Uchila ದಸರಾ: ಪಾರ್ಕಿಂಗ್, ಟ್ರಾಫಿಕ್ ವ್ಯವಸ್ಥೆ ಸಿದ್ಧತೆ ಪೂರ್ಣ
ಶೋಭಾಯಾತ್ರೆ ರಂಗು ಹೆಚ್ಚಿಸಲಿರುವ ಟ್ಯಾಬ್ಲೋಗಳು
Team Udayavani, Oct 11, 2024, 5:35 PM IST
ಕಾಪು: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಜರಗು ತ್ತಿರುವ ಉಡುಪಿ ಉಚ್ಚಿಲ ದಸರಾ- 2024ರ ವೈಭವದ ಶೋಭಾಯಾತ್ರೆಯಲ್ಲಿ ಲಕ್ಷಾಂತರ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಯಿದ್ದು, ಅದಕ್ಕಾಗಿ ಎಲ್ಲ ಸಿದ್ಧತೆ ಗಳನ್ನು ನಡೆಸಲಾಗುತ್ತಿದೆ. ರಾ.ಹೆ. ಹೆದ್ದಾರಿ 66 ಮತ್ತು ಕಾಪು ಬೀಚ್ ರಸ್ತೆಯಲ್ಲಿ 18-20 ಕಿ. ಮೀ. ಉದ್ದದವರೆಗೆ ಸಾಗ ಲಿರುವ ಶೋಭಾ ಯಾತ್ರೆಯಲ್ಲಿ ನೂರಾರು ಟ್ಯಾಬ್ಲೋ, ಭಜನಾ ತಂಡಗಳು, ವಾದ್ಯ ಮೇಳಗಳು ಭಾಗವಹಿಸಿ ವಿಶೇಷ ರಂಗು ತರಲಿವೆ.
ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳುವ ಭಕ್ತರಿಗೆ ಮರಳಿ ದೇವಸ್ಥಾನ ಅಥವಾ ಪಾರ್ಕಿಂಗ್ ಪ್ರದೇಶಗಳಿಗೆ ತೆರಳಲು ವಿಶೇಷ ಸಾರಿಗೆ ವ್ಯವಸ್ಥೆ ಇದೆ. ಎಲ್ಲಿಯೂ ಲೋಪದೋಷಗಳಾಗದಂತೆ ತಡೆಯಲು ಮತ್ತು ಟ್ರಾಫಿಕ್ ನಿಯಮ ಉಲ್ಲಂಘನೆ ಯಾಗದಂತೆ ನೋಡಿಕೊಳ್ಳಲು ಪೊಲೀಸ್ ಇಲಾಖೆಯ ಜತೆಗೆ ನೂರಾರು ಮಂದಿ ಸ್ವಯಂ ಸೇವಕರು ಇರುತ್ತಾರೆ. ಮೊಗವೀರ ಯುವ ಸಂಘಟನೆ, ವಿವಿಧ ಜವಾಬ್ದಾರಿ ಹೊತ್ತುಕೊಂಡಿರುವ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಮೆರವಣಿಗೆ ಯುದ್ದಕ್ಕೂ ಮಾನವ ಸರಪಳಿ ರಚಿಸಿ ಶೋಭಾಯಾತ್ರೆಗೆ ವಿಶೇಷ ಭದ್ರತೆ ನೀಡಲಿದ್ದಾರೆ ಎಂದು ಉಚ್ಚಿಲ ದಸರಾ ರೂವಾರಿ ನಾಡೋಜ ಡಾ| ಜಿ. ಶಂಕರ್ ತಿಳಿಸಿದ್ದಾರೆ.
ಹೆದ್ದಾರಿಯ ಇಕ್ಕೆಲಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗುತ್ತಿದೆ. ಹೀಗಾಗಿ ಸಾರ್ವಜನಿಕರು ವೈಯಕ್ತಿಕ ಕಾರ್, ಬೈಕ್‌ಗಳ ಬದಲು ಸಾರ್ವಜನಿಕ ಸಾರಿಗೆ ವ್ಯವಸ್ಥೆ, ಸರಕಾರಿ ಬಸ್, ರಿಕ್ಷಾಗಳನ್ನು ಆಶ್ರಯಿಸಿದರೆ ಉತ್ತಮ ಎಂದು ಎಸ್‌ಐ ಪ್ರಸನ್ನ ಕುಮಾರ್ ತಿಳಿಸಿದ್ದಾರೆ.
ಪಾರ್ಕಿಂಗ್ ವ್ಯವಸ್ಥೆ ಹೀಗಿರಲಿದೆ
- ಮಂಗಳೂರು ಕಡೆಯಿಂದ ಬರುವವರಿಗೆ ಉಚ್ಚಿಲ ಸರಸ್ವತಿ ಮಂದಿರ ಶಾಲೆ, ಎರ್ಮಾಳು ಜನಾರ್ದನ ದೇವಸ್ಥಾನದ ಬಳಿ
- ಉಡುಪಿ ಕಡೆಯಿಂದ ಬರುವವರಿಗೆ ಮಹಾಲಕ್ಮೀ ಶಾಲಾ ಮೈದಾನ, ಮೊಗವೀರ ಭವನ ಬಳಿ, ದೇವಸ್ಥಾನದ ಪರಿಸರ, ಎರ್ಮಾಳು ಜನಾರ್ದನ ದೇವಸ್ಥಾನದ ಬಳಿ
- ಕಾಪು ಬೀಚ್‌ನಲ್ಲಿ ನಡೆಯುವ ಜಲಸ್ತಂಭನದಲ್ಲಿ ಪಾಲ್ಗೊಳಲು ಮಂಗಳೂರು ಕಡೆಯಿಂದ ಬರುವವರಿಗೆ ಮೂಳೂರು ಸಾಯಿರಾಧಾ ರೆಸಾರ್ಟ್ ಬಳಿ, ಉಡುಪಿ – ಮಲ್ಪೆ – ಪಡುಕೆರೆಯಿಂದ ಬರುವವರಿಗೆ ಪೊಲಿಪು ಶಾಲಾ ಮೈದಾನ, ಕೈಪುಂಜಾಲು ಶಾಲಾ ಮೈದಾನ, ಕಾಪು ಬೀಚ್ ಪಾರ್ಕಿಂಗ್, ಕೋಟ್ಯಾನ್‌ಕಾರ್ ಮೂಲಸ್ಥಾನದ ಬಳಿ ವಾಹನ ಪಾರ್ಕಿಂಗ್‌ಗೆ ಅವಕಾಶ.
ಶೋಭಾಯಾತ್ರೆ ಸಾಗುವ ಮಾರ್ಗ ಇದು
ದೇವಸ್ಥಾನದಿಂದ 3 ಗಂಟೆಗೆ ಹೊರಡುವ ಶೋಭಾಯಾತ್ರೆಯು ಉಡುಪಿ – ಮಂಗಳೂರು ರಸ್ತೆಯಲ್ಲಿ ಎರ್ಮಾಳಿನವರೆಗೆ ಸಾಗಿ, ಅಲ್ಲಿಂದ ತಿರುಗಿ ಮಂಗಳೂರು – ಉಡುಪಿ ರಸ್ತೆ ಮೂಲಕ ಉಚ್ಚಿಲ – ಮೂಳೂರು ಮಾರ್ಗವಾಗಿ ಕೊಪ್ಪಲಂಗಡಿಗೆ ಬರಲಿದೆ. ಅಲ್ಲಿಂದ ಕಾಪು ಬೀಚ್ ರಸ್ತೆಯಲ್ಲಿ ಸಂಚರಿಸಿ ರಾತ್ರಿ 10.30ಕ್ಕೆ ಕಾಪು ಲೈಟ್ ಹೌಸ್ ಬಳಿಯ ಜಲಸ್ತಂಭನ ಪ್ರದೇಶಕ್ಕೆ ತಲುಪಲಿದೆ. ಸಾಮೂಹಿಕ ಮಂಗಳಾರತಿ, ಗಂಗಾರತಿಯ ಬಳಿಕ ಸಮುದ್ರ ಮಧ್ಯಕ್ಕೆ ಕೊಂಡೊಯ್ದು 11 ಗಂಟೆಯ ವೇಳೆಗೆ ಜಲಸ್ತಂಭನ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.