ಕಾರ್ಯಕರ್ತರ ಕಷ್ಟಗಳಿಗೆ ಸ್ಪಂದಿಸುವವ ನಿಜವಾದ ನಾಯಕ: ಸಚಿವ ಕೋಟ
ಕೋಟತಟ್ಟು ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ
Team Udayavani, Mar 28, 2022, 10:42 AM IST
ಕೋಟ: ಕಾರ್ಯಕರ್ತರ ನೋವುಗಳಿಗೆ ಸ್ಪಂದಿಸುವಾತ ನಿಜವಾದ ನಾಯಕನಾಗುತ್ತಾನೆ ಹಾಗೂ ಅಂತಹ ಪಕ್ಷ ಅಸ್ಥಿತ್ವ ಉಳಿಸಿಕೊಳ್ಳುವಲ್ಲಿ ಮತ್ತೆ-ಮತ್ತೆ ಯಶಸ್ವಿಯಾಗುತ್ತದೆ ಎನ್ನುವುದಕ್ಕೆ ಕಾರ್ಯಕರ್ತರನ್ನು ಗೌರವಿಸುವ ಬಿಜೆಪಿ ಪಕ್ಷವೇ ಸಾಕ್ಷಿಯಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಅವರು ಕೋಟತಟ್ಟು ಗ್ರಾ.ಪಂ. ವ್ಯಾಪ್ತಿಯ ಹಂದಟ್ಟು ಹಾಗೂ ಪಡುಕರೆ ವಾರ್ಡ್‌ನ ಭಾರತೀಯ ಜನತಾ ಪಾರ್ಟಿಯ ಬೂತ್‌ಗಳ ಅಧ್ಯಕ್ಷರ ಮನೆಗೆ ನಾಮ ಫಲಕ ಅಳವಡಿಕೆ ಕಾರ್ಯಕ್ರಮ ಹಾಗೂ ಸಶಕ್ತ ಬೂತ್ – ಸದೃಢ ಭಾರತ ಅಧ್ಯಯನ ಹಾಗೂ ಪರಿಶೀಲನ ಸಭೆಯಲ್ಲಿ ಮಾತನಾಡಿದರು. ಕಾರ್ಯಕರ್ತರಿಗೆ ಬೂತ್ ಅಧ್ಯಕ್ಷರಿಗೆ ಉನ್ನತ ಗೌರವವನ್ನು ನೀಡಿದ ಪಕ್ಷವಿದ್ದರೆ ಅದು ಬಿಜೆಪಿ ಪಕ್ಷ, ಪಕ್ಷದ ಅಭಿವೃದ್ಧಿಗಾಗಿ ಎಲ್ಲರೂ ಒಟ್ಟಾಗಿ ಒಂದಾಗಿ ದುಡಿಯುವ ಎಂದರು.
ಈ ಸಂಧರ್ಭ ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಬಿಜೆಪಿ ಕುಂದಾಪುರ ಮಂಡಲದ ಪ್ರಭಾರಿ ಬೈಕಾಡಿ ಸುಪ್ರಸಾದ್ ಶೆಟ್ಟಿ, ಬಿಜೆಪಿ ಕುಂದಾಪುರ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಕುಂದಾಪುರ ಹಿಂದುಳಿದ ವರ್ಗಗಳ ಮೊರ್ಚಾ ಅಧ್ಯಕ್ಷ ಸತೀಶ್ ಕುಂದರ್ ಬಾರಿಕೆರಿ, ಕೋಟತಟ್ಟು ಶಕ್ತಿ ಕೇಂದ್ರದ ಅಧ್ಯಕ್ಷ ಪ್ರಮೊದ್ ಹಂದೆ, ಬೂತ್ ಅಧ್ಯಕ್ಷರಾದ ಪ್ರಭಾಕರ ಪೂಜಾರಿ ಹಂದಟ್ಟು, ರಾಮ ಎಂ. ಬಂಗೇರ, ರಮಾನಂದ ಮೆಂಡನ್ ಹಾಗೂ ಕೋಟತಟ್ಟು ಗ್ರಾ.ಪಂ. ಅಧ್ಯಕ್ಷೆ ಅಶ್ವಿನಿ ದಿನೇಶ್, ಉಪಾಧಕ್ಷ ವಾಸು ಪೂಜಾರಿ ಹಾಗೂ ಗ್ರಾ.ಪಂ. ಸದಸ್ಯರು, ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು. ಕೋಟತಟ್ಟು ಗ್ರಾ.ಪಂ. ಸದಸ್ಯ ಪ್ರಕಾಶ್ ಹಂದಟ್ಟು ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.