Uppunda: ಬೈಕ್ ಢಿಕ್ಕಿಯಾಗಿ ಮಹಿಳೆಗೆ ಗಾಯ
Team Udayavani, Aug 5, 2024, 11:30 PM IST
ಉಪ್ಪುಂದ: ಬೈಕ್-ಸ್ಕೂಟಿ ಢಿಕ್ಕಿಯಾಗಿ ಕುಮಟ ನಿವಾಸಿ ಸಂಗೀತಾ ಅವರು ಗಾಯಗೊಂಡಿದ್ದಾರೆ. ಅವರು ಇಬ್ಬರು ಮಕ್ಕಳನ್ನು ಕುಳ್ಳಿರಿಸಿಕೊಂಡು ಬಂದು ಉಪ್ಪುಂದ ಶಾಲೆಯ ಬಳಿ ಸ್ಕೂಟಿಯನ್ನು ನಿಲ್ಲಿಸಿಕೊಂಡಿದ್ದಾಗ ಬೈಕ್ ಸವಾರ ಢಿಕ್ಕಿ ಹೊಡೆದಿದ್ದ. ಪರಿಣಾಮ ಸಂಗೀತಾ ಮತ್ತು ಮಕ್ಕಳು ರಸ್ತೆಗೆ ಬಿದ್ದಿದ್ದು, ಸಂಗೀತಾ ಅವರ ಕಾಲಿಗೆ ತೀವ್ರ ಸ್ವರೂಪದ ಗಾಯವಾಗಿದೆ.
ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಷ ಸೇವಿಸಿ ಮಹಿಳೆ ಸಾವು
ಉಪ್ಪುಂದ: 11ನೇ ಉಳ್ಳೂರು ಗ್ರಾಮದ ನಿವಾಸಿ ಹೇಮಲತಾ (54) 3-4 ವರ್ಷಗಳಿಂದ ಮಾನಸಿಕವಾಗಿ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿದ್ದವರು ವಿಷ ಸೇವಿಸಿ ಸಾವನ್ನಪ್ಪಿದ್ದಾರೆ.
ಜು. 28 ರಂದು ಮಧ್ಯಾಹ್ನದ ಸಮಯ ಮನೆಯಲ್ಲಿ ಯಾವುದೋ ಕೀಟ ನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದು ಕೊಂಡು ಹೋಗಿ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
Cold Weather: ಕೊನೆಗೂ ಚಳಿ ಶುರು ಆಯ್ತು ಗುರು
Ambedkar remarks; ಅಮಿತ್ ಶಾ ರಾಜೀನಾಮೆ ನೀಡಬೇಕು: ಕಾಂಗ್ರೆಸ್ ಒತ್ತಾಯ
BBK11: ಗೆಲ್ಲಲೇ ಬೇಕಾದ ಟಾಸ್ಕ್ನಲ್ಲಿ ಎಡವಿದ ಚೈತ್ರಾ.. ನನ್ನಿಂದ ಆಗಲ್ಲವೆಂದು ಕಣ್ಣೀರು
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.