Saligrama ಪಟ್ಟಣ ಪಂಚಾಯತ್;ಅಧ್ಯಕ್ಷರಾಗಿ ಸುಕನ್ಯಾ ಶೆಟ್ಟಿ, ಉಪಾಧ್ಯಕ್ಷರಾಗಿ ಗಿರಿಜಾ ಪೂಜಾರಿ
Team Udayavani, Aug 27, 2024, 2:26 PM IST
ಕೋಟ: ಸಾಲಿಗ್ರಾಮ ಪ.ಪಂ. ಎರಡನೇ ಅವಧಿಯ ಅಧ್ಯಕ್ಷರಾಗಿ ಬಿಜೆಪಿ ಪಕ್ಷದ ಸದಸ್ಯೆ, ಮಾರಿಗುಡಿ ವಾರ್ಡ್‌ನ ಸದಸ್ಯೆ ಸುಕನ್ಯಾ ಶೆಟ್ಟಿ, ಉಪಾಧ್ಯಕ್ಷರಾಗಿ ಬಿಜೆಪಿಯ ಕಾರ್ಕಡ ತೆಂಕುಹೋಳಿ ವಾರ್ಡ್‌ನ ಗಿರಿಜಾ ಪೂಜಾರಿ ಆಯ್ಕೆಯಾಗಿದ್ದಾರೆ.
ಇಲ್ಲಿನ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ (ಎ) ಮಹಿಳೆಗೆ ಮೀಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಸುಕನ್ಯಾ ಶೆಟ್ಟಿ, ಉಪಾಧ್ಯಕ್ಷ ಸ್ಥಾನಕ್ಕೆ ಗಿರಿಜಾ ಪೂಜಾರಿ ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷ, ಉಪಾಧ್ಯಕ್ಷ ಎರಡೂ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಝಹಿರಾ ನಾಮ ಪತ್ರ ಸಲ್ಲಿಸಿದ್ದರು.
16 ಮಂದಿ ಸಂಖ್ಯಾಬಲದ ಪ.ಪಂ.ನಲ್ಲಿ ಬಿಜೆಪಿಯ 10, ಕಾಂಗ್ರೆಸ್‌ನ 5, ಪಕ್ಷೇತರ ಓರ್ವ ಸದಸ್ಯರಿದ್ದು ಅಧ್ಯಕ್ಷ,ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು ಶಾಸಕ ಕಿರಣ್ ಕೊಡ್ಗಿ ಮತದೊಂದಿಗೆ 11, ಕಾಂಗ್ರೆಸ್‌ನ ಬೆಂಬಲಿತರು 5 ಮತಗಳನ್ನು ಪಡೆದರು. ಪಕ್ಷೇತರ ಸದಸ್ಯೆ ರತ್ನಾ ನಾಗರಾಜ್ ಗಾಣಿಗ ತಟಸ್ಥವಾಗುಳಿದರು.
ಅವಿರೋಧ ಬೇಡ ಎಂಬ ನೆಲೆಯಲ್ಲಿ ಸ್ಪರ್ಧೆ :-
ಕಾಂಗ್ರೆಸ್‌ನಲ್ಲಿ ಐದೇ ಮಂದಿ ಸದಸ್ಯರಿದ್ದರೂ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಲಾಗಿತ್ತು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸ್ಪರ್ಧೆ ಎನ್ನುವಂತದ್ದು ಇರಬೇಕು, ಅವಿರೋಧ ಸರಿಯಲ್ಲ ಎನ್ನುವ ನೆಲೆಯಲ್ಲಿ ಸಂಖ್ಯಾಬಲ ಇಲ್ಲದಿದ್ದರೂ ನಾಮಪತ್ರ ಸಲ್ಲಿಸಲಾಗಿತ್ತು ಎಂದು ಕಾಂಗ್ರೆಸ್‌ನ ಹಿರಿಯ ಸದಸ್ಯ ಶ್ರೀನಿವಾಸ್ ಅಮೀನ್ ತಿಳಿಸಿದರು.
ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ ಚುನಾವಣಾಧಿಕಾರಿಯಾಗಿ ಕಾರ್‍ಯ ನಿರ್ವಹಿಸಿದರು. ಕುಂದಾಪುರ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಮುಖ್ಯಾಧಿಕಾರಿ ಶಿವ ನಾಯ್ಕ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Udupi: ಗೀತೆಯ ಸಂದೇಶ ಪ್ರತೀ ಮನೆಯನ್ನೂ ಪ್ರವೇಶಿಸಲಿ: ಕಾಂಚಿ ಶ್ರೀ
Udupi: ಎಂಜಿಎಂ ಕಾಲೇಜಿನಲ್ಲಿ ನ.29 ರಿಂದ ಡಿ.1ವರೆಗೆ ಅಮೃತ ಮಹೋತ್ಸವ ಸಂಭ್ರಮ
Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!
Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ
MUST WATCH
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.