ಸಾಲಿಗ್ರಾಮ: ಸರ್ವಿಸ್ ರಸ್ತೆ ಕಾಮಗಾರಿ ಪುನರಾರಂಭ
Team Udayavani, Apr 21, 2022, 12:24 PM IST
ಕೋಟ: ಸಾಲಿಗ್ರಾಮ ಭಾಗದಲ್ಲಿ ಕಳೆದ ಒಂದು ವರ್ಷ ದಿಂದ ಸ್ಥಗಿತಗೊಂಡಿದ್ದ ಚತುಷ್ಪಥ ಹೆದ್ದಾರಿಯ ಸರ್ವಿಸ್ ರಸ್ತೆ ಕಾಮಗಾರಿ ಪುನರಾರಂಭಗೊಂಡಿದೆ.
ಸರ್ವಿಸ್ ರಸ್ತೆ ಇಲ್ಲದಿರುವುದರಿಂದ ಸಾಲಿಗ್ರಾಮದಲ್ಲಿ ಸಾಕಷ್ಟು ಅಪಘಾತಗಳು ನಡೆಯುತಿತ್ತು ಹಾಗೂ ಕಾರ್ಕಡ ಮುಂತಾದ ಕಡೆ ಸಾಗುವವರು ವಿರುದ್ಧ ದಿಕ್ಕಿನಲ್ಲಿ ಸಂಚರಿಸಬೇಕಾದ ಅನಿವಾರ್ಯತೆ ಇತ್ತು. ಈ ಸರ್ವಿಸ್ ರಸ್ತೆ ಯೋಜನೆಯ ಪ್ರಥಮ ಹಂತದಲ್ಲೇ ಮುಗಿಯಬೇಕಿತ್ತು. ಆದರೆ 10 ವರ್ಷ ತಡವಾಗಿ 2021 ಜನವರಿಯಲ್ಲಿ ಕೆಲಸ ಆರಂಭಗೊಂಡಿತ್ತು.
ಯೋಜನೆಯಂತೆ ಸಾಲಿಗ್ರಾಮ ಮೀನು ಮಾರುಕಟ್ಟೆಯಿಂದ ಬಸ್ ನಿಲ್ದಾಣದ ವರೆಗೆ ಮತ್ತು ಕಾರ್ಕಡ ರಸ್ತೆಯಿಂದ ನರ್ತಕಿ ತನಕ ಎರಡು ಕಡೆಗಳಲ್ಲಿ ಸರ್ವಿಸ್ ರಸ್ತೆ, ಚರಂಡಿ ನಿರ್ಮಾಣಗೊಳ್ಳಬೇಕಿತ್ತು. ಇದಕ್ಕಾಗಿ ಒತ್ತುವರಿ ಕಟ್ಟಡಗಳನ್ನು ತೆರವುಗೊಳಿಸಿ ಒಳಚರಂಡಿ, ರಸ್ತೆ ನಿರ್ಮಾಣ ಕೆಲಸ ಪ್ರಾರಂಭಿಸಲಾಗಿತ್ತು. ಅದರೆ ಸಕಾರಣವಿಲ್ಲದೆ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿದ್ದರಿಂದ ಸಾಕಷ್ಟು ಸಮಸ್ಯೆಯಾಗಿತ್ತು.
ಈ ಬಗ್ಗೆ ಸ್ಥಳೀಯ ಹೆದ್ದಾರಿ ಜಾಗೃತಿ ಸಮಿತಿ ನೇತೃತ್ವದಲ್ಲಿ ಸಾಕಷ್ಟು ಹೋರಾಟಗಳು ನಡೆದಿದ್ದು, ಇದೀಗ ಕಾಮಗಾರಿ ಪುನಃ ಆರಂಭಗೊಂಡಿರುವರಿಂದ ಸ್ಥಳೀಯರು ಸಂತಸಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಟವರ್‌ನ ಬುಡದಲ್ಲೇ ನೆಟ್‌ವರ್ಕ್ ಇಲ್ಲ!
Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
ಭಾರತ ಮಾತೆಗೆ ಕಿರೀಟ ತೊಡಿಸಿದ ಸರಕಾರ:’ವಿಶ್ವಾರ್ಪಣಮ್’ನಲ್ಲಿ ಪಲಿಮಾರು ಶ್ರೀ ಅಭಿಮತ
Udupi;ಗೀತಾರ್ಥ ಚಿಂತನೆ 146: ಚಾರ್ವಾಕ ಬಿಟ್ಟು ಉಳಿದೆಲ್ಲ ಮತಗಳಲ್ಲಿ ಪುಣ್ಯಪಾಪ ಕಲ್ಪನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.