ಉಪ್ಪುಂದ : ಮೊಬೈಲ್ ಅಂಗಡಿಯಲ್ಲಿ ಕಳವು ಪ್ರಕರಣ, ಘಟನೆ ನಡೆದ ಮೂರೇ ದಿನದಲ್ಲಿ ಆರೋಪಿಗಳ ಬಂಧನ
ಮೂರೇ ದಿನದಲ್ಲಿ ಪ್ರಕರಣ ಭೇದಿಸಿದ ಪೊಲೀಸರು
Team Udayavani, Jul 10, 2022, 9:21 PM IST
ಉಪ್ಪುಂದ ; ಉಪ್ಪುಂದ ಗ್ರಾಮದ ಮೂಡುಗಣಪತಿ ದೇವಸ್ಥಾನದ ಬಳಿಯ ಮೊಬೈಲ್ ಅಂಗಡಿಯೊಂದರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಕೃತ್ಯ ನಡೆದ ಮೂರು ದಿನದಲ್ಲಿ ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಬೈಂದೂರು ಸರ್ಕಲ್ ಇನ್ಸ್‌ಪೆಕ್ಟರ್ ಸಂತೋಷ್ ಕಾಯ್ಕಿಣಿ ನೇತೃತ್ವದಲ್ಲಿ ಬೈಂದೂರು ಸಬ್ ಇನ್ಸ್‌ಪೆಕ್ಟರ್ ಪವನ್ ನಾಯಕ್ ಹಾಗೂ ಸಿಬ್ಬಂದಿಗಳು ಈ ಕಾರ್ಯಾಚರಣೆ ನಡೆಸಿದ್ದರು.
ಭಟ್ಕಳ ಮುರುಡೇಶ್ವರ ಮಾವಳ್ಳಿಯ ನಿವಾಸಿಗಳಾದ ಮೊಹಮ್ಮದ್ ಇಫ್ಜಲ್ (27), ಮಹಮ್ಮದ್ ಅಸೀಮ್ ಡೊನ್ನಾ (20), ಮಹಮ್ಮದ್ ರಫಿ (21) ಹಾಗೂ ಭಟ್ಕಳದ ಮೊಹಮ್ಮದ್ ರಾಹಿಕ್ (22) ಬಂಧಿತರು. ಮುರ್ಡೇಶ್ವರ ಬೀಚ್ ಬಳಿ ಆರೋಪಿಗಳನ್ನು ಬಂಧಿಸಿದ್ದು ಇವರಿಂದ ಕಳವು ಮಾಡಿದ 20 ಸಾವಿರ ಮೌಲ್ಯದ ಮೊಬೈಲ್ ಪೋನುಗಳು, ಕೃತ್ಯಕ್ಕೆ ಉಪಯೋಗಿಸಿದ 8 ಲಕ್ಷ ಮೌಲ್ಯದ ಕಾರು ಮೊದಲಾದವುಗಳನ್ನು ವಶಕ್ಕೆ ಪಡೆಯಲಾಗಿದೆ.
ಘಟನೆ ಹಿನ್ನೆಲೆ
ಬಿಜೂರು ನಿವಾಸಿ ಪ್ರಶಾಂತ್ ಅವರ ಮೊಬೈಲ್ ಅಂಗಡಿಯಲ್ಲಿ ಜು.5 ರಂದು ರಾತ್ರಿ ಅಂಗಡಿಯ ಶೆಟರ್ ಮುರಿದು ಕಳ್ಳತನ ಮಾಡಲಾಗಿತ್ತು. ಅಂಗಡಿಯಲ್ಲಿದ್ದ 3500 ರೂ. ನಗದು, 25 ಸಾವಿರ ರೂ. ಬೆಲೆಬಾಳುವ 17 ಕೀ ಪ್ಯಾಡ್ ಮೊಬೈಲ್ ಪೋನುಗಳು ಹಾಗೂ 5 ಸಾವಿರ ರೂ. ಮೌಲ್ಯದ ಮೊಬೈಲ್ ಗೆ ಉಪಯೋಗಿಸುವ ಪವರ್ ಬ್ಯಾಂಕ್ ಹಾಗೂ ಬ್ಲೂಟೂತ್ ಕಳವುಗೈದಿದ್ದು ಈ ವಸ್ತುಗಳ ಒಟ್ಟು ಮೌಲ್ಯ ರೂಪಾಯಿ 33,500 ರೂ. ಆಗಿದ್ದು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ : ಕುಣಿಗಲ್ : ಕಾರು ಢಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲೇ ಸಾವು
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್ ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ.ಸಿದ್ಧಲಿಂಗಪ್ಪ ಹಾಗೂ ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಶ್ರೀಕಾಂತ್ ಕೆ. ನಿರ್ದೇಶನದಲ್ಲಿ ಬೈಂದೂರು ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ ನೇತೃತ್ವದ ಬೈಂದೂರು ಪಿಎಸ್ಐ ಪವನ್ ನಾಯಕ್ ಮತ್ತವರ ತಂಡ ಆರೋಪಿಗಳನ್ನು ಬಂಧಿಸಿದೆ. ಬೈಂದೂರು ವೃತ್ತ ನಿರೀಕ್ಷಕ ಕಚೇರಿಯ ಅಪರಾಧ ವಿಭಾಗದ ಸಿಬ್ಬಂದಿಗಳಾದ ಹೆಡ್ ಕಾನ್ಸ್‌ಟೇಬಲ್ ಗಳಾದ ಮೋಹನ, ನಾಗೇಂದ್ರ, ಕೃಷ್ಣ , ಹಾಗೂ ಬೈಂದೂರು ಪೊಲೀಸ್ ಠಾಣಾ ಅಪರಾಧ ಸಿಬ್ಬಂದಿಗಳಾದ ಶ್ರೀನಿವಾಸ ಹಾಗೂ ಸುಜೀತ್ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.