ಹದಗೆಟ್ಟ ಸಬ್ಲಾಡಿ ರಸ್ತೆ ಅಭಿವೃದ್ಧಿಗೆ ಕೂಡಿ ಬಾರದ ಕಾಲ
Team Udayavani, Jan 23, 2021, 3:00 AM IST
ಕುಂದಾಪುರ: ತಲ್ಲೂರಿನಿಂದ ಸಬ್ಲಾಡಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯು ಕಳೆದ ಹಲವು ವರ್ಷಗಳಿಂದ ಅಲ್ಲಲ್ಲಿ ಅನೇಕ ಕಡೆಗಳಲ್ಲಿ ಹೊಂಡಮಯವಾಗಿದ್ದು, ಇನ್ನೂ ಈ ರಸ್ತೆಯ ಅಭಿವೃದ್ಧಿಗೆ ಕಾಲ ಕೂಡಿ ಬಂದಿಲ್ಲ. ಈ ರಸ್ತೆಗೆ ದಶಕದಿಂದ ಹಿಂದೆ ಡಾಮರು ಕಾಮಗಾರಿಯಾಗಿದ್ದು, ಆ ಬಳಿಕ ಇಲ್ಲಿಯವರೆಗೆ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ.
ಹಟ್ಟಿಯಂಗಡಿ ಗ್ರಾ.ಪಂ. ಹಾಗೂ ತಲ್ಲೂರು ಗ್ರಾ.ಪಂ.ಗಳೆರಡರ ವ್ಯಾಪ್ತಿಗೂ ಸಂಬಂಧಪಡುವ ರಸ್ತೆ ಇದಾಗಿದ್ದು, ತಲ್ಲೂರು ಗ್ರಾ.ಪಂ. ಕಚೇರಿ ಬಳಿಯಿಂದ ಸುಮಾರು 2 ಕಿ.ಮೀ. ಅಂತರವಿದೆ. ಅನೇಕ ಕಡೆಗಳಲ್ಲಿ ರಸ್ತೆಯ ಮಧ್ಯೆ ಡಾಮರೆಲ್ಲ ಕಿತ್ತು ಹೋಗಿ, ಗುಂಡಿಗಳಾಗಿದ್ದು, ವಾಹನ ಸವಾರರು ಸಂಕಷ್ಟ ಅನುಭವಿಸುವಂತಾಗಿದೆ.
ದಶಕದ ಹಿಂದೆ ಕಾಮಗಾರಿ :
ಈ ಸಬ್ಲಾಡಿ ರಸ್ತೆ ಈ ಹಿಂದೆ ಅಭಿವೃದ್ಧಿಯಾಗಿದ್ದು ಸುಮಾರು 10 ವರ್ಷಗಳ ಹಿಂದೆ. ಆಗ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಈ ರಸ್ತೆಯ ಡಾಮರು ಹಾಗೂ ಕೆಲವೆಡೆಗಳಲ್ಲಿ ಕಾಂಕ್ರೀಟ್ ಕಾಮ ಗಾ ರಿಗೆ 1 ಕೋ.ರೂ. ಅನುದಾನ ಮಂಜೂರಾಗಿತ್ತು. 2 ಕಿ.ಮೀ. ವ್ಯಾಪ್ತಿಯ ಈ ರಸ್ತೆಯಲ್ಲಿ ಸುಮಾರು 200-250 ಮೀ.ವರೆಗೆ ಕಾಂಕ್ರೀಟ್, ಉಳಿದೆಡೆಗಳಲ್ಲಿ ಆಗ ಡಾಮರು ಕಾಮಗಾರಿ ಮಾಡಲಾಗಿತ್ತು.
100ಕ್ಕೂ ಮಿಕ್ಕಿ ಮನೆ :
ತಲ್ಲೂರು ಪಂಚಾಯತ್ ಕಚೇರಿ ಬಳಿಯಿಂದ ಸಬ್ಲಾಡಿಯವರೆಗೆ, ಅಲ್ಲಿಂದ ಪಾರ್ಥಿಕಟ್ಟೆ ಮಾರ್ಗಕ್ಕೂ ಈ ರಸ್ತೆ ಸಂಪರ್ಕ ಕಲ್ಪಿಸುತ್ತದೆ. ಸಬ್ಲಾಡಿ ಭಾಗದಲ್ಲಿ 100 ಕ್ಕೂ ಮಿಕ್ಕಿ ಮನೆಗಳಿದ್ದು, ಅವರೆಲ್ಲ ಇದೇ ರಸ್ತೆಯನ್ನು ಆಶ್ರಯಿಸಿದ್ದಾರೆ. ಪ್ರತಿ ನಿತ್ಯ ನೂರಾರು ವಾಹನಗಳು ಈ ಮಾರ್ಗವಾಗಿ ಸಂಚರಿಸುತ್ತವೆ.
ಸಬ್ಲಾಡಿ ರಸ್ತೆಯು ಅಭಿವೃದ್ಧಿಯು ದುರಸ್ತಿಯಾಗದೇ ಹಲವು ವರ್ಷಗಳೇ ಕಳೆದಿವೆ. 10 ವರ್ಷಗಳ ಹಿಂದೆ ಈ ರಸ್ತೆ ಅಭಿವೃದ್ಧಿಪಡಿಸಲಾಗಿತ್ತು. ಆ ಬಳಿಕ ಇಲ್ಲಿಯವರೆಗೆ ಯಾವುದೇ ಡಾಮರು ಅಥವಾ ಕಾಂಕ್ರೀಟ್ ಕಾಮಗಾರಿ ಆಗಿಲ್ಲ. ಈ ಬಾರಿಯಾದರೂ ಈ ರಸ್ತೆಯ ಅಭಿವೃದ್ಧಿಗೆ ಅನುದಾನ ಮಂಜೂರಾಗಲಿ. ಈ ಬಗ್ಗೆ ಈಗಾಗಲೇ ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಲಾಗಿದೆ. – ಸಂತೋಷ್ ಶೆಟ್ಟಿ ಸಬ್ಲಾಡಿ, ಸ್ಥಳೀಯ ಗ್ರಾ.ಪಂ. ಸದಸ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.