Thekkatte ರಾ.ಹೆ.66: ಕಾಡುತ್ತಿದೆ ಒಳಚರಂಡಿ ಸಮಸ್ಯೆ
Team Udayavani, May 23, 2023, 3:36 PM IST
ತೆಕ್ಕಟ್ಟೆ : ಮೊದಲ ಮಳೆಗೆ ತೆಕ್ಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ತೆಕ್ಕಟ್ಟೆ ರಾ.ಹೆ.66 ರಲ್ಲಿ ಒಳಚರಂಡಿ ಸಮಸ್ಯೆಯಿಂದಾಗಿ ರಸ್ತೆ ಇಕ್ಕೆಲಗಳಲ್ಲಿ ಮಳೆ ನೀರು ಶೇಖರಣೆಯಾಗುವ ಪರಿಣಾಮ ಪಾದಚಾರಿಗಳು ಅಪಾಯದ ನಡುವೆ ಸಂಚರಿಸಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ.
ಅವ್ಯವಸ್ಥಿತ ಒಳಚರಂಡಿ
ಮುಂಗಾರು ಮಳೆ ಆಗಮನದ ನಿರೀಕ್ಷೆಯಲ್ಲಿ ರುವ ರೈತಾಪಿ ವರ್ಗ ಒಂದೆಡೆಯಾದರೆ ಮತ್ತೂಂದೆಡೆಯಲ್ಲಿ ರಾ.ಹೆ.66ರ ಬದಿಯಲ್ಲಿ ಸಮರ್ಪಕವಾದ ಒಳಚರಂಡಿ ಸಮಸ್ಯೆಯಿಂದಾಗಿ ತೆಕ್ಕಟ್ಟೆ ಪ್ರಮುಖ ಭಾಗದ ತೆಕ್ಕಟ್ಟೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗ, ತೆಕ್ಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ಸಮೀಪ, ಕನ್ನುಕೆರೆ ಮಸೀದಿ ಎದುರು ಹಾಗೂ ತೆಕ್ಕಟ್ಟೆ ಪ್ರಮುಖ ಸರ್ಕಲ್‌ನಲ್ಲಿ ಮಳೆ ನೀರು ಸಮರ್ಪಕವಾಗಿ ಹರಿಯದೇ ರಸ್ತೆಯ ಇಕ್ಕೆಲದಲ್ಲೇ ನಿಂತಿರುವ ಪರಿಣಾಮ ಇಲ್ಲಿನ ಮೆಡಿಕಲ್, ಹೋಟೆಲ್, ದಿನಸಿ ಅಂಗಡಿ ಸೇರಿದಂತೆ ಅಗತ್ಯ ವಸ್ತುಗಳಿಗಾಗಿ ಪ್ರಮುಖ ಪೇಟೆಗೆ ಆಗಮಿಸುವ ಸ್ಥಳೀಯರು ಹಾಗೂ ವಾಹನ ಸವಾರರು ನಿತ್ಯ ತೊಂದರೆ ಅನುಭವಿಸುವಂತಾಗಿದೆ.
ಎಚ್ಚೆತ್ತುಕೊಳ್ಳದ ಹೆ. ಪ್ರಾಧಿಕಾರ
ಜಿಲ್ಲೆಯ ರಾ.ಹೆ.66ರ ಒಳಚರಂಡಿಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯಗಳು ಸಂಗ್ರಹವಾಗಿರುವ ಪರಿಣಾಮ ಮಳೆ ನೀರು ಸರಾಗವಾಗಿ ಹರಿಯದೇ ಗ್ರಾಮೀಣ ಭಾಗದಲ್ಲಿ ಕೃತಕ ನೆರೆ ಸೃಷ್ಟಿಯಾಗಿ ಸಾರ್ವಜನಿಕರು ತೊಂದರೆ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಒಳಚರಂಡಿ ನಿರ್ವಹಣೆ ಕೊರತೆ ಕಾಣುತ್ತಿದ್ದು ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
ಅಧಿಕಾರಿಗಳ ಗಮನಕ್ಕೆ ತರಲಾಗಿದೆ
ಗ್ರಾ.ಪಂ. ವ್ಯಾಪ್ತಿಯಲ್ಲಿನ ರಾ.ಹೆ. 66ರಲ್ಲಿನ ಒಳಚರಂಡಿ ಸಮಸ್ಯೆಗಳ ಬಗ್ಗೆ ಗ್ರಾ.ಪಂ. ಅನುದಾನ ಬಳಸಲು ಅವಕಾಶವಿಲ್ಲ. ಈಗಾಗಲೇ ಹೆದ್ದಾರಿ ಪ್ರಾಧಿಕಾರದವರು ರಸ್ತೆಯ ಎರಡು ಕಡೆಗಳಲ್ಲಿ ಸುಮಾರು 40 ಮೀಟರ್ ಅಂತರವನ್ನು ಸ್ವಾಧೀನಪಡಿಸಿಕೊಂಡಿ ರುವುದರಿಂದ ಹೆದ್ದಾರಿ ಪ್ರಾಧಿಕಾರದವರು ಜವಾಬ್ದಾರಿಯುತವಾಗಿ ನಿರ್ವಹಿಸಬೇಕಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೂ ಕೂಡ ತರಲಾಗುವುದು.
-ಮಮತಾ ದೇವಾಡಿಗ, ಅಧ್ಯಕ್ಷರು, ಗ್ರಾ.ಪಂ. ತೆಕ್ಕಟ್ಟೆ
ತುರ್ತು ಕ್ರಮ ಅಗತ್ಯ
ಈಗಾಗಲೇ ತೆಕ್ಕಟ್ಟೆ ಪ್ರಮುಖ ಭಾಗ ಸೇರಿದಂತೆ ರಾ.ಹೆ.66 ಸಮರ್ಪಕ ಒಳಚರಂಡಿಗಳೇ ಇಲ್ಲದೇ ಇರುವ ಪರಿಣಾಮ ಮಳೆಗಾಲದ ಸಂದರ್ಭದಲ್ಲಿ ಕೃತಕ ನೆರೆ ಸೃಷ್ಟಿಯಾಗಿ ಸಂಭವನೀಯ ಅವಘಡಗಳು ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ತುರ್ತುಕ್ರಮ ಕೈಗೊಳ್ಳಬೇಕಾಗಿದೆ. – ಶ್ರೀನಾಥ ಶೆಟ್ಟಿ ಮೇಲ್ತಾರು ಮನೆ, ಸ್ಥಳೀಯರು
– ಟಿ.ಲೋಕೇಶ್ ಆಚಾರ್ಯ ತೆಕ್ಕಟ್ಟೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.