karnataka polls: ಕಾಂಡ್ಲಾವನದ ಮಧ್ಯೆ ಮತ ಜಾಗೃತಿ
Team Udayavani, Apr 29, 2023, 4:05 PM IST
ಕೋಟ: ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಕುರಿತಂತೆ ಸ್ವೀಪ್ ಸಮಿತಿಯಿಂದ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿ ಕೊಳ್ಳುತ್ತಿದ್ದು, ಇದೇ ಮೊದಲ ಬಾರಿಗೆ ಅತ್ಯಂತ ವಿಶಿಷ್ಟ ರೀತಿಯಲ್ಲಿ ನದಿಯಲ್ಲಿ ಕಯಾಕಿಂಗ್ ಮೂಲಕ ತೆರಳಿ ಮಾಂಗ್ರೋವ್ (ಕಾಂಡ್ಲಾ) ಕಾಡುಗಳ ಮಧ್ಯೆ ಕಯಾಕ್‌ಗಳಲ್ಲಿ ಮತದಾನ ಮಹತ್ವ ಕುರಿತು ಜಾಗೃತಿ ಮೂಡಿಸಲಾಯಿತು.
ಜಿಲ್ಲಾಡಳಿತ ಉಡುಪಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಬುಧವಾರ ಸಾಲಿಗ್ರಾಮದ ಪಾರಂಪಳ್ಳಿಯ ಹಿರೇ ಹೊಳೆಯಲ್ಲಿ ಕಯಾಕಿಂಗ್ ಮಾಡಲು ಬಳಸುವ ದೋಣಿ, ಹುಟ್ಟುಗಳ ಮೂಲಕ ಮತದಾನ ಜಾಗೃತಿಯ ಸಂದೇಶವನ್ನು ಸಾರಲಾಯಿತು.
ಸಾಲಿಗ್ರಾಮ ಬಳಿಯ ಕಯಾಕಿಂಗ್ ಪಾಯಿಂಟ್ ಬಳಿಗೆ ತೆರಳಿದ, ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಮತ್ತು ಜಿ.ಪಂ. ಸಿಇಒ ಪ್ರಸನ್ನ ಎಚ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೇ ಅಕ್ಷಯ್ ಮಚ್ಚೀಂದ್ರ, ಪ್ರೊಬೆಷನರಿ ಐಎಎಸ್ ಅಧಿಕಾರಿ ಯತೀಶ್ ಅವರು ಕಯಾಕಿಂಗ್ ಪ್ರಾರಂಭದ ಸ್ಥಳದಲ್ಲಿ ತುಳುನಾಡಿನ ಸಾಂಪ್ರದಾಯಿಕ ಅಡಿಕೆ ಮುಟ್ಟಾಳೆ ಧರಿಸಿ, ಸ್ಥಳದಲ್ಲಿ ಅಳವಡಿಸಲಾಗಿದ್ದ ಮತದಾನ ಪ್ರತಿಜ್ಞೆ ಕುರಿತ ಫಲಕದಲ್ಲಿ ಸಹಿ ಮಾಡಿ, ಸಂಪೂರ್ಣ ಸುರಕ್ಷತ ಉಪಕರಣಗಳನ್ನು ಧರಿಸಿ ಕಯಾಕಿಂಗ್ ಆರಂಭಿಸಿದರು.
ಸುಮಾರು 30 ನಿಮಿಷಗಳ ಕಯಾಕಿಂಗ್ ಅನಂತರ ಮಾಂಗ್ರೋವ್ ಕಾಡುಗಳ ಮಧ್ಯೆ ಇರುವ ಪ್ರದೇಶದಲ್ಲಿ ಸುಮಾರು 40ಕ್ಕೂ ಹೆಚ್ಚು ಕಯಾಕ್ ದೋಣಿಗಳ ಮೂಲಕ ಮೇ 10 ಮತದಾನ ಎಂಬ ಚಿತ್ರಣ ರೂಪಿಸಿ ಮತ್ತು ಮತದಾನ ಜಾಗೃತಿಯ ಫಲಕವನ್ನು ನೀರಿನ ಮೇಲೆ ಪ್ರದರ್ಶಿಸಿ ಅತ್ಯಂತ ಆಕರ್ಷಕ ರೀತಿಯಲ್ಲಿ ಮತದಾನ ಜಾಗೃತಿ ಮೂಡಿಸಲಾಯಿತು.
ಕಯಾಕಿಂಗ್ ಆರಂಭದ ಸ್ಥಳದಿಂದ ನದಿ ಮಧ್ಯದ ಕಾರ್ಯಕ್ರಮ ನಡೆಯವ ಸ್ಥಳದ ವರೆಗೂ ನದಿಯಲ್ಲಿ ಮತದಾನ ಜಾಗೃತಿ ಸಾರುವ ಯಕ್ಷಗಾನ ಮುಕುಟ ಮಾದರಿಯ ಆಕೃತಿಗಳು ಗಮನ ಸೆಳೆದವು.
ಇದೇ ಸಂದರ್ಭದಲ್ಲಿ, ಕಯಾಕಿಂಗ್ ಮೂಲಕ ಆ ಪ್ರದೇಶಕ್ಕೆ ಆಗಮಿಸಿದ್ದ ಮಣೂರು ಪಡುಕರೆ ಕಾಲೇಜಿನ ವಿದ್ಯಾರ್ಥಿಗಳಿಗೆ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿ, ಮತದಾನ ದಿನಾಂಕವನ್ನು ಒಳಗೊಂಡ ಬಲೂನ್‌ಗಳನ್ನು ಹಾರಿಬಿಡುವ ಮೂಲಕ ಕೂಡ ಜಾಗೃತಿ ಮೂಡಿಸಲಾಯಿತು. ಈ ವಿಶಿಷ್ಟ ಕಾರ್ಯಕ್ರಮಕ್ಕೆ ಸಾಲಿಗ್ರಾಮ ಕಯಾಕಿಂಗ್ ಪಾಯಿಂಟ್‌ನಲ್ಲಿ ಕಾರ್ಯನಿರ್ವಹಿಸುವ ವಿವಿಧ ಸಂಸ್ಥೆಗಳು ಮತ್ತು ಸಿಬಂದಿ ಅಗತ್ಯ ಸಹಕರಿಸಿದರು.
ಹಿನ್ನೀರಿನಲ್ಲಿ ಮೊದಲ ಪ್ರಯೋಗ
ರಾಜ್ಯದಲ್ಲೇ ಇದೇ ಮೊದಲ ಬಾರಿಗೆ ಹಿನ್ನೀರಿನಲ್ಲಿ ಮಾಂಗ್ರೋವ್ ವನದ ನಡುವೆ ಕಯಾಕ್‌ಗಳ ಮೂಲಕ ಮತದಾನ ಜಾಗೃತಿ ಮೂಡಿಸಲಾಗಿದೆ. ಪ್ರವಾಸಿ ತಾಣಗಳು ಹಾಗೂ ಸಾಹಸ ಚಟುವಟಿಕೆಗಳು ನಡೆಯುವ ಸ್ಥಳಗಳು ಯುವ ಜನತೆಯನ್ನು ಹೆಚ್ಚು ಆಕರ್ಷಿಸಲಿದ್ದು, ಇಲ್ಲಿ ನಡೆಸುವ ಮತದಾನ ಜಾಗೃತಿ ಕಾರ್ಯಕ್ರಮಗಳ ಮೂಲಕ ಯುವ ಜನತೆಯನ್ನು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಕೇಂದ್ರಗಳಿಗೆ ಸೆಳೆಯಲು ಸಹಕಾರಿಯಾಗಲಿದೆ.
– ಕೂರ್ಮಾರಾವ್ ಎಂ., ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
Udupi: ವಿಶ್ವಶಾಂತಿಗೆ ಭಗವದ್ಗೀತೆಯೇ ಮೂಲಾಧಾರ: ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.