ಜನತಾ ಕರ್ಫ್ಯೂ 4ನೇ ದಿನವೂ ಯಶಸ್ವಿ
Team Udayavani, May 2, 2021, 5:41 PM IST
ದಾವಣಗೆರೆ: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕೊರೊನಾ ಕರ್ಫ್ಯೂಗೆ ಶನಿವಾರವೂ ಬೆಂಬಲ ವ್ಯಕ್ತವಾಗಿದ್ದು, ಜಿಲ್ಲೆ ಸಂಪೂರ್ಣ ಸ್ತಬ್ಧಗೊಂಡಿತು. ಸಾರ್ವಜನಿಕರಿಗೆ ಅಗತ್ಯ ವಸ್ತುಗಳನ್ನು ಕೊಳ್ಳಲು ಬೆಳಿಗ್ಗೆ 6ರಿಂದ 10 ಗಂಟೆವರೆಗೆ ಅವಕಾಶ ನೀಡಲಾಗಿದ್ದು, ಈ ಅವಧಿಯಲ್ಲಿ ಅವಶ್ಯಕ ವಸ್ತುಗಳ ಮಾರಾಟ ಅಂಗಡಿಗಳು ಸೇರಿದಂತೆ ಉಳಿದೆಲ್ಲ ಅಂಗಡಿಗಳು ತೆರೆದಿದ್ದವು.
ಈ ಅವಧಿಯಲ್ಲಿ ಜನ, ವಾಹನ ಸಂಚಾರ ಅತ್ಯಧಿಕವಾಗಿತ್ತು. ಸಾರ್ವಜನಿಕರು ಈ ಅವಧಿಯಲ್ಲಿ ಹೊರ ಬಂದು ಹಾಲು, ತರಕಾರಿ ಸೇರಿದಂತೆ ಇನ್ನಿತರ ಅವಶ್ಯ ವಸ್ತುಗಳನ್ನು ಖರೀದಿಸಿದರು. ಆದರೆ ಈ ವೇಳೆ ಎಲ್ಲಿಯೂ ದೈಹಿಕ ಅಂತರ ಪಾಲನೆಯಾಗದೇ ಇರುವುದು ಗೋಚರಿಸಿತು. ತುರ್ತು ಹಾಗೂ ಅವಶ್ಯ ಕೆಲಸಗಳಿಗಾಗಿ ಓಡಾಡಲು ಇರುವ ವಿನಾಯಿತಿಯನ್ನು ಕೆಲವರು ದುರುಪಯೋಗ ಪಡಿಸಿಕೊಂಡು ಅನಗತ್ಯವಾಗಿ ಓಡಾಡುತ್ತಿದ್ದರು. ಇದನ್ನು ಗಮನಿಸಿದ ಪೊಲೀಸರು, ಶನಿವಾರ ಕಟ್ಟುನಿಟ್ಟಿನ ವಿಚಾರಣೆ ನಡೆಸಿ ಅನಗತ್ಯ ಸಂಚಾರ ನಡೆಸಿದವರಿಗೆ ದಂಡದ ಬಿಸಿ ಮುಟ್ಟಿಸಿದರು.
ಹಲವೆಡೆ ಬ್ಯಾರಿಕೇಡ್: ಅನಗತ್ಯ ವಾಹನ ಸಂಚಾರ ತಡೆಯಲು ಪೊಲೀಸರು ನಗರದ ವಿವಿಧೆಡೆ ಬ್ಯಾರಿಕೇಡ್ ಹಾಕಿದ್ದರು. ಈ ಬ್ಯಾರಿಕೇಡ್ ಗಳ ಕಾರಣದಿಂದಾಗಿ ತುರ್ತು ಸೇವೆಗಾಗಿ ರಸ್ತೆಗಿಳಿದವರು ಸುತ್ತು ಹಾಕಿ ಬೇರೆ ರಸ್ತೆಗಳ ಮೂಲಕ ಸಂಚರಿಸುವಂತಾಯಿತು. ತುರ್ತು ಅಗತ್ಯ ಸೇವೆಗಳಾದ ಆಸ್ಪತ್ರೆ, ಔಷಧ ಅಂಗಡಿ ಹಾಗೂ ಪೆಟ್ರೊಲ್ ಬಂಕ್‌ಗಳು ಎಂದಿನಂತೆ ತೆರೆದಿದ್ದವು. ಆಟೋ, ಟ್ಯಾಕ್ಸಿ, ಸರ್ಕಾರಿ ಹಾಗೂ ಖಾಸಗಿ ಬಸ್, ವಾಹನ ಸಂಚಾರ ಸಹ ಸಂಪೂರ್ಣ ಬಂದ್ ಆಗಿದ್ದವು. ಮಹಾನಗರ ವ್ಯಾಪ್ತಿಯ ಜನದಟ್ಟಣೆಯ ಪ್ರದೇಶಗಳೆಲ್ಲವೂ ಜನ, ವಾಹನ ಸಂಚಾರವಿಲ್ಲದೇ ಭಣಗುಟ್ಟಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
MUST WATCH
ಹೊಸ ಸೇರ್ಪಡೆ
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.