Gujjadi: ನಾಪತ್ತೆಯಾಗಿದ್ದ ವ್ಯಕ್ತಿ ಶವ ಹೊಳೆಯಲ್ಲಿ ಪತ್ತೆ
ಸಾವಿನಲ್ಲಿ ಸಂಶಯ ವ್ಯಕ್ತವಾಗಿದೆ.
Team Udayavani, Sep 21, 2024, 10:34 PM IST
ಗಂಗೊಳ್ಳಿ: ಸೇನಾಪುರ ಗ್ರಾಮದ ಗುಡ್ಡಮ್ಮಾಡಿಯ ತಮ್ಮ ಮನೆಯಿಂದ ಸೆ. 20 ರಂದು ನಾಪತ್ತೆಯಾಗಿದ್ದ ಕರುಣಾಕರ ಶೆಟ್ಟಿ (72) ಯಾನೆ ಕರಿಯಣ್ಣ ಅವರ ಮೃತದೇಹ ಶನಿವಾರ ಗುಜ್ಜಾಡಿ ಗ್ರಾಮದ ಕಳಿಹಿತ್ಲುವಿನ ಪಂಚಗಂಗಾವಳಿ ಹೊಳೆಯಲ್ಲಿ ಪತ್ತೆಯಾಗಿದೆ.
ಕುತ್ತಿಗೆ ತುಂಡಾಗಿದ್ದು, ತಲೆ ಹಾಗೂ ದೇಹ ಬೇರೆ ಬೇರೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನಲ್ಲಿ ಸಂಶಯ ವ್ಯಕ್ತವಾಗಿದೆ. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಕೆಂಚನೂರಿನ ತಮ್ಮ ಪುತ್ರಿಯ ಮನೆಯಲ್ಲಿದ್ದ ಕರುಣಾಕರ ಸೆ. 19ರಂದು ಗುಡ್ಡಮ್ಮಾಡಿಯ ತಮ್ಮ ಮನೆಗೆ ತೆರಳಿದ್ದರು. ಆ ದಿನ ರಾತ್ರಿ ಊಟ ಮಾಡಿ ಮಲಗಿದ್ದು ಮರುದಿನ ಬೆಳಗ್ಗೆ ನೋಡಿದಾಗ ಇರಲಿಲ್ಲ. ಅಕ್ಕಪಕ್ಕದ ಮನೆಯವರಲ್ಲಿ, ಸಂಬಂಧಿಕರಲ್ಲಿ ವಿಚಾರಿಸಿ, ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ.
ಸೆ. 21ರಂದು ಬೆಳಗ್ಗೆ ಕರುಣಾಕರ ಅವರ ಮೃತದೇಹವು ಕಳಿಹಿತ್ಲುವಿನ ಪಂಚಗಂಗಾವಳಿ ಹೊಳೆಯಲ್ಲಿ ಕುತ್ತಿಗೆ ತುಂಡಾಗಿ, ತಲೆ ಹಾಗೂ ದೇಹ ಬೇರೆ ಬೇರೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಸಾವಿನಲ್ಲಿ ಸಂಶಯವಿರುವುದಾಗಿದೆ. ಮಣಿಪಾಲದ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.
ಆತ್ಮಹತ್ಯೆ?:
ಈ ಹಿಂದೆಯೂ ಇವರು 2-3 ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಮನೆಯಿಂದ ಬಾವಿಯ ಹಳೆಯ ಹಗ್ಗವೊಂದನ್ನು ತೆಗೆದುಕೊಂಡು ಹೋಗಿದ್ದು, ಅದನ್ನು ಕುತ್ತಿಗೆಗೆ ಕಟ್ಟಿಕೊಂಡು ಬಂಟ್ವಾಡಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರಬಹುದು ಎನ್ನುವುದಾಗಿ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ.
ಅಳಿಯ ನಾರಾಯಣ ಶೆಟ್ಟಿ (60) ಅವರು ನೀಡಿದ ದೂರಿನಂತೆ ಗಂಗೊಳ್ಳಿ ಠಾಣೆ¿ಅಸ್ವಾಭಾವಿಕ ಸಾವು ಪ್ರಕರಣ ಪ್ರಕರಣ ದಾಖಲಾಗಿದೆ.
ಡಿವೈಎಸ್‌ಪಿ ಭೇಟಿ:
ಮೃತದೇಹ ಸಿಕ್ಕಿದ ಕಳಿಹಿತ್ಲು ಪ್ರದೇಶಕ್ಕೆ ಶನಿವಾರ ಕುಂದಾಪುರ ಉಪ ವಿಭಾಗದ ಡಿವೈಎಸ್‌ಪಿ ಬೆಳ್ಳಿಯಪ್ಪ ಕೆ.ಯು. ಅವರು ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಗಂಗೊಳ್ಳಿ ಎಸ್‌ಐ ಹರೀಶ್ ಆರ್.ಪೊಲೀಸ್ ಸಿಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Today World Fisheries Day: ಸಮಸ್ಯೆ ಗೂಡಾಗಿರುವ ಕರಾವಳಿಯ ಪ್ರಮುಖ ಆರ್ಥಿಕತೆ
Road Mishap: ಇನ್ನೋವಾ ಕಾರಿಗೆ ಇನ್ಸುಲೇಟರ್ ಲಾರಿ ಢಿಕ್ಕಿ; ನಾಲ್ವರು ಗಂಭೀರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.