ರಜೆಯಲ್ಲಿ ತರಗತಿ ನಡೆಸಿ ಪಠ್ಯ ಪೂರ್ಣಗೊಳಿಸಿ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್
Team Udayavani, Oct 9, 2021, 6:15 AM IST
ಕೋಟ: ಕೋವಿಡ್ ಕಾರಣದಿಂದ ತರಗತಿ ಆರಂಭ ವಿಳಂಬವಾಗಿದ್ದರೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪಠ್ಯಕಡಿತ ಮಾಡುವ ಚಿಂತನೆ ಸರಕಾರದ ಮುಂದಿಲ್ಲ. ಮುಂದಿನ ವರ್ಷ ಶೈಕ್ಷಣಿಕ ವೇಳಾಪಟ್ಟಿಯಂತೆಯೇ ಪರೀಕ್ಷೆ, ತರಗತಿಗಳನ್ನು ಆರಂಭಿಸಬೇಕು ಎನ್ನುವ ಉದ್ದೇಶವಿದ್ದು, ಇದಕ್ಕಾಗಿ ಶನಿವಾರ, ರವಿವಾರ ಮತ್ತು ರಜಾ ದಿನಗಳಲ್ಲೂ ತರಗತಿ ಗಳನ್ನು ನಡೆಸಿ ಪಠ್ಯಕ್ರಮವನ್ನು ಆದಷ್ಟು ಶೀಘ್ರ ಪೂರ್ತಿಗೊಳಿಸಬೇಕು ಎಂದು ಶಿಕ್ಷಕ ಮಿತ್ರರಲ್ಲಿ ವಿನಂತಿಸಿ ಕೊಂಡಿದ್ದೇನೆ.ಶಿಕ್ಷಕರಿಂದಲೂ ಪೂರಕ ಪ್ರತಿಕ್ರಿಯೆ ಬಂದಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.
ಕೋಟ ಮಣೂರು-ಪಡುಕರೆ ಸರಕಾರಿ ಸಂಯುಕ್ತ ಪ್ರೌಢಶಾಲೆಗೆ ಭೇಟಿ ನೀಡಿದ ಸಂದರ್ಭ ಮಾಧ್ಯಮ ಗಳೊಂದಿಗೆ ಅವರು ಮಾತನಾಡಿದರು. ಕೋವಿಡ್ ಪರಿಣಾಮದಿಂದಾಗಿ ಪಠ್ಯ ಚಟುವಟಿಕೆಗೆ ಸಾಕಷ್ಟು ಹಿನ್ನಡೆಯಾಗಿದೆ. ಹೀಗಾಗಿ ಪಿಯುಸಿ, ಪದವಿ ತರಗತಿಗಳಿಗೆ ದಸರಾ ರಜೆಯನ್ನು ನೀಡಬಾರದು ಎನ್ನುವುದು ಶಿಕ್ಷಣ ಇಲಾಖೆಯ ಬಯಕೆಯಾಗಿತ್ತು.
ಆದರೆ ಈಗ ಹಬ್ಬದಲ್ಲಿ ಭಾಗವಹಿಸಬೇಕು ಎನ್ನುವ ಬೇಡಿಕೆ ಕೇಳಿಬರುತ್ತಿರುವುದರಿಂದ ರಜೆಯನ್ನು ಈ ವಿಭಾಗಕ್ಕೂ ವಿಸ್ತರಿಸುವ ಚಿಂತನೆ ಇದೆ ಎಂದರು.
ಇದನ್ನೂ ಓದಿ:ಐಟಿ ದಾಳಿಗೆ ಮುಖ್ಯಮಂತ್ರಿ ಉತ್ತರದಾಯಿ: ಕಾಂಗ್ರೆಸ್ ಟ್ವೀಟ್
ಎನ್.ಇ.ಪಿ. ವಿಸ್ತರಣೆ
ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಈಗಾಗಲೇ ಪದವಿ ಹಂತದಲ್ಲಿ ಜಾರಿಗೆ ತರಲಾಗಿದೆ. ಇದನ್ನು ಪಿಯುಸಿ ಮತ್ತು ಪ್ರೌಢಶಾಲೆ ಮುಂತಾದ ಕೆಳಹಂತದ ವಿಭಾಗಗಳಿಗೂ ವಿಸ್ತರಿಸುವ ಉದ್ದೇಶವಿದೆ. ಈ ಬಗ್ಗೆ ಟಾಸ್ಕ್ ಪೋರ್ಸ್‌ಗಳನ್ನು ರಚಿಸಲಾಗಿದ್ದು, ಅವು ಸಾಧಕ-ಬಾಧಕಗಳನ್ನು ಅಧ್ಯಯನ ನಡೆಸಿ ಸರಕಾರಕ್ಕೆ ನೀಡಲಿವೆ. ಅನಂತರ ಕೆಳಹಂತಕ್ಕೂ ಇದನ್ನು ವಿಸ್ತರಿಸಲಾಗುತ್ತದೆ ಎಂದರು.
ದಸರಾ ಬಳಿಕ 1ನೇ ತರಗತಿ ಆರಂಭ
ದಸರಾ ಅನಂತರ 1ನೆಯಿಂದ ಎಲ್ಲರಿಗೂ ಭೌತಿಕ ತರಗತಿಗಳನ್ನು ಆರಂಭಿಸುವ ನಿರ್ಧಾರದಲ್ಲಿ ಬದಲಾವಣೆ ಇಲ್ಲ. ಬಿಸಿಯೂಟವನ್ನೂ ಆರಂಭಿಸ ಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.