Kundapura ಅರಣ್ಯ ಪಾಲಾಗಿದ್ದ ಯುವಕ 8 ದಿನಗಳ ಬಳಿಕ ಪ್ರತ್ಯಕ್ಷ! ಕಾವಲಾಗಿ ಜತೆಗೇ ಇದ್ದ ಶ್ವಾನ


Team Udayavani, Sep 23, 2023, 10:42 PM IST

Kundapura ಅರಣ್ಯ ಪಾಲಾಗಿದ್ದ ಯುವಕ 8 ದಿನಗಳ ಬಳಿಕ ಪ್ರತ್ಯಕ್ಷ! ಕಾವಲಾಗಿ ಜತೆಗೇ ಇದ್ದ ಶ್ವಾನ

ಕುಂದಾಪುರ/ಸಿದ್ದಾಪುರ: ಕಳೆದ ಶನಿವಾರ ಕಾಡಿಗೆ ತೆರಳಿ ನಾಪತ್ತೆಯಾಗಿದ್ದ ಯುವಕ ಈಗ ದಟ್ಟ ಅಡವಿಯೊಳಗೆ 8 ದಿನಗಳ ಕಾಲ ಕಳೆದು ಪ್ರತ್ಯಕ್ಷವಾದ ಘಟನೆ ಶನಿವಾರ ಅಮಾಸೆಬೈಲು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮಚ್ಚಟ್ಟು ಗ್ರಾಮದ ತೊಂಬಟ್ಟುವಿನಲ್ಲಿ ನಡೆದಿದೆ.

ಇರ್ಕಿಗದ್ದೆ ಶೀನ ನಾಯ್ಕ ಅವರ ಪುತ್ರ ವಿವೇಕಾನಂದ (28) ಸೆ. 16ರ ಮಧ್ಯಾಹ್ನ ಕಂಬಕ್ಕಾಗಿ ಮರವೊಂದನ್ನು ಕಡಿದು ತರಲೆಂದು ಹೋಗಿದ್ದು, ದಾರಿ ತಪ್ಪಿ ಅರಣ್ಯದಲ್ಲಿ ಕಾಣೆಯಾಗಿದ್ದರು. ಇಂದು ಮನೆಯಿಂದ 4 ಕಿ.ಮೀ. ದೂರದ ಕಬ್ಬಿನಾಲೆಯ ಕಾಡಿನ ಸಮೀಪ ಪತ್ತೆಯಾಗಿದ್ದಾರೆ. ಅವರೊಂದಿಗೆ ತೆರಳಿದ್ದ ನಾಯಿ ಜತೆಗೇ ಇದ್ದು ಸ್ವಾಮಿನಿಷ್ಠೆ ಮೆರೆದಿದೆ.

ಘಟನೆಯ ಹಿನ್ನೆಲೆ
ಸೆ. 16ರ ಮಧ್ಯಾಹ್ನ ವಿವೇಕಾನಂದ ಕಾಡಿಗೆ ಹೋಗಿದ್ದರು. ಜತೆಗೆ 2 ಸಾಕುನಾಯಿಗಳೂ ಹೋಗಿದ್ದವು. ಅದರಲ್ಲೊಂದು ಮರಳಿತ್ತು. ಮನೆಯವರಿಗೆ ಆತ ಕಾಡಿಗೆ ತೆರಳಿದ್ದು ಗೊತ್ತಿರಲಿಲ್ಲ. ಹಳೆಯ ಮಾಳಿಗೆ ಮನೆಯಾಗಿದ್ದರಿಂದ ಮಧ್ಯಾಹ್ನ ಊಟ ಮಾಡಿ ಮಹಡಿಯಲ್ಲಿ ಮಲಗಿರಬಹುದು ಅಂದು ಕೊಂಡಿದ್ದರು. ಸಂಜೆಯಾದಾಗ ಆತ ಕಾಣಿಸದ ಕಾರಣ ಆತಂಕಗೊಂಡ ಮನೆಯವರು ಅಕ್ಕಪಕ್ಕದವರಿಗೆ ಸುದ್ದಿ ತಿಳಿಸಿ ಹುಡುಕಾಟ ಆರಂಭಿಸಿದರು. ರಾತ್ರಿ 12ರ ವರೆಗೂ ಕಾಡಿನಲ್ಲಿ ನೂರಾರು ಜನ ಹುಡುಕಾಡಿದರು. ರವಿವಾರ ಅಮಾಸೆಬೈಲು ಪೊಲೀಸರು, ಅರಣ್ಯ ಇಲಾಖೆಯವರು ಸೇರಿ 200 ಜನ ಹುಡುಕಾಡಿದರು. ಬಳಿಕ ಶುಕ್ರವಾರದವರೆಗೆ ಪ್ರತೀ ದಿನ ನೂರಕ್ಕೂ ಮಿಕ್ಕಿ ಜನ ಹುಡುಕಾಡಿದರೂ ಪ್ರಯೋಜನ ಆಗಿರಲಿಲ್ಲ.

8ನೇ ದಿನ ಪ್ರತ್ಯಕ್ಷ: 8ನೇ ದಿನವಾದ ಶನಿವಾರ ಮನೆಯಿಂದ 4 ಕಿ.ಮೀ. ದೂರದ ಕಾಡಿನ ಅಂಚಿನಲ್ಲಿದ್ದ ಕಬ್ಬಿನಾಲೆ ಜಗನ್ನಾಥ ಶೆಟ್ಟಿಗಾರ್‌ ಅವರ ಮನೆಯ ಬಳಿ ಕಾಡಿನಿಂದ ಇಳಿದು ಬರುತ್ತಿರುವ ಯುವಕನ್ನು ನೋಡಿದ ಮನೆಯವರು ಒಳಗೆ ಕರೆದೊಯ್ದು ಉಪಚರಿಸಿ ಊರಿನವರಿಗೆ ಮಾಹಿತಿ ನೀಡಿದರು. ಆಗ ಆತನೇ ವಿವೇಕಾನಂದ ಎಂಬ ವಿಚಾರ ತಿಳಿಯಿತು. ಆಹಾರವಿಲ್ಲದೆ ತೀವ್ರ ಬಳಲಿದ್ದ ಆತನನ್ನು ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ನಡೆಸಿದ್ದು, ಯಾವುದೇ ಆತಂಕವಿಲ್ಲವೆಂದು ವೈದ್ಯರು ತಿಳಿಸಿದ್ದಾರೆ.

ರಕ್ಷಿಸಿದ ಶ್ವಾನ
ಯುವಕ ನಾಪತ್ತೆಯಾಗಿರುವ ಪ್ರದೇಶ ದಟ್ಟ ಅಡವಿಯಾಗಿದ್ದು, ಚಿರತೆ, ಕಾಡು ಹಂದಿ, ಕಾಡು ಕೋಣದಂತಹ ಕಾಡು ಪ್ರಾಣಿಗಳು ಇವೆ. ರಾತ್ರಿ ವೇಳೆಯಲ್ಲಿ ಒಬ್ಬನೇ ಸಂಚರಿಸುವುದು ಅಸಾಧ್ಯ. ಆದರೆ ಜತೆಗಿದ್ದ ಶ್ವಾನವು ತನಗೆ ಯಾವುದೇ ಆಹಾರವಿಲ್ಲದಿದ್ದರೂ ಎಡೆಬಿಡದೆ ಒಡೆಯನ ಜತೆಗಿದ್ದು ರಕ್ಷಿಸಿತು ಎನ್ನಲಾಗಿದೆ.
ಕೊನೆಗೆ ಅಡವಿಯಂಚಿನ ತೊಂಬಟ್ಟು ಗಾಳಿಗುಡ್ಡೆಯ ಶ್ರೀ ಈಶ್ವರ ದೇವಸ್ಥಾನದ ಬಳಿಗೆ ಬಂದ ವಿವೇಕಾನಂದ ಅವರಿಗೆ ತಾನು ಇರುವ ಜಾಗದ ಬಗ್ಗೆ ಅರಿವಿಗೆ ಬಂದಿತು. ಬಳಿಕ ಸ್ಥಳೀಯರು ಮನೆಯ ದಾರಿ ತೋರಿಸಿದರು. ನನ್ನೂರಿನ ಮಹಾಗಣಪತಿಯನ್ನು ಪ್ರಾರ್ಥಿಸಿದೆ. ಹಾಗಾಗಿ ಸುರಕ್ಷಿತವಾಗಿ ಮರಳಿದೆ ಎಂದು ವಿವೇಕಾನಂದ ಹೇಳಿದ್ದಾರೆ.

ಶಾಸಕರ ಭೇಟಿ
ವಿವೇಕಾನಂದ ಪತ್ತೆಯಾದ ಸುದ್ದಿ ತಿಳಿಯುತ್ತಿದ್ದಂತೆ ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ಅವರು ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಶುಕ್ರವಾರ ಮಾಜಿ ಶಾಸಕ ಗೋಪಾಲ ಪೂಜಾರಿ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ್ದರು.

ಹೇಗಿದ್ದ ಇಷ್ಟು ದಿನ?
ವಿವೇಕಾನಂದನಿಗೆ ಸ್ವಲ್ಪ ಸಮಯದಿಂದ ಅನಾರೋಗ್ಯ ಸಮಸ್ಯೆಯೂ ಇದ್ದು, ಆದ್ದರಿಂದಲೇ ಕಾಡಿನಿಂದ ಮರಳಿ ಬರಲು ಆಗಿರಲಿಲ್ಲ. ಹಗಲೆಲ್ಲ ನಾಯಿಯೊಂದಿಗೆ ಕಾಡಿನೊಳಗೆ ಅಲೆಯುತ್ತಿದ್ದು ಸಂಜೆಯಾಗುತ್ತಿದ್ದಂತೆ, ಮರದ ಬುಡ ಅಥವಾ ಕಲ್ಲು ಬಂಡೆಯ ಮೇಲೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದರು. ನಾಯಿ ಜತೆಗೇ ಇರುತ್ತಿತ್ತು. ಕಾಡಿನ ಹಣ್ಣು-ಕಾಯಿಗಳನ್ನು ತಿನ್ನುತ್ತ, ತೊರೆಯ ನೀರನ್ನು ಕುಡಿಯುತ್ತಿದ್ದರು. ನಾಯಿಯೂ ಸಂಪೂರ್ಣ ಬಳಲಿದೆ. ವಿವೇಕಾನಂದ ಇನ್ನಷ್ಟೇ ಚೇತರಿಸಬೇಕಾಗಿರುವುದರಿಂದ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

ಟಾಪ್ ನ್ಯೂಸ್

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

17

ಪೋಕ್ಸೋ ಪ್ರಕರಣ: “ಬಿ’ ವರದಿ ತಿರಸ್ಕರಿಸಿ ಪ್ರಕರಣಕ್ಕೆ ಮರುಜೀವ ನೀಡಿದ ನ್ಯಾಯಾಲಯ

12

Udupi: ಕೆಲಸಕ್ಕೆ ಸೇರಿದ ವ್ಯಕ್ತಿಯಿಂದ ಚಿನ್ನ ಕಳವು

9

Uppur: ಮೃತದೇಹ ಪತ್ತೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

subharamaya-Swamiji

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.