Theft Case ಕೋಟ: ವಿವಿಧ ಕಡೆ ಸರಣಿ ಕಳ್ಳತನ
Team Udayavani, Mar 2, 2024, 12:58 AM IST
ಕೋಟ: ಕೋಟ ಠಾಣೆಯ ಹಳ್ಳಾಡಿ-ಹರ್ಕಾಡಿಯ ಖಾಸಗಿ ಬಾರ್ ಸೇರಿದಂತೆ ವಿವಿಧ ಕಡೆಗಳಲ್ಲಿ ಸರಣಿ ಕಳ್ಳತನ ನಡೆದ ಘಟನೆ ಫೆ. 29ರಂದು ರಾತ್ರಿ ಸಂಭವಿಸಿದೆ.
ಬಾರ್‌ನ ಬೀಗ ಒಡೆದ ಕಳ್ಳರು ಸುಮಾರು 50 ಸಾವಿರ ರೂ ಹಣ ಹಾಗೂ 4 ಸಾವಿರ ಮೌಲ್ಯದ ಮದ್ಯದ ಬಾಟಲಿಗಳನ್ನು ಕಳವು ಮಾಡಿದ್ದಾರೆ. ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನ ಸ್ಥಳಕ್ಕೆ ಉಡುಪಿ ಡಿವೈಎಸ್‌ಪಿ ಪ್ರಭು ಡಿ.ಟಿ., ಬ್ರಹ್ಮಾವರ ವೃತ್ತನಿರೀಕ್ಷಕ ದಿವಾಕರ ಪಿ.ಎಂ., ಕೋಟ ಪೊಲೀಸ್ ಠಾಣೆ ಉಪನಿರೀಕ್ಷಕ ತೇಜಸ್ವಿ, ಕ್ರೈಂ ವಿಭಾಗದ ಉಪನಿರೀಕ್ಷಕಿ ಸುಧಾ ಪ್ರಭು, ಹಾಗೂ ಸಿಬಂದಿಗಳಾದ ರಾಘು, ಪ್ರಸನ್ನ, ವಿಜಯ್ ಮೊದಲಾದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಸರಣಿ ಕಳ್ಳತನ
ಕೋಟ ಮೂಕೈಯಿಂದ ಸಾೖಬ್ರಕಟ್ಟೆ ರಸ್ತೆಯಲ್ಲಿ ಹಾರ್ಡ್ ವೇರ್, ಗ್ರಾಮ ಒನ್ ಕೇಂದ್ರ, ಬಾರ್ ಸಮೀಪದ ಬೀಡ ಅಂಗಡಿ, ಎರಡು ಕಿರಾಣಿ ಅಂಗಡಿಗಳಿಗೆ ನುಗ್ಗಿದ ಕಳ್ಳರು ಬೀಗ ಮುರಿದು ಒಳನುಗ್ಗಿದ್ದಾರೆ. ಆದರೆ ಕೆಲವು ಕಡೆ ಹೆಚ್ಚಿನ ಮೊತ್ತ ಸಿಕ್ಕಿಲ್ಲ. ನಗದು ಸಿಗದ ಕಡೆಗಳಲ್ಲಿ ದೇವರ ಡಬ್ಬಿಯನ್ನು ಬಿಡದೆ ಕದ್ದೊಯ್ದಿದ್ದಾರೆ ಎನ್ನಲಾಗಿದೆ.
ಹಳ್ಳಾಡಿ-ಹರ್ಕಾಡಿ ಎರಡು ಕಡೆ, ಸಾೖಬ್ರಕಟ್ಟೆ ಒಂದು ಅಂಗಡಿ ಸೇರಿದಂತೆ ಮೂರು ಪ್ರಕರಣಗಳು ಮಾತ್ರ ದಾಖಲಾಗಿದ್ದು, ಹೆಚ್ಚಿನ ಮೊತ್ತ ಕಳವಾಗಿಲ್ಲ ಎನ್ನುವ ಕಾರಣಕ್ಕೆ ಕೆಲವು ಅಂಗಡಿ ಮಾಲಕರು ದೂರು ನೀಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.