ಲಸಿಕಾಕರಣ ಶಿಬಿರಕ್ಕೆ ತಡೆಯೊಡ್ಡಿಲ್ಲ

Team Udayavani, Jul 1, 2021, 10:02 PM IST

1-15

ದಾವಣಗೆರೆ: ಮಹಾನಗರ ಪಾಲಿಕೆಯ 25ನೇ ವಾಡ್‌ ìನಲ್ಲಿ ಕಾಂಗ್ರೆಸ್‌ನಿಂದ ಆಯೋಜಿಸಲಾಗಿದ್ದ ಕೊರೊನಾ ಲಸಿಕಾಕರಣ ಶಿಬಿರಕ್ಕೆ ತಡೆಯೊಡ್ಡಿರುವುದಾಗಿ ತಮ್ಮ ವಿರುದ್ಧ ಮಾಡಿರುವ ಆರೋಪದಲ್ಲಿ ಹುರುಳಿಲ್ಲ ಎಂದು ಮೇಯರ್‌ ಎಸ್‌.ಟಿ. ವೀರೇಶ್‌ ಸ್ಪಷ್ಟಪಡಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 25ನೇ ವಾರ್ಡ್‌ನ ಲಸಿಕಾಕರಣ ಶಿಬಿರಕ್ಕೆ ಲಸಿಕೆ ತಡೆಯುವಲ್ಲಿ ತಮ್ಮ ಹಾಗೂ ಸಂಸದರ ಯಾವುದೇ ಪಾತ್ರವೂ ಇಲ್ಲ. ಆದರೂ ತಮ್ಮ ಹಾಗೂ ಸಂಸದರ ವಿರುದ್ಧ ಮಾಡಲಾಗಿರುವ ಆರೋಪ ಸುಳ್ಳು. ಸರ್ಕಾರಿ ಲಸಿಕೆಯನ್ನು ಖಾಸಗಿ ಬ್ಯಾನರ್‌ನಡಿ ನೀಡುವುದಕ್ಕೆ ತಾವು ಆಕ್ಷೇಪಣೆ ಮಾಡಿದ್ದಾಗಿ ತಿಳಿಸಿದರು. ಲಸಿಕಾಕರಣದ ಶಿಬಿರದ ಹಿಂದಿನ ದಿನದ ಸಂಜೆಯವರೆಗೆ ಸರ್ಕಾರಿ ಲಸಿಕೆಗಳನ್ನು ಖಾಸಗಿ ಬ್ಯಾನರ್‌ ನಡಿ ನೀಡುವ ಬಗ್ಗೆ ಮಾಹಿತಿ ಇರಲಿಲ್ಲ.

ಸಂಬಂಧಿಸಿದ ಅಧಿಕಾರಿಗಳಿಗೂ ಸಹ ಮಾಹಿತಿ ದೊರೆತಿರಲಿಲ್ಲ. ಸರ್ಕಾರದಿಂದ ನೀಡಲಾಗುವ ಲಸಿಕೆಯನ್ನು ಖಾಸಗಿ ಬ್ಯಾನರ್‌ನಡಿ ನೀಡಲಿಕ್ಕೆ ಆಗುತ್ತದೆಯೇ ಎಂಬುದಾಗಿ ಅಧಿಕಾರಿಗಳನ್ನು ಪ್ರಶ್ನಿಸಿದ್ದಾಗಿ ಹೇಳಿದರು. ಶಾಸಕ ಶಾಮನೂರು ಶಿವಶಂಕರಪ್ಪ ಅವರು ಸ್ವಂತ ಹಣದಲ್ಲಿ ಲಸಿಕೆ ತರಿಸಿ, ಉಚಿತವಾಗಿ ನೀಡುತ್ತಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇವೆ. ಆದರೆ ಸರ್ಕಾರದಿಂದ ಪೂರೈಕೆ ಆಗುವ ಲಸಿಕೆಯನ್ನು ಸ್ವಂತ ಬ್ಯಾನರ್‌ನಡಿ ನೀಡುವುದು ಸರಿ ಅಲ್ಲ ಎಂಬ ಸಾಮಾನ್ಯ ಜ್ಞಾನ ಕೆ.ಬಿ. ಬಡಾವಣೆಯಲ್ಲಿನ ಶಿಬಿರದ ಆಯೋಜಕರಿಗೆ ಇರಬೇಕಿತ್ತು. ಶಿಬಿರ ಸಂದರ್ಭದಲ್ಲಿ ಉಂಟಾದ ಗೊಂದಲಕ್ಕೆ ತಾವು, ಸಂಸದರು, ಬಿಜೆಪಿ ಕಾರಣ ಅಲ್ಲವೇ ಅಲ್ಲ. ಕಾಂಗ್ರೆಸ್‌ನವರದ್ದೇ ತಪ್ಪು. ಅವರೇ ಗೊಂದಲಕ್ಕೆ ಕಾರಣ ಎಂದರು.

ಕೊರೊನಾ ಮೊದಲ ಮತ್ತು ಎರಡನೇ ಅಲೆಯ ಸಂದರ್ಭದಲ್ಲಿ ಏನೂ ಕೆಲಸ ಮಾಡದೆ ಮನೆಯಲ್ಲಿ ಮಲಗಿದ್ದಂತಹ ಕೆ.ಜಿ. ಶಿವಕುಮಾರ್‌ ಈಗ ಮಾತನಾಡುತ್ತಿದ್ದಾರೆ. ಇಲ್ಲಿಯವರೆಗೆ ಅವರೇನು ಮಾಡುತ್ತಿದ್ದರು ಎಂದು ನಾವು ಪ್ರಶ್ನಿಸಬೇಕಾಗುತ್ತದೆ. ಯಾವುದೇ ಕೆಲಸ ಮಾಡದೇ ಇದ್ದವರು ಆರೋಪ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಅತ್ತು ಕರೆದು ಲಸಿಕೆ ತರುವ ಕೆಲಸ ಮಾಡುವಂತಹ ಪರಿಸ್ಥಿತಿಯಾಗಲೀ, ಸಂದರ್ಭವಾಗಲೀ ಇಲ್ಲ. ಅಧಿಕಾರ ಇದೆ, ಅದನ್ನು ಚಲಾಯಿಸಿ ಲಸಿಕೆ ತರುವ ಕೆಲಸ ಮಾಡುತ್ತೇನೆ. ನಮ್ಮ ವಾರ್ಡ್‌ ಜನರಿಗೆ ಲಸಿಕೆ ಕೊಡಿಸುವ ಜವಾಬ್ದಾರಿ ಇದೆ. ಎಲ್ಲರಿಗೂ ಆದ್ಯತೆ ಮೇರೆಗೆ ಲಸಿಕೆ ಕೊಡಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ನಗರ ಯೋಜನೆ ಸ್ಥಾಯಿ ಸಮಿತಿ ಅಧ್ಯಕ್ಷೆ ಉಮಾ ಪ್ರಕಾಶ್‌ ಮಾತನಾಡಿ, ನಮ್ಮ 32ನೇ ವಾರ್ಡ್‌ನಲ್ಲೂ ಜೂ. 28 ರಂದು ಖಾಸಗಿ ಬ್ಯಾನರ್‌ನಡಿ ಸರ್ಕಾರಿ ಲಸಿಕೆ ನೀಡುವುದಕ್ಕೆ ಆಕ್ಷೇಪಣೆ ಮಾಡಲಾಗಿತ್ತು. ದೊಡ್ಡವರು ಒಳ್ಳೆಯ ಕೆಲಸ ಮಾಡು¤ತಾರೆ. ಆದರೆ ಅವರ ಹಿಂಬಾಲಕರು, ಕಾರ್ಯಕರ್ತರು ಹೆಸರು ಕೆಡಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಸರ್ಕಾರದಿಂದ ಪೂರೈಕೆ ಆಗುವ ಲಸಿಕೆಯನ್ನು ಖಾಸಗಿ ಬ್ಯಾನರ್‌ನಡಿ ನೀಡುವುದಕ್ಕೆ ತಮ್ಮ ಅಭ್ಯಂತರ ಇದೆ ಎಂದರು. ಉಪ ಮೇಯರ್‌ ಶಿಲ್ಪಾ ಜಯಪ್ರಕಾಶ್‌, ಸಾರ್ವಜನಿಕ ಶಿಕ್ಷಣ, ಆರೋಗ್ಯ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಎಲ್‌.ಡಿ. ಗೋಣೆಪ್ಪ, ಸದಸ್ಯರಾದ ಕೆ. ಪ್ರಸನ್ನಕುಮಾರ್‌, ಸೋಗಿ ಶಾಂತಕುಮಾರ್‌, ಆರ್‌. ಶಿವಾನಂದ್‌ ಇತರರು ಇದ್ದರು.

ಟಾಪ್ ನ್ಯೂಸ್

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.