Thekkatte: ಹೆದ್ದಾರಿ ಹೊಡೆತದಿಂದ ತೆಕ್ಕಟ್ಟೆ ಕನ್ನಡ ಶಾಲೆ ಉಳಿಸಿ
ಪಾರಂಪರಿಕ ಕಟ್ಟಡ ಉಳಿಸಿ, ಇಲ್ಲವೇ ಶೈಕ್ಷಣಿಕ ವರ್ಷಾಂತ್ಯದವರೆಗೆ ಸಮಯ ಕೊಡಿ: ಗ್ರಾಮಸ್ಥರ ಆಗ್ರಹ
Team Udayavani, Oct 24, 2024, 5:10 PM IST
ತೆಕ್ಕಟ್ಟೆ: ಶತಮಾನೋತ್ತರ ಬೆಳ್ಳಿಹಬ್ಬ ಆಚರಿಸಿದ ತೆಕ್ಕಟ್ಟೆ ಪಿಎಂಶ್ರೀ ಕುವೆಂಪು ಶತಮಾನೊತ್ಸವ ಸರಕಾರಿ ಮಾದರಿ ಶಾಲೆಯ ಕಟ್ಟಡವನ್ನು ರಾಷ್ಟ್ರೀಯ ಹೆದ್ದಾರಿ 66ರ ವಿಸ್ತರಣೆ ಹೊಡೆತದಿಂದ ರಕ್ಷಿಸಿ ಎಂಬ ಕೂಗು ಜೋರಾಗಿದೆ.
ಶಾಲಾ ಶತಮಾನೋತ್ಸವ ಸಂದರ್ಭದಲ್ಲಿ ದಾನಿಗಳ ಸಹಕಾರದಿಂದ ನಿರ್ಮಾಣವಾಗಿರುವ ಶಾಲಾ ಕಟ್ಟಡವನ್ನು ಶೇ.70 ರಷ್ಟು ತೆರವುಗೊಳಿಸಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ. ಆದರೆ, ಇದನ್ನು ತೆರವುಗೊಳಿಸಿದರೆ 130ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ತರಗತಿ ಕೋಣೆಯ ಕೊರತೆ ಎದುರಾಗಲಿದೆ.
1892ರಲ್ಲಿ ಸ್ಥಾಪಿತಗೊಂಡ ತೆಕ್ಕಟ್ಟೆ ಪಿಎಂಶ್ರೀ ಕುವೆಂಪು ಶತಮಾನೋತ್ಸವ ಸರಕಾರಿ ಮಾದರಿ ಶಾಲೆಯು ಗುಣಾತ್ಮಕ ಶಿಕ್ಷಣಕ್ಕಾಗಿ ರಾಜ್ಯ ಪ್ರಶಸ್ತಿ ಪಡೆದಿದೆ. ಇಲಾಖೆಯಿಂದ ಎ ಗ್ರೇಡ್ ಪಡೆದು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆಶಾಕಿರಣವಾಗಿದೆ. ಇಲ್ಲಿ ಸುಮಾರು 672 ವಿದ್ಯಾರ್ಥಿಗಳು ಅಧ್ಯಯನ ನಡೆಸುತ್ತಿದ್ದು, ಇಂಥ ಶಾಲೆಯ ಕಟ್ಟಡಕ್ಕೆ ಈಗ ಗ್ರಹಣ ಬಡಿದಿದೆ.
ಏನಿದು ಸಮಸ್ಯೆ?
1996ರಲ್ಲಿ ಶತಮಾನೋತ್ಸವ ಕಟ್ಟಡ ನಿರ್ಮಾಣವಾಗಿದ್ದು, ಅದರಲ್ಲಿನ 5 ತರಗತಿ ಕೋಣೆಗಳಲ್ಲಿ 2,4,5, ಹಾಗೂ 7ನೇ ತರಗತಿಯ ಸುಮಾರು 130ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಕುಂದಾಪುರ – ಸುರತ್ಕಲ್ ರಾ.ಹೆ.66 ಚತುಷ್ಪಥ ರಸ್ತೆ ಕಾಮಗಾರಿಯ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಸರ್ವಿಸ್ ರಸ್ತೆ ನಿರ್ಮಾಣಕ್ಕಾಗಿ ಈ ಕಟ್ಟಡವನ್ನು ತೆರವು ಮಾಡಬೇಕು ಎಂದು ಸೂಚಿಸಿದೆ. ಅ.18ರಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾಜೆಕ್ಟ್ ಡೈರೆಕ್ಟರ್ ಅಬ್ದುಲ್ ಜಾವಿದ್ ಅವರ ತಂಡ ಸ್ಥಳಕ್ಕೆ ಧಾವಿಸಿ ಕಟ್ಟಡ ತೆರವಿಗೆ ಕೊನೆಯ ಸೂಚನೆ ನೀಡಿದೆ.
ವಿದ್ಯಾರ್ಥಿಗಳಿಗೆ ತೊಂದರೆ
ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗದಂತೆ ಕ್ರಮ ವಹಿಸುವಂತೆ ಈಗಾಗಲೇ ಸಂಬಂಧ ಹೆದ್ದಾರಿ ಪ್ರಾಧಿಕಾರಕ್ಕೆ ಪತ್ರ ಬರೆಯಲಾಗಿದೆ. ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಎರಡನೆಯ ಸ್ಥಾನದಲ್ಲಿರುವ ಸಂಸ್ಥೆಯ ಕಟ್ಟಡ ತೆರವಿಗೆ ಏಕಾಏಕಿ ಮುಂದಾದರೆ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಈ ಕುರಿತು ವಿದ್ಯಾಂಗ ಉಪನಿರ್ದೇಶಕರು ಹಾಗೂ ಶಿಕ್ಷಣಾಧಿಕಾರಿಗಳ ಗಮನಕ್ಕೆ ತರಲಾಗಿದೆ.
– ಲಲಿತಾ ಸಖರಾಮ್, ಪದವೀಧರೇತರ ಮುಖ್ಯ ಶಿಕ್ಷಕರು
ಕಾಲಾವಕಾಶ ನೀಡಬೇಕು
ಕಟ್ಟಡ ತೆರವಾದರೆ ವಿದ್ಯಾರ್ಥಿಗಳಿಗೆ ತರಗತಿ ಕೋಣೆಗಳಿಲ್ಲದೇ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗಲಿದೆ. ಸರಕಾರ ಶಾಲಾ ಕಟ್ಟಡ ನಿರ್ಮಾಣಕ್ಕೆ ತುರ್ತು ಅನುದಾನ ನೀಡಿ ನೂತನ ಕಟ್ಟಡ ನಿರ್ಮಾಣಕ್ಕೆ ಅವಕಾಶ ಕಲ್ಪಿಸಬೇಕು. ಹೆದ್ದಾರಿ ಪ್ರಾಧಿಕಾರದವರು ಒಂದು ವರ್ಷವಾದರೂ ಕಾಲಾವಕಾಶ ನೀಡಬೇಕು.
– ರಾಘವೇಂದ್ರ ದೇವಾಡಿಗ, ಅಧ್ಯಕ್ಷರು, ಶಾಲಾಭಿವೃದ್ಧಿ ಸಮಿತಿ
ಪರಿಹಾರ ಹಿಂಪಡೆದಿತ್ತು!
ನಿಜವೆಂದರೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಶಾಲಾ ಕಟ್ಟಡದ ಪರಿಹಾರದ ಮೊತ್ತ ಸುಮಾರು 20.99 ಲಕ್ಷ ರೂ. ಸಂಸ್ಥೆಗೆ ನೀಡಲಾಗಿತ್ತಾದರೂ ಕೊರೊನಾ ಕಾಲದಲ್ಲಿ ಹೆಚ್ಚುವರಿ ಪರಿಹಾರ ಮೊತ್ತವನ್ನು ವಾಪಸ್ ಪಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
Udupi: ವಿಶ್ವಶಾಂತಿಗೆ ಭಗವದ್ಗೀತೆಯೇ ಮೂಲಾಧಾರ: ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.