ವರ್ಷಾವಧಿ ಮಹೋತ್ಸವ ಸಮಾಪನ

ಕೋರ್ಯಾರು ದುರ್ಗಾಮಹಮ್ಮಾಯಿ ಕ್ಷೇತ್ರ

Team Udayavani, Mar 31, 2019, 3:02 PM IST

1-April-13

ಪುಂಜಾಲಕಟ್ಟೆ : ಸಿದ್ದಕಟ್ಟೆ ಕೋರ್ಯಾರು ಶ್ರೀ ದುರ್ಗಾಮಹಮ್ಮಾಯಿ ದೇವಸ್ಥಾನದಲ್ಲಿ ಹೋಳಿ ಹಬ್ಬದ ವರ್ಷಾವಧಿ ಮಹೋತ್ಸವ ಶುಕ್ರವಾರ ಸಂಪನ್ನಗೊಂಡಿತು.

ಶ್ರೀಕ್ಷೇತ್ರ ಪೂಂಜ ಇದರ ಆಸ್ರಣ್ಣ ಪ್ರಕಾಶ್‌ ಆಚಾರ್ಯ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಕುಡುಬಿ ಸಮು ದಾಯ ದವರು ಸಂಪ್ರದಾಯ ಪ್ರಕಾರ ಬೆಳಗ್ಗೆಯಿಂದ ಸಂಜೆ ವರೆಗೆ ದೇವಸ್ಥಾನದಲ್ಲಿ ಕುಡುಬಿಯವರ ವಿಶಿಷ್ಟ ಮರಾಠಿ ಭಾಷೆಯಲ್ಲಿ ರಾಮಾಯಣ, ಮಹಾಭಾರತ, ಪುರಾಣ ಕತೆ ಹಾಡುತ್ತಾ ನೃತ್ಯ ಮಾಡಿದರು. ತಲೆಗೆ ರುಮಾಲು (ಕೆಲವರು ಪೇಟ ಕಟ್ಟುತ್ತಾರೆ), ಅಬ್ಬಲ್ಲಿಗೆ, ಮಲ್ಲಿಗೆ ಹೂವಿನ ಮಾಲೆ, ಹಾಕಿಕೊಂಡು, ವಿಶೇಷ ವಾದ್ಯ ಗುಮ್ಮಟೆ ಬಡಿಯುತ್ತಾ ನೃತ್ಯ ಪ್ರದರ್ಶಿಸಿದರು. ಹುಲಿ, ಕರಡಿ, ಸಿಂಹ, ಹಂದಿ ಬೇಟೆ ವೇಷಗಳ ನೃತ್ಯ, ಗುಮ್ಮಟೆ-ಕೋಲಾಟ ಪ್ರದರ್ಶನ ನಡೆಯಿತು. ಶ್ರೀರಾಮ-ಸೀತಾ ಸ್ವಯಂವರ, ಕೋಲಾಟದಲ್ಲಿ ಸೇತುವೆ ಕಟ್ಟುವುದು ವಿಶಿಷ್ಟವಾಗಿತ್ತು. ಬಳಿಕ ಅನ್ನ ಸಂತರ್ಪಣೆ ನಡೆಯಿತು. ರಾತ್ರಿ ಓಕೋಳಿ ಅಗ್ನಿಸೇವೆಯೊಂದಿಗೆ ಮಂಗಳ ನಡೆಯಿತು.

ದ.ಕ. ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮಿಥುನ್‌ ರೈ, ಜಿ.ಪಂ. ಸದಸ್ಯರಾದ ಎಂ. ತುಂಗಪ್ಪ ಬಂಗೇರ, ಚಂದ್ರಪ್ರಕಾಶ ಶೆಟ್ಟಿ, ತಾ.ಪಂ. ಸದಸ್ಯ ಪ್ರಭಾಕರ ಪ್ರಭು, ಪ್ರಮುಖರಾದ ಬೇಬಿ ಕುಂದರ್‌, ಜಗದೀಶ ಕೊಯಿಲ, ದಿನೇಶ್‌ ಸುಂದರ ಶಾಂತಿ, ಗುಲಾಬಿ ಶೆಟ್ಟಿ, ಗೋಪಾಲ ಪೂಜಾರಿ, ಶಿವಾನಂದ ರೈ, ಸುಭಾಶ್ಚಂದ್ರ ಶೆಟ್ಟಿ ಕೊಳ್ನಾಡು, ಗುರಿಕಾರರರಾದ ಗೊಪಾಲ ಗೌಡ, ಓಬಯ್ಯ ಗೌಡ ಕುಕ್ಕೇಡಿ ಮತ್ತಿತರರಿದ್ದರು.

ಪರಂಪರೆ ಉಳಿಸಿ-ಬೆಳೆಸಿ
ಸಭಾ ಕಾರ್ಯಕ್ರಮದಲ್ಲಿ ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚಿಸಿ, ಶ್ರಮಿಕ ಸಮಾಜದ ಕಡುಬಿ ಸಮುದಾಯದವರು ಹೋಳಿಯನ್ನು ಸಮಾಜದ ಸಂಘಟನಾತ್ಮಕವಾದ ಧಾರ್ಮಿಕ ಕ್ರಿಯೆಯನ್ನಾಗಿ ಪರಿವರ್ತಿಸಿ ಮುಂದುವರಿಸಿಕೊಂಡು ಬರುತ್ತಿರುವುದು ಶ್ಲಾಘನೀಯ. ಗುರಿಕಾರ ಪರಂಪರೆಯೊಂದಿಗೆ ತಮ್ಮೊಳಗಿರುವ ದ್ವೇಷ-
ಅಸೂಯೆಗಳನ್ನು ಮರೆತು ಒಂದಾಗಿರುವ ವ್ಯವಸ್ಥೆ ಈ ಹೋಳಿ ಹಬ್ಬದಲ್ಲಿದೆ. ಧಾರ್ಮಿಕತೆ ಹೆಸರಲ್ಲಿ ಆಚರಿಸಿಕೊಂಡು ಬರುತ್ತಿರುವ ಪರಂಪರೆಯನ್ನು ಉಳಿಸಿ-ಬೆಳೆಸಿದಲ್ಲಿ ನಮ್ಮ ಸಂಸ್ಕೃತಿ ಉಳಿದೀತು ಎಂದರು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಮತದಾನ ಮಾಡುವಂತೆ ವಿನಂತಿಸಿದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.