3 ಲಕ್ಷ ಮೌಲ್ಯದ ಮಾದಕ ವಸ್ತು ಆಮದು: ಬಂಧನ
Team Udayavani, Jun 26, 2020, 6:05 AM IST
ಬೆಂಗಳೂರು: ಬೆಂಗಳೂರು ಮತ್ತು ಚೆನ್ನೈ ಕಸ್ಟಮ್ಸ್ ಅಧಿಕಾರಿಗಳ ಜಂಟಿ ಕಾರ್ಯಾಚರಣೆಯಲ್ಲಿ ವಿದೇಶದಿಂದ ಲಕ್ಷಾಂತರ ಮೌಲ್ಯದ ಮಾದಕ ವಸ್ತುಗಳನ್ನು ಜರ್ಮನಿಯಿಂದಆಮದು ಮಾಡಿಕೊಂಡಿದ್ದ ಆರೋಪಿಯನ್ನು ಬಂಧಿಸಲಾ ಗಿದೆ. ಕೋರಮಂಗಲ ನಿವಾಸಿ ಕವಿ ಕುಮಾರ್ (25) ಬಂಧಿತ. ಆರೋಪಿಯಿಂದ 3 ಲಕ್ಷ ಮೌಲ್ಯದ ಎಂಡಿಎಂಎ ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಲೇಷಿಯಾ ಮೂಲದ ಆರೋಪಿ, ಬೆಂಗಳೂರಿನ ಇ- ಕಾಮರ್ಸ್ ಕಂಪನಿಯ ಕಚೇರಿಯೊಂದರಲ್ಲಿ ಕ್ವಾಲಿಟಿ ಅನಾಲಿಸಿಸ್ಟ್ ಆಗಿ ಕೆಲಸ ಮಾಡುತ್ತಿದ್ದ. ಆರೋಪಿ, ಅಧಿಕಾರ ದುರುಪಯೋಗ ಪಡಿಸಿ ಕೊಂಡು ಮಾದಕ ವಸ್ತು ದಂಧೆ ಯಲ್ಲಿ ತೊಡಗಿದ್ದ ಎಂಬುದು ಗೊತ್ತಾಗಿದೆ. ಈ ಕುರಿತು ತನಿಖೆ ಯನ್ನು ಮುಂದುವರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಲಾಕ್ ಡೌನ್‌ಗೂ ಮುನ್ನ ಜರ್ಮನಿಯಿಂದ ಮಾದಕ ವಸ್ತುಗಳನ್ನು ಚೆನ್ನೈಗೆ ಪಾರ್ಸಲ್ ತರಿಸಿಕೊಂಡಿದ್ದ. ಚೆನ್ನೈಗೆ ಹೋಗಬೇಕಿದ್ದ ಆರೋಪಿ, ಲಾಕ್‌ಡೌನ್‌ನಿಂದಾಗಿ ಇಲ್ಲಿಯೇ ಉಳಿದುಕೊಂಡಿದ್ದ. ಆದರೆ, ಚೆನ್ನೈ ಕಸ್ಟಮ್ಸ್ ಅಧಿಕಾರಿಗಳಿಗೆ ಅನುಮಾ ನ ದಿಂದ ಪಾರ್ಸೆಲ್ ಪರಿಶೀಲಿಸಿ ದಾಗ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ಪಾರ್ಸೆಲ್‌ನಲ್ಲಿ ಉಲ್ಲೇಖೀಸಿದ್ದ ವಿಳಾಸವನ್ನು ಆಧರಿಸಿ ಕಸ್ಟಮ್ಸ್ ಅಧಿಕಾರಿಗಳು ತನಿಖೆ ಕೈಗೊಂಡಿದ್ದರು.
ಚೆನ್ನೈ ಮನೆಗೆ ಭೇಟಿ ನೀಡಿದಾಗ, ಸಂಬಂಧಿಕರ ಮನೆ ಎಂಬುದು ಗೊತ್ತಾಗಿತ್ತು. ಆರೋಪಿ ನಗರದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡಿ ಕೊಂಡು ಕೋರಮಂಗಲದಲ್ಲಿ ವಾಸವಾಗಿರುವುದನ್ನು ಪತ್ತೆ ಹಚ್ಚಿದ್ದರು. ಏರ್ ಕಸ್ಟಮ್ಸ್ ಅಧಿಕಾರಿಗಳ ನೆರವು ಪಡೆದು ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Bengaluru; ಪಟಾಕಿ ಬಾಕ್ಸ್ ಮೇಲೆ ಕುಳ್ಳಿರಿಸಿ ಸ್ನೇಹಿತರ ಹುಚ್ಚಾಟ: ಯುವಕ ಸಾ*ವು
ತಂದೆ, ಮಗು ಸಾವು: ಬೆಸ್ಕಾಂ ಎಂಜಿನಿಯರ್ ವಿರುದ್ಧದ ಕೇಸು ರದ್ದತಿಗೆ ಹೈಕೋರ್ಟ್ ನಕಾರ
Arrested: ರಾಜಸ್ಥಾನದಿಂದ ಫ್ಲೈಟ್‌ನಲ್ಲಿ ಬಂದು ಕಾರು ಕದಿಯುತ್ತಿದ್ದವನ ಸೆರೆ; ಆರೋಪಿ ಬಂಧನ
MUST WATCH
ಹೊಸ ಸೇರ್ಪಡೆ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್‌ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.