ಉದಯವಾಣಿ ಫಾಲೋಅಪ್: ಅಂತೂ ಓದುಗರಿಗೆ ತೆರೆಯಿತು ಸಾರ್ವಜನಿಕ ಗ್ರಂಥಾಲಯ
Team Udayavani, Sep 13, 2020, 5:30 AM IST
ಸಾಂದರ್ಭಿಕ ಚಿತ್ರ
ಕುಂದಾಪುರ: ರಾಜ್ಯದಲ್ಲಿ ಲಾಕ್ಡೌನ್ ಸಡಿಲಿಕೆಗೊಂಡಿದ್ದರೂ, ಸಾರ್ವಜನಿಕ ಗ್ರಂಥಾಲಯಗಳು ತೆರೆಯದ ಬಗ್ಗೆ ಓದುಗರಿಂದ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಈಗ ರಾಜ್ಯ ಸರಕಾರ ಗ್ರಂಥಾಲಯಗಳನ್ನು ತೆರೆಯುವಂತೆ ಆದೇಶ ಹೊರಡಿಸಿದ್ದು, ಶನಿವಾರದಿಂದ ಓದುಗರಿಗೆ ಅವಕಾಶ ಕಲ್ಪಿಸಲಾಗಿದೆ.
ಸೆ. 11ರಂದು ಕಂಟೈನ್ಮೆಂಟ್ ವಲಯ ಹೊರತುಪಡಿಸಿ, ಉಳಿದ ಎಲ್ಲ ಕಡೆ ಸಾರ್ವಜನಿಕ ಗ್ರಂಥಾಲಯಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಥರ್ಮಲ್ ಸ್ಕ್ರೀನಿಂಗ್ ಸಹಿತ ಕೇಂದ್ರ ಹಾಗೂ ರಾಜ್ಯ ಸರಕಾರದ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವುದು ಕಡ್ಡಾಯವಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೇಜ್ ಅವರು ಆದೇಶ ಹೊರಡಿಸಿದ್ದಾರೆ. ಈ ಮೂಲಕ ಕಳೆದ 5 ತಿಂಗಳಿಗೂ ಹೆಚ್ಚು ಕಾಲದಿಂದ ಓದುಗರಿಗೆ ಬಂದ್ ಆಗಿದ್ದ ಗ್ರಂಥಾಲಯಗಳು ಈಗ ಮತ್ತೆ ತೆರೆದುಕೊಂಡಿವೆ.
ಉದಯವಾಣಿ ವರದಿ
ರಾಜ್ಯದಲ್ಲಿ ದೇಗುಲ, ರೆಸ್ಟೋರೆಂಟ್ ತೆರೆದರೂ ಸಾರ್ವಜನಿಕ ಗ್ರಂಥಾಲಯ ತೆರೆಯದಿರುವ ಬಗ್ಗೆ “ಉದಯವಾಣಿ’ಯು ಸೆ. 2ರಂದು ವಿಶೇಷ ವರದಿ ಪ್ರಕಟಿಸಿ ಗಮನ ಸೆಳೆದಿತ್ತು. ಆಗ ಪ್ರತಿಕ್ರಿಯಿಸಿದ್ದ ಸಾರ್ವಜನಿಕ ಇಲಾಖೆಯ ರಾಜ್ಯ ನಿರ್ದೇಶಕ ಡಾ| ಸತೀಶ್ ಎಸ್. ಹೊಸಮನೆ ಅವರು ಈ ಬಗ್ಗೆ ತ್ವರಿತವಾಗಿ ಸಂಬಂಧಪಟ್ಟವರಲ್ಲಿ ಮಾತುಕತೆ ನಡೆಸಿ, ಗ್ರಂಥಾಲಯ ಸಾರ್ವಜನಿಕರಿಗೆ ತೆರೆಯಲಾಗುವುದು ಎಂದು ಭರವಸೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.