ಶಾಲಾರಂಭ ವಿಳಂಬ ಸಲ್ಲದು

ಎಸ್‌ಡಿಎಂಸಿ ಸಂಘಗಳೊಂದಿಗಿನ ಚರ್ಚೆಯಲ್ಲಿ ಅಭಿಪ್ರಾಯ

Team Udayavani, Nov 9, 2020, 4:09 AM IST

Kud

ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರ ವೀಡಿಯೋ ಕಾನ್ಫರೆನ್ಸ್‌ ಕಾರ್ಯಕ್ರಮ ನಡೆಯಿತು.

ಕುಂದಾಪುರ: ಸರಕಾರದ ನಿರ್ದೇಶನದಂತೆ ಶಾಲಾ ತರಗತಿಗಳನ್ನು ಪುನರಾರಂಭಿಸುವ ಕುರಿತು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯ ಆಯುಕ್ತ ಅನುºಕುಮಾರ್‌ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳ ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರ ವೀಡಿಯೋ ಕಾನ್ಫರೆನ್ಸ್‌ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಎಸ್‌ಡಿಎಂಸಿ ಸಮನ್ವಯ ವೇದಿಕೆಯ ಅಧ್ಯಕ್ಷ ಅಬ್ದುಲ್‌ ಸಲಾಂ ಚಿತ್ತೂರು, ರಾಜ್ಯ ಸರಕಾರ ಶಾಲೆಗಳನ್ನು ಆರಂಭ ಮಾಡುವ ವಿಚಾರದಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವುದರಿಂದ ಮಕ್ಕಳ ದೈಹಿಕ, ಮಾನಸಿಕ ಮತ್ತು ಶೈಕ್ಷಣಿಕ ವಿಷಯದಲ್ಲಿ ಹಿನ್ನಡೆ ಉಂಟಾಗಿದ್ದು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಗಾಢವಾದ ನಕಾರಾತ್ಮಕ ಪರಿಣಾಮ ಬೀರಲಿದೆ. ಸರಕಾರಿ ಶಾಲೆಗಳು ಅದರಲ್ಲೂ ವಿಶೇಷವಾಗಿ ಗ್ರಾಮೀಣ ಭಾಗದಲ್ಲಿ ಕಲಿಕೆಯ ಜತೆ ಜತೆಗೆ ಮಕ್ಕಳ ದೈಹಿಕ ಬೆಳವ ಣಿಗೆಗೆ ಪೂರಕವಾದ ಬಿಸಿ ಹಾಲು, ಬಿಸಿಯೂಟ, ರೋಗ ನಿರೋಧಕ ವಿಟಮಿನ್‌ ಮಾತ್ರೆ, ಆರೋಗ್ಯ ತಪಾಸಣೆ ಇತ್ಯಾದಿ ಸೌಲಭ್ಯಗಳು ಅತ್ಯಂತ ಮಹತ್ವದ ಪಾತ್ರ ವಹಿಸುತ್ತವೆ. ಸರಕಾರ ಈ ವಿಷಯದಲ್ಲಿ ತೀರ್ಮಾ ನಿಸುವುದು ಬಡವರ್ಗಕ್ಕೆ ನಿರ್ಣಾಯಕ ವಾಗಿದೆ ಎಂದರು.

ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಉಡುಪಿ ಜಿಲ್ಲೆ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ವಿದ್ಯಾಂಗ ಉಪ ನಿರ್ದೇಶಕ (ಪ್ರಭಾರ), ಜಿಲ್ಲಾ ಶಿಕ್ಷಣ ತರಬೇತಿ ಕೇಂದ್ರದ ಹಿರಿಯ ಉಪನ್ಯಾಸಕ ಅಶೋಕ್‌ ಕಾಮತ್‌ಉಪಸ್ಥಿತರಿದ್ದರು.

ಕುಂದಾಪುರ, ಬ್ರಹ್ಮಾವರ, ಉಡುಪಿ, ಕಾಪು, ಕಾರ್ಕಳ, ಹೆಬ್ರಿ ವಲಯಗಳ ಶಿಕ್ಷಣ ಇಲಾಖೆಯ ಮಾಹಿತಿಯ ಮೇರೆಗೆ ಎಸ್‌ಡಿಎಂಸಿ ಸಮನ್ವಯ ವೇದಿಕೆಯ ಜಿಲ್ಲಾ ಉಪಾಧ್ಯಕ್ಷೆ ಉಷಾ ರಮೇಶ್‌, ಕುಂದಾಪುರ ತಾಲೂಕು ಘಟಕದ ಅಧ್ಯಕ್ಷ ಎಸ್‌. ವಿ. ನಾಗರಾಜ್‌, ಕುಂದಾಪುರ ವಲಯ ಅಧ್ಯಕ್ಷ ಅವನೀಶ ಹೊಳ್ಳ, ಗುಲ್ವಾಡಿ ಪಂಚಾಯತ್‌ ಘಟಕದ ಅಧ್ಯಕ್ಷ ಸಾದಿಕ್‌ ಮಾವಿನಕಟ್ಟೆ, ಕೋಣಿ ಪಂಚಾಯತ್‌ ಘಟಕದ ಅಧ್ಯಕ್ಷೆ ರಮ್ಯಾ ದಯಾನಂದ್‌, ಶೋಭಾ ಶಾಂತಿ ರಾಜ್‌ ಬ್ರಹ್ಮಾವರ, ಎಸ್‌ಡಿಎಂಸಿ ಸದಸ್ಯರಾದ ಜಯಾನಂದ ಅಮೀನ್‌, ಆನಂದ ಪೂಜಾರಿ ಬಾಳುRದ್ರು, ಸತೀಶ್‌ ಕೋಟ್ಯಾನ್‌ ಬ್ರಹ್ಮಾವರ, ದತ್ತಾತ್ರೇಯ ಭಟ್‌, ಸತೀಶ್‌ ಪೂಜಾರಿ ಕಾರ್ಕಳ, ಅಶೋಕ್‌ ಜೋಗಿ ಹಿರಿಯಡಕ ಹಾಗೂ ಇಲಾಖೆ ಅಧಿಕಾರಿಗಳು, ವಿವಿಧ ಶಾಲೆಯ ಶಿಕ್ಷಕರು ಭಾಗವಹಿಸಿದ್ದರು.

ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯ ಮಾರ್ಗದರ್ಶಿ ಅಧಿಕಾರಿ, ಉಪನ್ಯಾಸಕ ಚಂದ್ರ ನಾಯ್ಕ ಉಡುಪಿ ಜಿಲ್ಲಾ ಕೇಂದ್ರದ ಕಾರ್ಯಕ್ರಮವನ್ನು ನಿರ್ವಹಿಸಿದರು.

ಶಾಲೆ ತೆರೆಯಲು ಆಗ್ರಹ
ಈಗಾಗಲೇ ನೆರೆ ರಾಜ್ಯಗಳು ಹಾಗೂ ಉತ್ತರ ಭಾರತದ ಹಲವು ರಾಜ್ಯಗಳು ಪ್ರಾಥಮಿಕ, ಪ್ರೌಢ, ವಸತಿ ಶಾಲೆ, ವಸತಿ ನಿಲಯ ಹಾಗೂ ಕಾಲೇಜು ಪುನರಾರಂಭಿಸಲು ಸುತ್ತೋಲೆ ಹಾಗೂ ನಿರ್ದಿಷ್ಟ ಮಾರ್ಗಸೂಚಿಯನ್ನು ಪ್ರಕಟಿಸಿವೆ. ಇದೇ ಮಾದರಿಯಲ್ಲಿ ರಾಜ್ಯ ಸರಕಾರ ಕೂಡ ಯೋಚಿಸಬೇಕಾಗಿದೆ.ಬಡ ಗ್ರಾಮೀಣ ಮಕ್ಕಳ ಹಿತವನ್ನು ಪ್ರಧಾನವನ್ನಾಗಿರಿಸಿಕೊಂಡು ನಮ್ಮ ಸರಕಾರಿ ಶಾಲೆಗಳನ್ನು ಆದಷ್ಟು ಬೇಗ ತೆರೆಯುವುದು ಮಹತ್ವದ ನಿರ್ಧಾರವಾಗುತ್ತದೆ. ಇಲ್ಲವಾದಲ್ಲಿ ಅನೇಕ ಮಕ್ಕಳು ಶಾಲೆಯಿಂದ ದೂರವುಳಿದು ಬಾಲಕಾರ್ಮಿಕ ಪದ್ಧತಿ, ಜೀತ ಪದ್ಧತಿ, ಬಾಲ್ಯ ವಿವಾಹ, ಮಕ್ಕಳ ಸಾಗಾಣಿಕೆಗೆ ಇತ್ಯಾದಿ ಅಪಾಯಗಳಿಗೆ ತುತ್ತಾಗುವ ಎಲ್ಲ ಸಾಧ್ಯತೆಗಳು ದಟ್ಟವಾಗಿವೆ. ಮಕ್ಕಳನ್ನು ಈ ಎಲ್ಲ ಅವಘಡಗಳಿಂದ ರಕ್ಷಿಸಿ ಬಾಲ್ಯವನ್ನು ಅನುಭವಿಸಲು ಅವಕಾಶ ಕಲ್ಪಿಸಬೇಕಾದರೆ ಸರಕಾರಿ ಶಾಲೆಗಳು ಶೀಘ್ರವಾಗಿ ತೆರೆಯಬೇಕು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವರು ಶೀಘ್ರವಾಗಿ ಒಮ್ಮತದ ತೀರ್ಮಾನಕ್ಕೆ ಬರಬೇಕೆಂದು ಸಭೆಯಲ್ಲಿ ಆಗ್ರಹಿಸಲಾಯಿತು.

ಟಾಪ್ ನ್ಯೂಸ್

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

3

Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

byndoor

Siddapura: ಲಾರಿ ಚಾಲನೆಯಲ್ಲಿಯೇ ಹೃದಯಾಘಾತ; ಚಾಲಕ ಸಾವು

complaint

Kundapura: ಹಲ್ಲೆ, ಗಾಯ; ದೂರು ದಾಖಲು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.