ತೆ ಇದಾಗಿದೆ. ಅಲ್ಲದೆ ಇಲ್ಲಿನ ರೈತರು ಅಕ್ಕಿ ಮಿಲ್‌ಗೆ ಹೋಗಬೇಕಾದರೂ ಇದೇ ಮಾರ್ಗವನ್ನು ಆಶ್ರಯಿಸಿದ್ದಾರೆ. ಹಕೂìರು, ನೂಜಾಡಿ – ಬ್ರಹ್ಮೇರಿ – ವಂಡ್ಸೆ, ಹಕ್ಲಾಡಿ, ಕುಂದಬಾರಂದಾಡಿಯಂತಹ ಪ್ರಮುಖ ಊರುಗಳನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯೂ ಇದಾಗಿದೆ.
ಇನ್ನಿತರ ಸಮಸ್ಯೆಗಳೇನು? :
ರಸ್ತೆ ಅಭಿವೃದ್ಧಿಯಾಗಲಿ:
ನರಕ ಸದೃಶ ಈ ರಸ್ತೆಯಿಂದಾಗಿ ಎಲ್ಲರಿಗೂ ತುಂಬಾ ಸಮಸ್ಯೆಯಾಗುತ್ತಿದೆ. ಮಕ್ಕಳ ಹಾಗೂ ವಾಹನಗಳ ಓಡಾಟಕ್ಕೂ ತೊಂದರೆಯಾಗುತ್ತಿದೆ. 3-4 ಪ್ರಮುಖ ಊರುಗಳನ್ನು ಸಂಪರ್ಕಿಸುವ ರಸ್ತೆ ಇದಾಗಿದ್ದರೂ, ಇನ್ನೂ ಯಾವುದೇ ಅಭಿವೃದ್ಧಿಯಾಗಿಲ್ಲ. ಪಂಚಾಯತ್‌ನವರು ಈ ಬಗ್ಗೆ ಗಮನಹರಿಸಿಲ್ಲ. ಇನ್ನಾದರೂ ಈ ರಸ್ತೆಯ ಅಭಿವೃದ್ಧಿಯಾಗಲಿ. – ಉದಯ ಶೆಟ್ಟಿ ಆಲೂರು, ಸ್ಥಳೀಯರು
4 ಲ. ರೂ. ಮಂಜೂರು:
ಈ ನಾರ್ಕಳಿ- ಹೋಯಿಗೆಯೇರಿ ರಸ್ತೆಯ ಅವ್ಯವಸ್ಥೆ ಬಗ್ಗೆ ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ. ಗ್ರಾಮಸಭೆಗಳಲ್ಲೂ ಈ ಬಗ್ಗೆ ಪ್ರಸ್ತಾವಿಸಲಾಗಿದೆ. ಪಂಚಾಯತ್‌ನಿಂದ ಈ ಹಿಂದೆಯೇ ಪ್ರಸ್ತಾವನೆ ಕಳುಹಿಸಿದ್ದು, ರಸ್ತೆ ಅಭಿವೃದ್ಧಿಗೆ ತಾ.ಪಂ.ನಿಂದ 4 ಲಕ್ಷ ರೂ. ಅನುದಾನ ಮಂಜೂರಾಗಿದೆ. ಮಳೆಗಾಲದ ಬಳಿಕ ಕಾಮಗಾರಿ ಆರಂಭವಾಗಬಹುದು. – ಸುಶೀಲಾ, ಆಲೂರು ಗ್ರಾ.ಪಂ. ಪಿಡಿಒ
– ಪ್ರಶಾಂತ್ ಪಾದೆ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.