ಸಚಿವ ಸ್ಥಾನಕ್ಕಿಂತ ಅಭಿವೃದ್ಧಿ ಮುಖ್ಯ
ಹೊನ್ನಾಳಿ-ನ್ಯಾಮತಿ ತಾಲೂಕು ಧೂಳು ಮುಕ್ತವಾಗಿಸಲು ಯತ್ನ : ರೇಣು
Team Udayavani, Jan 24, 2021, 3:08 PM IST
ಹೊನ್ನಾಳಿ: ನನಗೆ ಸಚಿವ ಸ್ಥಾನಕ್ಕಿಂತ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕುಗಳ ಅಭಿವೃದ್ಧಿಯೇ ಮುಖ್ಯ ಎಂದು
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ಇದನ್ನೂ ಓದಿ : ಎಪಿಎಂಸಿಯಲ್ಲಿ ಲಾರಿ ಸಾಲು-ಆಕ್ರೋಶ
ತಾಲೂಕಿನ ವಿವಿಧೆಡೆ ಶನಿವಾರ ಪೂರ್ಣಗೊಂಡ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಹಲವು ಕಾಮಗಾರಿಗಳಿಗೆ ಚಾಲನೆ
ನೀಡಿ ಅವರು ಮಾತನಾಡಿದರು. ಅವಳಿ ತಾಲೂಕಿನ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತಂದು ಸಮಗ್ರವಾಗಿ ಅಭಿವೃದ್ಧಿಪಡಿಸುವುದೇ ಗುರಿ. 2 ತಾಲೂಕುಗಳನ್ನು ಧೂಳು ಮುಕ್ತ ಮಾಡುವುದರ ಜೊತೆಗೆ ರಾಜ್ಯದಲ್ಲಿಯೇ ಮಾದರಿ ತಾಲೂಕುಗಳನ್ನಾಗಿ ಮಾಡುತ್ತೇನೆ ಎಂದರು.
ಅಯೋಧ್ಯೆಯಲ್ಲಿ ನಿರ್ಮಾಣ ಮಾಡುತ್ತಿರುವ ಶ್ರೀರಾಮ ಮಂದಿರ ಐತಿಹಾಸಿಕ ಸ್ಮಾರಕವಾಗಲಿದೆ. ರಾಮಮಂದಿರವನ್ನು ಸರ್ಕಾರಗಳು, ಶ್ರೀಮಂತರಿಂದ ಹಣ ಪಡೆದು ಕಟ್ಟಬಹುದಿತ್ತು. ಆದರೆ ದೇಶದ ಜನರಿಂದ ದೇಣಿಗೆ ಪಡೆದು ಕಟ್ಟಲು ನಿರ್ಧರಿಸಲಾಗಿದ್ದು, ಪ್ರತಿಯೊಬ್ಬರೂ ಐತಿಹಾಸಿಕ ಶ್ರೀರಾಮಮಂದಿರ ನಿರ್ಮಾಣಕ್ಕೆ ಕೈಜೋಡಿಸುವಂತೆ ಮನವಿ ಮಾಡಿದರು.
ಕ್ಯಾಸಿನಕೆರೆ, ಕರಡಿ ಕ್ಯಾಂಪ್, ತ್ಯಾಗದಕಟ್ಟೆ, ಹುಣಸಘಟ್ಟ, ಲಿಂಗಾಪುರ, ಹನಗವಾಡಿ, ಹನುಮನಹಳ್ಳಿ, ಐನೂರುಗ್ರಾಮಗಳಲ್ಲಿ ಸಿಸಿ ರಸ್ತೆ, ಡಾಂಬರ್ ರಸ್ತೆ, ವಾಟರ್ ಟ್ಯಾಂಕ್, ಅಂಬೇಡ್ಕರ್ ಭವನ, ಶಾಲಾ ಕೊಠಡಿಗಳು ಸೇರಿದಂತೆ 15.24 ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಶಾಸಕರು ನೆರವೇರಿಸಿ ದರು. ಈ ಸಂದರ್ಭದಲ್ಲಿ ಜಿಪಂ ಸದಸ್ಯ ವೀರಶೇಖರಪ್ಪ, ಎಪಿಎಂಸಿ ಅಧ್ಯಕ್ಷ ಸುರೇಶ್, ತಾಲೂಕು ಪಂಚಾಯಿತಿ ಅಧ್ಯಕ್ಷೆ ಚಂದ್ರಮ್ಮ ಹಾಲೇಶಪ್ಪ, ಉಪಾಧ್ಯಕ್ಷ ಕೆ.ಎಲ್. ರಂಗನಾಥ್, ಎಪಿಎಂಸಿ ಸದಸ್ಯ ರಾಜು, ಬಿಜೆಪಿ ರೈತ ಮೋರ್ಚಾ ತಾಲೂಕು ಕಾರ್ಯದರ್ಶಿ ಹರೀಶ್ ಪಟೇಲ್ ಸೇರಿದಂತೆ ವಿವಿಧ ಇಲಾಖೆ ಅಧಿ ಕಾರಿಗಳು, ಗ್ರಾಪಂ ಸದಸ್ಯರು ಹಾಗೂ ಮುಖಂಡರು ಇದ್ದರು.
ಇದನ್ನೂ ಓದಿ : ರೈತರ ಟ್ರಾಕ್ಟರ್ ರ‍್ಯಾಲಿಗೆ ಮಾರ್ಗಗಳನ್ನು ಸೂಚಿಸಿದ ದೆಹಲಿ ಪೊಲೀಸರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”
Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.