Wandse ತ್ಯಾಜ್ಯ ನಿರ್ವಹಣೆ ಘಟಕ ರಾಷ್ಟ್ರಕ್ಕೇ ಮಾದರಿ

ಬೆಂಗಳೂರಿಗೆ ಅಳವಡಿಸಿ ಎಂದು ಸಲಹೆ ನೀಡಿದ ಬಯೋಕಾನ್‌ನ ಕಿರಣ್‌ ಮಜುಮಾªರ್‌ ಶಾ

Team Udayavani, Dec 6, 2024, 1:25 PM IST

4

ವಂಡ್ಸೆ: ವಂಡ್ಸೆ ಗ್ರಾಮ ಪಂಚಾಯತ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಘನ ಮತ್ತು ದ್ರವ ಸಂಪನ್ಮೂಲ ನಿರ್ವಹಣೆ (Solid and Liquid Resource Management- SLRM) ಕೇಂದ್ರದ ಕಾರ್ಯವೈಖರಿಯನ್ನು ಬಯೋಕಾನ್‌ ಮುಖ್ಯಸ್ಥೆ ಕಿರಣ್‌ ಮಜುಮ್ದಾರ್‌ ಶಾ ಅವರು ಶ್ಲಾಘಿಸಿದ್ದು, ರಾಷ್ಟ್ರಕ್ಕೇ ಮಾದರಿಯಾಗಿರುವ ಈ ತಂತ್ರವನ್ನು ಬೆಂಗಳೂರಿಗೆ ಅಳವಡಿಸಿ ಎಂದು ರಾಜ್ಯ ಸರಕಾರಕ್ಕೆ ಸಲಹೆ ನೀಡಿದ್ದಾರೆ.

2017ರಲ್ಲಿ ಸ್ಥಾಪನೆಗೊಂಡ ಎಸ್‌.ಎಲ್‌.ಆರ್‌.ಎಂ. ಘಟಕದಲ್ಲಿ ಒಣ ಕಸ ಮತ್ತು ಹಸಿ ಕಸವನ್ನು 10 ರೀತಿಯಲ್ಲಿ ವಿಂಗಡಿಸಿ ವಿಲೇವಾರಿ ಮಾಡಲಾಗುತ್ತಿದ್ದು, ಇದು ಶೂನ್ಯ ತಾಜ್ಯ ಕೇಂದ್ರವಾಗಿ ಮಾರ್ಪಟ್ಟಿದೆ. ಜತೆಗೆ ಲಾಭವನ್ನೂ ಗಳಿಸುತ್ತಿದೆ.

ಬಯೋಕಾನ್‌ ಮುಖ್ಯಸ್ಥೆ ಹೇಳಿದ್ದೇನು?
ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಹಂಚಿಕೊಂಡ ವಂಡ್ಸೆಯ ಎಸ್‌ಎಲ್‌ಆರ್‌ಎಂ ಘಟಕದ ವಿಡಿಯೊವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಕಿರಣ್‌ ಮಜುಮ್ದಾರ್‌ ಶಾ ಅವರು, ಇದನ್ನು ಬೆಂಗಳೂರು ಮಹಾನಗರ ಪಾಲಿಕೆ ಮತ್ತು ರಾಜ್ಯದ ಇತರ ಭಾಗಗಳಲ್ಲಿ ಅಳವಡಿಸಿಕೊಳ್ಳುವಲ್ಲಿ ಸರಕಾರ ಹೆಜ್ಜೆ ಇಡಬೇಕು ಎಂದಿದ್ದಾರೆ.

ಇಚ್ಛಾ ಶಕ್ತಿ ಇದ್ದರೆ ಗ್ರಾ.ಪಂ. ವ್ಯಾಪ್ತಿಯ ಪರಿಸರವನ್ನು ಶುಚಿಯಾಗಿಟ್ಟು, ಹಸಿ ಹಾಗೂ ಒಣ ಕಸಗಳನ್ನು ಸೂಕ್ತ ಸಮಯದಲ್ಲಿ ವಿಲೇವಾರಿಗೊಳಿಸಲು ಸಾಧ್ಯ ಎನ್ನುವುದಕ್ಕೆ ವಂಡ್ಸೆ ಗ್ರಾ.ಪಂ. ಕಾರ್ಯವೈಖರಿ ಉದಾಹರಣೆಯಾಗಿದೆ. ರಾಜ್ಯದಲ್ಲೇ ಅತ್ಯುತ್ತಮ ಎಸ್‌.ಎಲ್‌. ಆರ್‌. ಎಂ. ಘಟಕವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದಿದ್ದಾರೆ ಅವರು.

2.5 ಕೋ.ರೂ. ವೆಚ್ಚದಲ್ಲಿ ತ್ಯಾಜ್ಯ ವಿಲೇವಾರಿ ಕೇಂದ್ರ
ವಂಡ್ಸೆ ಮೂಕಾಂಬಿಕಾ ಕಾಲೋನಿ ಸನಿಹ 2 ಎಕರೆ ಪ್ರದೇಶದಲ್ಲಿ 2.5 ಕೋಟಿ ರೂ. ವೆಚ್ಚದಲ್ಲಿ 2017ರಲ್ಲಿ ಎಸ್‌ಎಲ್‌ಆರ್‌ಎಂ ಘಟಕ ಸ್ಥಾಪಿಸಲಾಗಿದೆ. ಇದಕ್ಕೆ ವಿಶ್ವ ಬ್ಯಾಂಕ್‌ನಿಂದ 3 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. 20 ಲಕ್ಷ ರೂ. ಯಂತ್ರೋಪಕರಣಗಳನ್ನು ಹೊಂದಿದೆ. ಸುಮಾರು 40 ಲಕ್ಷ ರೂ. ವೆಚ್ಚದಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿ ಕೇಂದ್ರ ನಿರ್ಮಿಸಲಾಗುತ್ತಿದೆ. ಹಸಿ ಕಸ ಹಾಗೂ ಒಣ ಕಸಗಳನ್ನು ಪ್ರತ್ಯೇಕವಾಗಿ ಸಂಗ್ರಹಿಸಲಾಗುತ್ತಿದ್ದು, ಅವುಗಳ ವಿಲೇವಾರಿ ಕ್ರಮವೂ ರಾಜ್ಯಕ್ಕೆ ಮಾದರಿಯಾಗಿದೆ.

ಲಾಭದಿಂದ ನಡೆಯುತ್ತಿರುವ ವಂಡ್ಸೆ ಘಟಕ
ವಂಡ್ಸೆ, ಚಿತ್ತೂರು, ಇಡೂರು, ಹಕ್ಲಾಡಿ, ಆಲೂರು, ಹೆಮ್ಮಾಡಿ, ಹಾಗೂ ಕೆರಾಡಿ ಗ್ರಾ.ಪಂ.ಗಳ ತ್ಯಾಜ್ಯ ಸಂಗ್ರಹಿಸಿ, ವಂಡ್ಸೆ ಘಟಕದಲ್ಲಿ ವಿಲೇವಾರಿ ಮಾಡಲಾಗುತ್ತಿದೆ. ಒಣಕಸ ಹಾಗೂ ಹಸಿಕಸಕ್ಕೆ ಪ್ರತ್ಯೇಕ ಕಟ್ಟಡ ಸೇರಿದಂತೆ ಕಾಂಪೋಸ್ಟ್‌ ಘಟಕ, ಗೋಶಾಲೆ, ಗೋಬರ್ಧನ ಘಟಕ, ತರಬೇತಿ ಕೇಂದ್ರ, ಸಮುದಾಯ ಶೌಚಾಲಯ, ದಾಸ್ತಾನು ಕೊಠಡಿಗಳಿವೆ. ಕಸ ನೀಡುವ ಮನೆ, ಅಂಗಡಿ-ಹೋಟೆಲ್‌ಗ‌ಳಿಂದ ಸಂಗ್ರಹಿಸಲಾಗುವ ಬಳಕೆ ಶುಲ್ಕ ಮತ್ತು ತ್ಯಾಜ್ಯ ಬಳಸಿ ಉತ್ಪಾದಿಸಿದ ಸಂವರ್ಧಿತ ವಸ್ತುಗಳ ಮಾರಾಟದಿಂದಲೇ ಘಟಕ ಲಾಭದಾಯಕವಾಗಿ ನಡೆಯುತ್ತಿದೆ. ಮಹಿಳೆಯರೇ ಈ ಘಟಕ ಮತ್ತು ತ್ಯಾಜ್ಯ ಸಂಗ್ರಹಣೆಯನ್ನು ನಿಭಾಯಿಸುತ್ತಿದ್ದು, 18 ಮಂದಿಗೆ ಉದ್ಯೋಗವೂ ದೊರಕಿದೆ. ಕಳೆದ ಆರುವರೆ ವರ್ಷಗಳಲ್ಲಿ ಘಟಕವು 12.5 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ.

ವಿವಿಧ ಗ್ರಾ.ಪಂ.ಗಳ ಪ್ರತಿನಿಧಿಗಳ ಭೇಟಿ
ರಾಜ್ಯದ ಒಂದು ಸಾವಿರಕ್ಕೂ ಹೆಚ್ಚು ಗ್ರಾ.ಪಂ. ಪ್ರತಿನಿ ಗಳು ಇಲ್ಲಿಗೆ ಭೇಟಿ ನೀಡಿ ಮಾಹಿತಿ ಪಡೆದಿರುತ್ತಾರೆ. ವಿವಿಧ ಜಿಲ್ಲೆಗಳ ಗ್ರಾ.ಪಂ.ಗಳ ಎಸ್‌.ಎಲ್‌. ಆರ್‌. ಎಂ. ಕಾರ್ಯಕರ್ತರಿಗೆ ಇಲ್ಲಿ 10 ದಿನಗಳ ಉಚಿತ ತರಬೇತಿ ನೀಡಲಾಗುತ್ತಿದೆ. ವಂಡ್ಸೆ ಗ್ರಾ.ಪಂ. ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಉದಯಕುಮಾರ್‌ ಶೆಟ್ಟಿ ಅಡಿಕೆಕೊಡ್ಲು ಅವರು ಈ ಯೋಜನೆಗೆ ಬೆಂಬಲವಾಗಿದ್ದಾರೆ.

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನKaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.