ನಿಧಾನಗತಿಯಲ್ಲಿದ್ದ ಕಾಮಗಾರಿಗಳಿಗೆ ವೇಗ: ಸಂಸದೆ ಶೋಭಾ

ಕುಂಟುಹೊಳೆ ಸೇತುವೆ ಸಂಪರ್ಕ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ

Team Udayavani, Sep 18, 2020, 8:33 PM IST

ನಿಧಾನಗತಿಯಲ್ಲಿದ್ದ ಕಾಮಗಾರಿಗಳಿಗೆ ವೇಗ: ಸಂಸದೆ ಶೋಭಾ

ಸಂಪರ್ಕ ರಸ್ತೆ ಕಾಮಗಾರಿಗೆ ಶೋಭಾ ಕರಂದ್ಲಾಜೆ ಶಂಕುಸ್ಥಾಪನೆ ನೆರವೇರಿಸಿದರು.

ಸಿದ್ದಾಪುರ: ಕೋವಿಡ್ ಹಿನ್ನಲೆಯಿಂದ ಕೆಲವು ಅಭಿವೃದ್ಧಿ ಕಾಮಗಾರಿಗಳು ನಿಧಾನಗತಿಯಲ್ಲಿ ನಡೆದರೂ ಸಹ ಇತ್ತೀಚಿನ ದಿನಗಳಲ್ಲಿ ಆದ್ಯತೆಗಳ ಮೇರೆಗೆ ಅಭಿವೃದ್ಧಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಅವರು ಬೆಳ್ವೆ ತಾ.ಪಂ. ವ್ಯಾಪ್ತಿಯ ಗುಡ್ಡೆಯಂಗಡಿ- ಮಾಯಾ ಬಜಾರ್‌ ಸಂಪರ್ಕದ ಕುಂಟುಹೊಳೆ ಸೇತುವೆ 2.6 ಕೋ. ರೂ. ಮತ್ತು 4.97 ಕೋ. ರೂ. ವೆಚ್ಚದಲ್ಲಿ ಬಡಾಬೆಪ್ಡೆ- ಗುಡ್ಡೆಯಂಗಡಿಯಿಂದ ಮಾಯಾಬಜಾರ್‌ ಸಂಪರ್ಕದ ಕುಂಟುಹೊಳೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ, ಅರಸಮ್ಮಕಾನು ಶ್ರೀ ನಾಗಕನ್ನಿಕಾ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.

ಕರ್ನಾಟಕಕ್ಕೆ ಕಳೆದ ಏಳೆಂಟು ವರ್ಷ ಗಳಿಂದ ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆಯಿಂದ ಹೆಚ್ಚಿನ ಅನುದಾನ ಸಿಕ್ಕಿರಲಿಲ್ಲ, ಹಲವು ಬಾರಿ ಮನವಿಗಳನ್ನು ಸಲ್ಲಿಸಿದ ಬಳಿಕ ಉಡುಪಿ- ಚಿಕ್ಕಮಗಳೂರು ಕ್ಷೇತ್ರಕ್ಕೆ 550 ಕೋ. ರೂ. ಹಣ ಬಿಡುಗಡೆಯಾಗಿದೆ. ಚಿಕ್ಕಮಗಳೂರು, ಉಡುಪಿ ಸೇರಿದಂತೆ ಮಲೆನಾಡು ಭಾಗಗಳ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನಗಳ ಆವಶ್ಯಕತೆಯಿದೆ. ಜಿಲ್ಲೆ ಹಾಗೂ ರಾಜ್ಯದಲ್ಲಿ ವೆಂಟಿಲೇಟರ್‌ ಸಹಿತ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲಾಗಿದೆ ಎಂದರು.

ಈ ಸಂದರ್ಭ ನೂತನವಾಗಿ ಅಸ್ತಿತ್ವಕ್ಕೆ ಬಂದ ಹೆಬ್ರಿ ತಾ.ಪಂ.ಗೆ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡ ರಮೇಶ ಪೂಜಾರಿ ಶಿವಪುರ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಗೊಂಡ ಎಸ್‌. ಚಂದ್ರಶೇಖರ್‌ ಶೆಟ್ಟಿ ಸೂರೊಳಿ ಅವರನ್ನು ಸಮ್ಮಾನಿಸಲಾಯಿತು.

ಜಿ.ಪಂ. ಸದಸ್ಯೆ ಸುಪ್ರೀತಾ ಉದಯ ಕುಲಾಲ್‌, ಕುಂದಾಪುರ ತಾ. ಪಂ. ಮಾಜಿ ಅಧ್ಯಕ್ಷೆ ದೀಪಿಕಾ ಎಸ್‌.ಶೆಟ್ಟಿ, ಮಾಜಿ ಸದಸ್ಯ ಎಂ. ಬಾಲಕೃಷ್ಣ ಶೆಟ್ಟಿ ಮಡಾಮಕ್ಕಿ, ಮಡಾಮಕ್ಕಿ ಗ್ರಾ.ಪಂ. ಮಾಜಿ ಅಧ್ಯಕ್ಷೆ ರತಿ ಶೆಟ್ಟಿ, ನಿಕಟಪೂರ್ವ ಅಧ್ಯಕ್ಷ ರಾಜೀವ ಕುಲಾಲ, ಉಪಾಧ್ಯಕ್ಷೆ ಜ್ಯೋತಿ ಸೀತಾರಾಮ ಪೂಜಾರಿ, ಮಾಜಿ ಸದಸ್ಯರಾದ ಸದಾನಂದ ಪೂಜಾರಿ, ಸುಬ್ಬಣ್ಣ ಶೆಟ್ಟಿ, ಮೇರಿ ಸಾಜನ್‌, ರೇಖಾ, ಸತೀಶ್‌ಕುಮಾರ್‌ ಶೆಟ್ಟಿ, ಅರಸಮ್ಮಕಾನು ಶ್ರೀ ನಾಗಕನ್ನಿಕಾ ದುರ್ಗಾಪರಮೇಶ್ವರೀ ದೇವಸ್ಥಾನದ ಮೊಕ್ತೇಸರ ಚಂದ್ರಶೇಖರ್‌ ಶೆಟ್ಟಿ, ಅರ್ಚಕ ನಾಗರಾಜ ಬಾಯರಿ, ವಿಜಯಕುಮಾರ್‌ ಶೆಟ್ಟಿ ಗೋಳಿಯಂಗಡಿ, ಕುಂದಾಪುರ ಪುರಸಭೆ ಸದಸ್ಯ ಸಂತೋಷ ಶೆಟ್ಟಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

PM Modi

PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ

naksal (2)

Chhattisgarh; ನಕ್ಸಲ್‌ ವ್ಯಾಪ್ತಿ 9500 ಚ.ಕಿ.ಮೀ.ಗೆ ಇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

police crime

Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ

Shabarimala

Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.