ಶಾಶ್ವತ ನೆಲೆ ಕಾಣದ ಶ್ರೀ ನಾರಾಯಣ ಗುರು ವಸತಿ ಶಾಲೆ

ತಾತ್ಕಾಲಿಕ ವ್ಯವಸ್ಥೆಯಲ್ಲೂ ಜಾಗದ ಕೊರತೆ ; ಇನ್ನೂ ಸಿಗದ ಸರಿಯಾದ ರೂಪರೇಖೆ

Team Udayavani, Jul 11, 2023, 8:20 AM IST

Sri Narayana Guru ವಸತಿ ಶಾಲೆ ಇನ್ನೂ ಶಾಶ್ವತ ನೆಲೆಯಾಗಿಲ್ಲ; ತಾತ್ಕಾಲಿಕದಲ್ಲೂ ಸಮಸ್ಯೆ

ಕುಂದಾಪುರ: ರಾಜ್ಯ ಸರಕಾರ ಕಳೆದ ವರ್ಷದಿಂದ ಉಡುಪಿ, ದ.ಕ. ಸಹಿತ 4 ಜಿಲ್ಲೆಗಳಲ್ಲಿ ಆರಂಭಿಸಿದ ಶ್ರೀ ನಾರಾಯಣ ಗುರು ವಸತಿ ಶಾಲೆಗಳಿಗೆ ಇನ್ನೂ ಶಾಶ್ವತ ನೆಲೆ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. 2 ಕಡೆ ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿದ್ದು, ಇನ್ನೆರಡು ಕಡೆಗಳಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ನಡೆಯುತ್ತಿದ್ದು, ಅಲ್ಲಿ ಈಗ ಮಕ್ಕಳ ಸಂಖ್ಯೆ ಜಾಸ್ತಿ ಆಗುತ್ತಿರುವುದರಿಂದ ಸೂಕ್ತ ಸೌಕರ್ಯ ಕಲ್ಪಿಸುವುದೇ ಸವಾಲಾಗಿ ಪರಿಣಮಿಸಿದೆ.

ಕಳೆದ ವರ್ಷ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದರಂತೆ 4 ಕಡೆ ಶ್ರೀ ನಾರಾಯಣ ಗುರು ವಸತಿ ಶಾಲೆಯನ್ನು ಆರಂಭಿಸಿತ್ತು. 6 ರಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡಲಾಗುತ್ತಿದೆ. ಆಗ ಇದಕ್ಕೆ ಬಜೆಟ್‌ನಲ್ಲಿ ಪ್ರತೀ ಶಾಲೆಗೆ 18 ಕೋ.ರೂ. ಅನುದಾನ ಘೋಷಿಸಿತ್ತು.

ಕಳೆದ ವರ್ಷ ತರಾತುರಿಯಲ್ಲಿ ಆರಂಭಗೊಂಡು, ತಾತ್ಕಾಲಿಕ ವ್ಯವಸ್ಥೆಯಲ್ಲಿಯೇ ತರಗತಿಗಳ ಪಠ್ಯ ಚಟುವಟಿಕೆಗಳು ನಡೆದಿದ್ದವು. ಆದರೆ ಆರಂಭಗೊಂಡು ವರ್ಷವಾದರೂ, ಇನ್ನೂ ಅದಕ್ಕೆ ಸರಿಯಾದ ರೂಪುರೇಷೆಯನ್ನು ಕೊಡುವಲ್ಲಿ ಸರಕಾರ ವಿಫಲವಾಗಿದೆ. ದ.ಕ. ದಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ಜಾಗ ಗುರುತಿಸಿದ್ದು, ಶಾಲೆ ಹೆಸರಿಗೆ ಕಟ್ಟಡ ನೋಂದಣಿಯೂ ಆಗಿದೆ. ಉಡುಪಿಯಲ್ಲಿ ಜಾಗ ಗುರುತಿಸಿದ್ದು, ಆದರೆ ಜಾಗದ ನೋಂದಣಿ ಆಗಬೇಕಾಗಿದೆ.

ಎಲ್ಲೆಲ್ಲಿ ಶಾಲೆಗಳು?
ಉಡುಪಿ ಜಿಲ್ಲೆಯ ಶಾಲೆಯನ್ನು ಕುಂದಾಪುರ ತಾಲೂಕಿನ ಯಡಾಡಿ- ಮತ್ಯಾಡಿಯ (ಶಾಶ್ವತ ಕಟ್ಟಡ ಬೇಳೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ಆಗಲಿದೆ) ಮೊರಾರ್ಜಿ ದೇಸಾಯಿ ವಸತಿ ಶಾಲೆಯೊಂದಿಗೆ ಹಾಗೂ ಉತ್ತರ ಕನ್ನಡ ಜಿಲ್ಲೆಯ ಶಾಲೆಯನ್ನು ಭಟ್ಕಳದ (ಶಾಶ್ವತ ಕಟ್ಟಡ ಜಾಲಿ ಪ.ಪಂ.ವ್ಯಾಪ್ತಿಯಲ್ಲಿ ಆಗಲಿದೆ) ಮೊರಾರ್ಜಿ ದೇಸಾಯಿ ವಸತಿ ಶಾಲೆಯೊಂದಿಗೆ ತಾತ್ಕಾಲಿಕವಾಗಿ ಜಂಟಿಯಾಗಿ ನಡೆಸಲು ವ್ಯವಸ್ಥೆ ಮಾಡಲಾಗಿದೆ. ದ.ಕ. ಜಿಲ್ಲೆಯ ಶಾಲೆಯನ್ನು ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಹಾಗೂ ಶಿವಮೊಗ್ಗ ಜಿಲ್ಲೆಯ ಶಾಲೆಯನ್ನು ಸೊರಬ ತಾಲೂಕಿನಲ್ಲಿ ಬಾಡಿಗೆ ಕಟ್ಟಡವೊಂದರಲ್ಲಿ ಆರಂಭಿಸಿದೆ.

ಸಮಸ್ಯೆಗಳೇನು?
ಬಂಟ್ವಾಳ ಹಾಗೂ ಸೊರಬದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಮಕ್ಕಳಿಗೆ ತರಗತಿ ಹಾಗೂ ಹಾಸ್ಟೆಲ್‌ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಸರಕಾರ ಅದರ ಬಾಡಿಗೆ ವೆಚ್ಚವನ್ನು ಭರಿಸುತ್ತಿದೆ. ಆದರೆ ಕುಂದಾಪುರ ಹಾಗೂ ಭಟ್ಕಳದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ನಾರಾಯಣ ಗುರು ವಸತಿ ಶಾಲೆಯ ಮಕ್ಕಳಿಗೂ ಜಂಟಿಯಾಗಿ ವ್ಯವಸ್ಥೆ ಮಾಡಲಾಗಿದ್ದು, ಕಳೆದ ವರ್ಷ ಮಕ್ಕಳ ಸಂಖ್ಯೆ ಕಡಿಮೆ ಇದ್ದುದರಿಂದ ಅಂತಹ ಸಮಸ್ಯೆಯೇನು ಆಗಿಲ್ಲ. ಆದರೆ ಈ ಬಾರಿ ಮೊರಾರ್ಜಿ ಶಾಲೆಗಳ ಮಕ್ಕಳ ಸಂಖ್ಯೆ ಹಾಗೂ ನಾರಾಯಣ ಗುರು ಶಾಲೆಗಳ ಮಕ್ಕಳ ಸಂಖ್ಯೆ ಎರಡೂ ಜಾಸ್ತಿ ಆಗಿದ್ದು, ಈ ಸಂಖ್ಯೆ ಇನ್ನೂ ಹೆಚ್ಚಾಗಲಿದೆ. ಇದರಿಂದ ಮೊರಾರ್ಜಿ ಶಾಲೆಗಳಲ್ಲಿ ಇವರಿಗೆ ಉಳಿದುಕೊಳ್ಳಲು ವಸತಿ ಹಾಗೂ ಪಾಠ- ಪ್ರವಚನಕ್ಕೆ ತರಗತಿಗಳ ಕೋಣೆಗಳ ಕೊರತೆಯಾಗಲಿದೆ. ಇದಿಷ್ಟೇ ಅಲ್ಲದೆ ಎಲ್ಲ 4 ಕಡೆಗಳಲ್ಲೂ ನಾರಾಯಣ ಗುರು ಶಾಲೆಗೆಂದು ಪ್ರತ್ಯೇಕ ಶಿಕ್ಷಕರನ್ನಾಗಲಿ, ಹಾಸ್ಟೆಲ್‌ ವಾರ್ಡನ್‌ಗಳು, ಸಿಬಂದಿಯನ್ನು ಸಹ ನೇಮಿಸಿಲ್ಲ. ಅತಿಥಿ ಶಿಕ್ಷಕರು ಪಾಠ ಮಾಡುತ್ತಿದ್ದಾರೆ.

ಪರ್ಯಾಯ ವ್ಯವಸ್ಥೆ ಕಲ್ಪಿಸಲಿ
ಕುಂದಾಪುರದ ಯಡಾಡಿ- ಮತ್ಯಾಡಿಯ ನಾರಾಯಣ ಗುರು ವಸತಿ ಶಾಲೆಯೊಂದಿಗೆ ಜಂಟಿಯಾಗಿ ನಡೆಸಲಾಗುತ್ತಿದೆ. ಇಲ್ಲಿ ಕಳೆದ ವರ್ಷ ನಾರಾಯಣ ಗುರು ಶಾಲೆಗೆ 47 ಮಕ್ಕಳಿದ್ದರು. ಆದರೆ ಈ ಬಾರಿ ಈವರೆಗೆ 70 ಮಕ್ಕಳಾಗಿದ್ದು, ಇನ್ನೂ ಜಾಸ್ತಿಯಾಗಬಹುದು. ಮೊರಾರ್ಜಿ ದೇಸಾಯಿ ಶಾಲೆಯಲ್ಲಿ 190 ಮಕ್ಕಳಿದ್ದಾರೆ. ಅದು ಜಾಸ್ತಿಯಾಗಬಹುದು. ಅಲ್ಲಿನ ಗರಿಷ್ಠ ಸಾಮರ್ಥ್ಯ 250. ಈಗಿರುವ ಮಕ್ಕಳ ಸಂಖ್ಯೆಗೆ ಇದು ಸಾಲದು. ಹಾಗಾಗಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ತ್ವರಿತವಾಗಿ ಪರ್ಯಯ ವ್ಯವಸ್ಥೆ ಮಾಡಬೇಕಾಗಿದೆ.
– ಸತೀಶ್‌ ಕುಂದಾಪುರ, ಶ್ರೀ ನಾರಾಯಣ ಗುರು ವಸತಿ ಶಾಲಾ ಪೋಷಕರ ಸಮಿತಿ ಸದಸ್ಯ

ಪರಿಶೀಲಿಸಿ, ಕ್ರಮ
ನಾನು ಹೊಸದಾಗಿ ಜವಾಬ್ದಾರಿ ವಹಿಸಿಕೊಂಡಿದ್ದು, ಈ ಬಗ್ಗೆ ಆದಷ್ಟು ಶೀಘ್ರ ತಿಳಿದುಕೊಂಡು, ಏನೆಲ್ಲ ಪ್ರಗತಿ ಆಗಿವೆ, ಆಗಬೇಕಾಗಿದೆ ಅನ್ನುವುದನ್ನು ಪರಿಶೀಲಿಸಿ, ಕ್ರಮ ವಹಿಸಿಕೊಳ್ಳುತ್ತೇನೆ.
– ನವೀನ್‌ ಕುಮಾರ್‌, ಕಾರ್ಯನಿರ್ವಾಹಕ ನಿರ್ದೇಶಕ, ರಾಜ್ಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕ್ರೈಸ್‌)

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್‌; ತಪ್ಪಿದ ಅನಾಹುತ

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್‌; ತಪ್ಪಿದ ಅನಾಹುತ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

de

Malpe ಸೀವಾಕ್‌ ಸಮುದ್ರತೀರದಲ್ಲಿ ಮೃತದೇಹ ಪತ್ತೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

16

Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್‌ಗೆ ದಂಡ

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.