ನೀರಿನ ಸಮಸ್ಯೆ ನಿಭಾಯಿಸಲು ಮುಂದಾದ ಸ್ವಯಂಸೇವಕರು
Team Udayavani, May 14, 2020, 5:30 AM IST
ವಂಡ್ಸೆ: ವಂಡ್ಸೆ ಗ್ರಾಮದಲ್ಲಿ ಎದುರಾದ ಕುಡಿಯವ ನೀರಿನ ಸಮಸ್ಯೆ ಬಗೆ ಹರಿಸುವಲ್ಲಿ ಸಾಮಾಜಿಕ ಕಾರ್ಯ ಕರ್ತರು ಸ್ವಯಂ ಸ್ಪೂರ್ತಿಯಿಂದ ಸ್ವಂತ ಖರ್ಚಿನಲ್ಲಿ ಕಳೆದ ಕೆಲವು ದಿನಗಳಿಂದ ಟ್ಯಾಂಕರ್ ಮೂಲಕ ಕುಡಿಯುವ ನೀರನ್ನು ಒದಗಿಸುತ್ತಿದ್ದಾರೆ.
ಟ್ಯಾಂಕರ್ ಮೂಲಕ ಕುಡಿಯವ ನೀರು ಒದಗಿಸಲು ಸರಕಾರವು ಟೆಂಡರ್‌ಮೂಲಕ ನಡೆಯ ಬೇಕೆಂದು ಸೂಚಿಸಿರುವ ಹಿನ್ನಲೆಯಲ್ಲಿ ಹಲವು ಗ್ರಾ.ಪಂ.ಗಳಲ್ಲಿ ಈ ಪ್ರಕ್ರಿಯೆ ಮಂದಗತಿಯಲ್ಲಿ ಸಾಗಿತ್ತು, ಟೆಂಡರ್ ಪಡೆಯಲು ಗುತ್ತಿಗೆದಾರರು ಹಿಂಜರಿಯುತ್ತಿದ್ದರು. ಸರಕಾರವು ಸೂಚಿಸಿದ ದರವು ಗುತ್ತಿಗೆದಾರರಿಗೆ ನಷ್ಟ ಉಂಟು ಮಾಡುತ್ತದೆ ಎಂಬ ಕಾರಣಕ್ಕಾಗಿ ಪ್ರಕ್ರಿಯೆಯಲ್ಲಿ ಮುಂದು ವರಿಯಲು ಗುತ್ತಿಗೆದಾರರು ಹೆಚ್ಚಿನ ಆಸಕ್ತಿ ತೋರಿಲ್ಲ. ಇಡೀ ಗ್ರಾಮದಲ್ಲಿ ಬಾವಿ ಬತ್ತಿದ್ದು ಕುಡಿಯವ ನೀರಿಗಾಗಿ ಅಲ್ಲಿನ ನಿವಾಸಿಗಳು ಪರಿತಪಿಸುವ ಪರಿಸ್ಥಿತಿ ಎದುರಾಯಿತು. ಈನಡುವೆ ಗ್ರಾಮ ನಿವಾಸಿಯಾಗಿರುವ ಪ್ರಶಾಂತ ಪೂಜಾರಿ ಕುಡಿಯುವ ನೀರನ್ನು ಗ್ರಾಮಸ್ಥರಿಗೆ ಒದಗಿಸುವ ಬಗ್ಗೆ ಕಾಳಜಿ ವಹಿಸಿ ಟ್ಯಾಂಕರ್ ಮೂಲಕ ನೀರನ್ನು ಪೂರೈಸುತ್ತಿದ್ದಾರೆ.
ವಂಡ್ಸೆ ಗ್ರಾ.ಪಂ.ನೇತೃತ್ವದಲ್ಲಿ ಮೇ 13 ರಿಂದ ಟ್ಯಾಂಕರ್ ಮೂಲಕ ನೀರು ಒದಗಿಸಲಾಗುತ್ತಿದೆ. ಕಳೆದ ಹಲವು ದಿನಗಳಿಂದ ನೀರಿನ ಕ್ಷಾಮ ಎದುರಿಸುತ್ತಿದ್ದ ವಂಡ್ಸೆ ನಿವಾಸಿಗಳಿಗೆ ಬುಧವಾರದಿಂದ ಗ್ರಾ.ಪಂ.ಸಹಿತ ಸಮಾಜ ಸೇವಕರಿಂದ ಒದಗಿಸಲಾಗುತ್ತಿದ್ದ ಟ್ಯಾಂಕರ್ ನೀರು ತಾತ್ಕಾಲಿಕ ನೆಲೆಯಲ್ಲಿ ಉಪಶಮನ ನೀಡಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.