ಉಡುಪಿ-ಮಣಿಪಾಲದಲ್ಲಿ ರಾತ್ರಿ ಕರ್ಫ್ಯೂ ತೆಗೆಯುವಂತೆ ಶಾಸಕ ರಘುಪತಿ ಭಟ್ ಮನವಿ
Team Udayavani, Apr 9, 2021, 6:00 PM IST
ಉಡುಪಿ : ಧಾರ್ಮಿಕ ಕಾರ್ಯಕ್ರಮಗಳಿಗೆ ತಡೆ ಹಾಗೂ ಪುನಶ್ಚೇತನಗೊಳ್ಳುತ್ತಿರುವ ಆರ್ಥಿಕತೆಗೆ ಪೆಟ್ಟುಬೀಳುವ ಹಿನ್ನೆಲೆಯಲ್ಲಿ ಉಡುಪಿ ಮತ್ತು ಮಣಿಪಾಲಕ್ಕೆ ವಿಧಿಸಿರುವ ರಾತ್ರಿ ಕರ್ಫ್ಯೂ ಹಿಂಪಡೆಯುವಂತೆ ಶಾಸಕ ರಘುಪತಿ ಭಟ್ ಮಾನ್ಯ ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದ್ದಾರೆ.
ನೈಟ್ ಕರ್ಫ್ಯೂ ಬಗ್ಗೆ ಮಾತನಾಡಿದ ಶಾಸಕರು, ಮಣಿಪಾಲ ಮತ್ತು ಉಡುಪಿಯಲ್ಲಿ ನೈಟ್ ಕರ್ಫ್ಯೂವನ್ನು ಹೊರತುಪಡಿಸಬೇಕು. ಈ ಭಾಗದಲ್ಲಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚೆಚ್ಚು ಧಾರ್ಮಿಕ ಕಾರ್ಯಕ್ರಮಗಳು ರಾತ್ರಿಯ ವೇಳೆ ನಡೆಯುತ್ತವೆ. ಈ ಕಾರಣದಿಂದ ನೈಟ್ ಕರ್ಫ್ಯೂ ಮಾಡಿದರೆ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುತ್ತದೆ ಎಂದಿದ್ದಾರೆ.
ಈ ಸಮಯದಲ್ಲಿ ದೈವಾರಾಧನೆ, ಕೋಲ, ಯಕ್ಷಗಾನ ಕಾರ್ಯಕ್ರಮಗಳು ನಡೆಯುತ್ತವೆ. ಕಳೆದ ವರ್ಷ ಕೂಡ ಕೋವಿಡ್ ಕಾರಣದಿಂದ ಈ ಯಾವ ಕಾರ್ಯಕ್ರಮಗಳನ್ನು ನಡೆಸಲು ಸಾಧ್ಯವಾಗಿಲ್ಲ. ಕೆಲವರು ಈಗಗಾಲೇ ಕೋಲ ಮತ್ತು ದೈವಾರಾಧನೆಗೆ ದಿನಾಂಕ ನಿಗದಿ ಮಾಡಿದ್ದಾರೆ. ಇವರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವ ಕಾರಣ ರಾತ್ರಿ ಕರ್ಫ್ಯೂವನ್ನು ಮಣಿಪಾಲ ಮತ್ತು ಉಡುಪಿಯಲ್ಲಿ ತೆರವು ಮಾಡಬೇಕೆಂದು ಶಾಸಕ ರಘುಪತಿ ಭಟ್ ಮಾನ್ಯ ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.