ಮುಸುಕುಧಾರಿ ತಂಡದಿಂದ ಕಳವು ಯತ್ನ: 3 ತಿಂಗಳ ಬಳಿಕ ಮೂವರು ಆರೋಪಿಗಳ ಬಂಧನ


Team Udayavani, Apr 5, 2024, 7:11 AM IST

ಮುಸುಕುಧಾರಿ ತಂಡದಿಂದ ಕಳವು ಯತ್ನ: 3 ತಿಂಗಳ ಬಳಿಕ ಮೂವರು ಆರೋಪಿಗಳ ಬಂಧನ

ತೆಕ್ಕಟ್ಟೆ: ಇಲ್ಲಿನ ರಾ.ಹೆ. 66ರ ಸಮೀಪ ಶಾನುಭಾಗ್‌ ಕಾಂಪ್ಲೆಕ್ಸ್‌ನಲ್ಲಿರುವ ಚಿನ್ನದ ಅಂಗಡಿಗೆ ಮುಸುಕುಧಾರಿ ಕಳ್ಳರ ತಂಡವೊಂದು ಕಳವಿಗೆ ಯತ್ನ ನಡೆಸಿದ ಘಟನೆ ಕಳೆದ ಡಿಸೆಂಬರ್‌ ತಿಂಗಳಿನಲ್ಲಿ ನಡೆದಿತ್ತು.

ಈ ಕುರಿತು ಯಾವುದೇ ಪ್ರಕರಣ ದಾಖಲಾಗದ ಹಿನ್ನೆಲೆಯಲ್ಲಿ ಜ. 1ರಂದು “ಉದಯವಾಣಿ’ಯಲ್ಲಿ ಸಿಸಿ ಟಿವಿ ದೃಶ್ಯಾವಳಿಯ ಆಧಾರದಲ್ಲಿ ವರದಿ ಪ್ರಕಟಿಸಲಾಗಿತ್ತು. ಅನಂತರದಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಅರುಣ್‌ ಕೆ. ಅವರ ಆದೇಶದಂತೆ ಪ್ರಕರಣ ದಾಖಲಿಸಿ ತನಿಖೆ ಚುರುಕುಗೊಳಿಸಿದ ಕೋಟ ಪೊಲೀಸರು ಸುಮಾರು 3 ತಿಂಗಳ ಬಳಿಕ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಯ ಕಳ್ಳತನ ಕೃತ್ಯದಲ್ಲಿ ಭಾಗಿಯಾಗಿದ್ದ ನಂತೂರಿನ ಅರ್ಷಿತ್‌ ಅವಿನಾಶ್‌ ದೋಡ್ರೆ ಯಾನೆ ಮಹಮ್ಮದ್‌ ಅರ್ಷದ್‌ (23), ಬೈಂದೂರು ಪಡುವರಿಯ ರಿಝಾÌನ್‌ (24) ಹಾಗೂ ಮಹಮ್ಮದ್‌ ಅರ್ಬಾಝ್ (23) ಬಂಧಿತರು.

ಘಟನೆಯ ವಿವರ :

ಇಲ್ಲಿನ ರಾ.ಹೆ. 66ರ ಸಮೀಪ ತೆಕ್ಕಟ್ಟೆ ಕೆನರಾ ಬ್ಯಾಂಕ್‌ನ ಹತ್ತಿರದಲ್ಲಿದ್ದ ಸಮೃದ್ಧಿ ಕಾಂಪ್ಲೆಕ್ಸ್‌ನಲ್ಲಿರುವ ಮೀನಾಕ್ಷಿ ಫರ್ನಿಚರ್‌ ಶೋ ರೂಮ್‌, ಗೋದಾಮು, ಟೈಲರ್‌ ಶಾಪ್‌ನ ಶಟರ್‌ ಬೀಗ ಮುರಿದು ಒಳ ಪ್ರವೇಶಿಸಿದ್ದ ಕಳ್ಳರು ಡಿ. 21ರಂದು ಕಳವಿಗೆ ವಿಫಲ ಯತ್ನ ನಡೆಸಿದ್ದರು. ಅನಂತರ ಡಿ. 29ರಂದು ಇಬ್ಬರು ಮುಸುಕುಧಾರಿ ಕಳ್ಳರು ಮಾರಕಾಸ್ತ್ರಗಳನ್ನು ಹಿಡಿದು ಪ್ರಮುಖ ಭಾಗದ ಶಾನುಭಾಗ್‌ ಕಾಂಪ್ಲೆಕ್ಸ್‌ನಲ್ಲಿರುವ ಚಿನ್ನದ ಅಂಗಡಿಯ ಬೀಗ ಮುರಿಯಲು ಪ್ರಯತ್ನಿಸಿ ಇನ್ನುಳಿದ ಅಂಗಡಿಗಳನ್ನು ವೀಕ್ಷಿಸಿ ಕಳವಿಗೆ ಯತ್ನ ನಡೆಸಿದ್ದರು. ಕಾಂಪ್ಲೆಕ್ಸ್‌ನಲ್ಲಿ ಅಳವಡಿಸಿದ್ದ ಸಿಸಿ ಕೆಮರಾದಲ್ಲಿ ಕಳ್ಳರ ಚಲನವಲನ ಸೆರೆಯಾಗಿದ್ದು, ಈ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಆದರೂ ಅಂಗಡಿ ಮಾಲಕರು ಪೊಲೀಸರ ಗಮನಕ್ಕೆ ತರಲು ಹಿಂದೇಟು ಹಾಕಿದ್ದರು.

ಕೋಟ ಪೊಲೀಸ್‌ ಠಾಣಾ ವ್ಯಾಪ್ತಿಯ ತೆಕ್ಕಟ್ಟೆಯ ಚಿನ್ನದ ಅಂಗಡಿ, ಹಳ್ಳಾಡಿಯ ತಲ್ಲೂರು ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌, ಬೇಕರಿ, ಕೋಟ ಮೂರುಕೈಯ ವಿವೇಕ ಮೆಡಿಕಲ್‌ ಶಾಪ್‌, ಸಾೖಬ್ರಕಟ್ಟೆ ನಂದಿಕೇಶ್ವರ ಹೊಟೇಲ್‌ನಲ್ಲಿ ಕಳ್ಳತನಕ್ಕೆ ಯತ್ನ ನಡೆಸಿದ್ದರು. ಎ. 4ರಂದು ಘಟನ ಸ್ಥಳಕ್ಕೆ ಆರೋಪಿಗಳನ್ನು ಕರೆತಂದು ಮಹಜರು ನಡೆಸಲಾಗಿದೆ. ಕಾರ್ಯಾಚರಣೆಯಲ್ಲಿ ಕೋಟ ಪೊಲೀಸ್‌ ಠಾಣೆಯ ಪಿಎಸ್‌ಐ ಸುಧಾ ಪ್ರಭು, ಎಎಸ್‌ಐ ರವಿ ಕುಮಾರ್‌, ಸಿಬಂದಿ ಪ್ರಸನ್ನ ಮಾಲಾಡಿ, ವಿಜೇಂದ್ರ, ರಾಘವೇಂದ್ರ, ಗಣೇಶ್‌, ರೇವತಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Agri

State Government Programme: ರೈತರಿಂದ ದೂರ ಸರಿದ ಕೃಷಿ ಯಂತ್ರಧಾರೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

2

Udupi: ಯುವತಿ ನಾಪತ್ತೆ; ದೂರು ದಾಖಲು

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

Devadurga

Karkala: ಅಕ್ರಮ ಮದ್ಯ ದಾಸ್ತಾನು; ಆರೋಪಿ ಸೆರೆ

Brahmavar

Malpe: ಅಸ್ವಾಭಾವಿಕ ಸಾವು; ಪ್ರಕರಣ ದಾಖಲು

WhatsApp Image 2024-11-17 at 21.09.50

Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.