ಹೌಸ್‌ಕೀಪಿಂಗ್‌ ವ್ಯಕ್ತಿಯಿಂದ ಮತ್ತೆ 15 ಮಂದಿಗೆ ಸೋಂಕು


Team Udayavani, May 18, 2020, 5:12 AM IST

house-keeping

ಬೆಂಗಳೂರು: ಕೋವಿಡ್‌ 19 ವೈರಸ್‌ ಸೋಂಕಿತನಾಗಿದ್ದ ನಗರದ ಹೋಟೆಲೊಂದರ ಸಹಾಯಕ ಸಿಬ್ಬಂದಿಯಿಂದ (ಪಿ -653) ಭಾನುವಾರ ಮತ್ತೆ 15 ಮಂದಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ. ಇದರೊಂದಿಗೆ ಬೆಂಗಳೂರಿ ನ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 231ಕ್ಕೆ ಏರಿಕೆಯಾಗಿದೆ.

ಶಿವಾಜಿನಗರದ ಹೋಟೆಲ್‌ನಲ್ಲಿ ಹೌಸ್‌ ಕೀಪಿಂಗ್‌ ಮಾಡುತ್ತಿದ್ದ ಅಸ್ಸಾಂ ಮೂಲದ 34 ವರ್ಷದ ಪುರುಷನಿಗೆ ಮೇ 5ರಂದು ಸೋಂಕು ದೃಢಪಟ್ಟಿತ್ತು. ಹೀಗಾಗಿ, ಆತನ ಪ್ರಾಥಮಿಕ ಸಂಪರ್ಕದಲ್ಲಿದ್ದ, ವಾಸವಿದ್ದ ವಸತಿ ಸಮುತ್ಛಯ ದಲ್ಲಿ 73 ಮಂದಿಯನ್ನು ಕರೆತಂದು ಸರ್ಕಾರದ ಸಾಮೂಹಿಕ ಕ್ವಾರಂಟೈನ್‌ನಲ್ಲಿ ಇಡಲಾಗಿತ್ತು.

ಆರೋಗ್ಯ ಇಲಾಖೆ ಮಾರ್ಗ ಸೂಚಿ ಯಂತೆ ಕ್ವಾರಂಟೈನ್‌ ನಲ್ಲಿರುವವರ ಸೋಂಕು ಪರೀಕ್ಷೆ ನಡೆಸಿ ದಾಗ ಭಾನವಾರ 15 ಮಂದಿ ಸೇರಿ ಒಟ್ಟು 45 ಮಂದಿಗೆ ಸೋಂಕು ತಗುಲಿದೆ. ಶಿವಾಜಿ ನಗರದಲ್ಲಿ ಈವರೆಗೂ 46 ಸೋಂಕು ಪ್ರಕರಣ ಪತ್ತೆಯಾಗಿವೆ. ಎಲ್ಲಾ ಸೋಂಕಿ ತರನ್ನು ಕ್ವಾರಂಟೈನ್‌ನಿಂದ ನಗರದ ಕೋವಿಡ್‌ 19 ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಿಬಿಎಂಪಿ ವೈದ್ಯಾಧಿಕಾರಿ ಗಳು ಮಾಹಿತಿ ನೀಡಿದರು.

7 ಮಂದಿ ಗುಣಮುಖ: ನಗರದ ಒಟ್ಟಾರೆ ಸೋಂಕಿತರ ಪೈಕಿ ಭಾನುವಾರ ಒಬ್ಬ ಬಾಲಕ, ಒಬ್ಬ ಬಾಲಕಿ ಸೇರಿದಂತೆ 7 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿ   ದ್ದಾರೆ. ಬಾಕಿ 101 ಮಂದಿ ನಗರದ ವಿವಿಧ ಕೋವಿಡ್‌ 19 ಚಿಕಿತ್ಸಾ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಾದರಾಯನಪುರ ಪರೀಕ್ಷೆ ರಜೆ: ಹಾಟ್‌ಸ್ಪಾಟ್‌ ಆದ ಪಾದರಾಯನಪುರ ವಾರ್ಡ್‌ನ ಎಲ್ಲರಿಗೂ ಸೋಂಕು ಪರೀ ಕ್ಷೆಗೆ ಬಿಬಿಎಂಪಿ ನಿರ್ಧರಿಸಿತ್ತು. ಆದರೆ, ಭಾನುವಾರ ಹಿನ್ನೆಲೆ ಸೋಂಕು ಪರೀಕ್ಷೆ ಗಂಟಲು ದ್ರವ ಸಂಗ್ರಹ ಶಿಬಿರ ನಡೆದಿಲ್ಲ. ಶನಿವಾರ 68 ಮಂದಿ ಗಂಟಲು ದ್ರವ ಸಂಗ್ರಹಿಸಲಾಗಿತ್ತು. ಇನ್ನು  ಸೋಮವಾರ ದಿಂದ ಎಂದಿನಂತೆ ಜೆಜೆಆರ್‌ ನಗರದ ಪೊಲೀಸ್‌ ನಿಲ್ದಾಣ ಬಳಿ ಹಾಗೂ ಜೆಜೆಆರ್‌ ನಗರ ಆಸ್ಪತ್ರೆ ಬಳಿ ಶಿಬಿರ ನಡೆಯಲಿದೆ ಎಂದು ಬಿಬಿಎಂಪಿ  ಆರೋಗ್ಯಾಧಿಕಾರಿಗಳು ತಿಳಿಸಿದರು.

ಇಂದು ಪರೀಕ್ಷಾ ವರದಿ: ವಿದೇಶದಲ್ಲಿ ಸಿಲುಕಿರುವ ಕನ್ನಡಿಗರು ವಂದೇ ಮಾತರಂ ಮಿಷನ್‌ನಡಿ ಅಮೇರಿಕಾ ಹಾಗೂ ಸಿಂಗಾಪುರದಿಂದ ಬೆಂಗಳೂರಿಗೆ ಬಂದಿದ್ದ 200ಕ್ಕೂ ಹೆಚ್ಚು  ಮಂದಿಯ ಮೊದಲ ಸೋಂಕು ಪರೀಕ್ಷಾ ವರದಿ ಸೋಮವಾರ ಬರಲಿದೆ.

ಸದ್ಯ ಎಲ್ಲರೂ ನಗರದ ಹೋಟೆಲ್‌  ಕ್ವಾರಂಟೈನ್‌ನಲ್ಲಿದ್ದಾರೆ. ಈ ಹಿಂದೆ ಲಂಡನ್‌ನಿಂದ ಬಂದಿದ್ದ 323 ಮಂದಿ ಪೈಕಿ ಒಬ್ಬರಿಗೆ ಸೋಂಕು ದೃಢಪಟ್ಟಿತ್ತು. ಇನ್ನು ವಂದೇ ಮಾತರಂ ಮಿಷನ್‌ನಡಿ ಕನ್ನಡಿಗರನ್ನು ಹೊತ್ತ ಮುಂದಿನ ವಿಮಾನ ಕೌಲಾಲಂಪುರದಿಂದ ಮೇ 19 (ಮಂಗಳವಾರ) ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.