Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ
Team Udayavani, Sep 19, 2024, 3:02 PM IST
ತೆಕ್ಕಟ್ಟೆ: ಇಲ್ಲಿನ ತೆಕ್ಕಟ್ಟೆ ರಾ.ಹೆ.66ರ ಪ್ರಮುಖ ಸರ್ಕಲ್ ನಲ್ಲಿ ಹೆಮ್ಮಾಡಿ ಖಾಸಗಿ ಪಿಯು ಕಾಲೇಜಿನ ಶಾಲಾ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಹೈಮಾಸ್ಟ್ ಕಂಬಕ್ಕೆ ಢಿಕ್ಕಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಸೆ. 19ರ ಗುರುವಾರ ಮಧ್ಯಾಹ್ನ ಸಂಭವಿಸಿದೆ.
ಬ್ರಹ್ಮಾವರದಿಂದ ಹೆಮ್ಮಾಡಿ ಕಡೆಗೆ ಚಾಲಕ ಸಹಿತ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಪ್ರಯಾಣಿಸುತ್ತಿದ್ದ ಶಾಲಾ ವಾಹನಕ್ಕೆ ದ್ವಿಚಕ್ರ ವಾಹನವೊಂದು ಏಕಾಏಕಿ ಅಡ್ಡಬಂದ ಪರಿಣಾಮ ವಾಹನ ಚಾಲಕನ ನಿಯಂತ್ರಣ ತಪ್ಪಿ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.
ಘಟನೆಯ ತೀವ್ರತೆಗೆ ವಾಹನ ಚಾಲಕನ ತಲೆ, ಕಣ್ಣು ಹಾಗೂ ಕೈಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಇಬ್ಬರು ಕಾಲೇಜು ವಿದ್ಯಾರ್ಥಿನಿಯರಿಗೂ ಕೂಡಾ ಸಣ್ಣಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ಸ್ಥಳೀಯರು ತತ್ಕ್ಷಣವೇ ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಡಿಕ್ಕಿ ಹೊಡೆದ ಪರಿಣಾಮ ಶಾಲಾ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅದೃಷ್ಟ ವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಲಿಲ್ಲ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Naxal Encounter: ದಕ್ಷಿಣ ಭಾರತದಲ್ಲಿ ಇನ್ನುಳಿದಿರುವುದು ಎಂಟೇ ಮಂದಿ ನಕ್ಸಲರು!
Naxal Encounter: ಬಂಧಿತ ಸುರೇಶ್ ಅಂಗಡಿ ಮಾಹಿತಿಯಂತೆ ʼಆಪರೇಷನ್ ವಿಕ್ರಂ ಗೌಡʼ
Naxal Encounter: ನಕ್ಸಲ್ ವಿಕ್ರಂ ಗೌಡ ಅಪಾಯಕಾರಿ ಶಸ್ತ್ರಾಸ್ತ್ರ ಹೊಂದಿದ್ದ: ಡಿಜಿಪಿ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.