ಜಿಮ್‌ಗಾಗಿಯೇ 50 ಸಾವಿರ ಎಕರೆ ಭೂಮಿ

Team Udayavani, Nov 1, 2022, 11:07 AM IST

6

ಸಾಂದರ್ಭಿಕ ಚಿತ್ರ

ಬೆಂಗಳೂರು: ಐದನೇ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಭರದ ಸಿದ್ಧತೆ ನಡೆಸಿರುವ ಸರ್ಕಾರ, 2022ನೇ ಸಾಲಿನ ಹೂಡಿಕೆದಾರರಿಗಾಗಿಯೇ ಸುಮಾರು ಐವತ್ತು ಸಾವಿರ ಎಕರೆ ಭೂಮಿಯನ್ನು ತೆಗೆದಿಡಲು ಉದ್ದೇಶಿಸಿದೆ.

ಸಮಾವೇಶದ ತಯಾರಿ ಜತೆಯಲ್ಲೇ ಅದರಲ್ಲಿ ಹೂಡಿಕೆಗೆ ಮುಂದೆಬರುವವರಿಗೆ ಅಗತ್ಯ ಭೂಮಿ ಪೂರೈಸಲು ಸಿದ್ಧತೆ ನಡೆದಿದೆ. ಈ ಸಂಬಂಧ ಬೆಂಗಳೂರು ಸುತ್ತಲಿನ ಪ್ರದೇಶದಲ್ಲಿ ಸುಮಾರು ಐವತ್ತು ಸಾವಿರ ಎಕರೆ ಭೂಮಿಯನ್ನು ಕೈಗಾರಿಕಾ ಉದ್ದೇಶಕ್ಕೆ ಗುರುತಿಸಿ ಮೀಸಲಿಡುವ ಪ್ರಕ್ರಿಯೆ ಸದ್ದಿಲ್ಲದೆ ನಡೆದಿದೆ. ಅಂದು ಕೊಂಡಂತೆ ಎಲ್ಲವೂ ನಡೆದರೆ, “ಜಿಮ್‌’ (ಜಾಗತಿಕ ಹೂಡಿಕೆದಾರರ ಸಮಾವೇಶ) ಮುಗಿದು ಆರು ತಿಂಗಳಲ್ಲಿ ಭೂಮಿಯ ಹಂಚಿಕೆ ಮತ್ತು ಅನು ಷ್ಠಾನ ಪ್ರಕ್ರಿಯೆಗೆ ಚಾಲನೆ ನೀಡುವ ಗುರಿ ಸರ್ಕಾರದ ಮುಂದಿದೆ.

ರಾಜ್ಯದಲ್ಲಿ ಭೂಮಿಯ ಲಭ್ಯತೆ ಸಾಕಷ್ಟಿದೆ. ಮತ್ತಷ್ಟು ಭೂಮಿಯನ್ನು ನೀಡಲು ಜನ ಕೂಡ ತಯಾರಿದ್ದಾರೆ. ಆದರೆ, ಅದು ಹೂಡಿಕೆದಾರರಿಗೆ ಬೇಕಾದ ಕಡೆಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಇಲ್ಲ. ಇದು ಸರ್ಕಾರಕ್ಕೆ ತುಸು ತಲೆನೋವಾಗಿದೆ. ಇದಕ್ಕಾಗಿ ಹುಡುಕಾಟ ನಡೆದಿದೆ. 50 ಸಾವಿರ ಎಕರೆಯಲ್ಲಿ ಸುಮಾರು ಮೂರ ರಿಂದ ನಾಲ್ಕು ಸಾವಿರ ಎಕರೆ ಭೂಮಿ ದೇವನಹಳ್ಳಿ ಆಸುಪಾಸಿನಲ್ಲೇ ಲಭ್ಯವಿದೆ. ಇದಲ್ಲದೆ, ಬೇರೆ ಬೇರೆ ಕಡೆಗಳಲ್ಲೂ ಗುರುತಿಸಿ, ಜಿಮ್‌ಗಾಗಿಯೇ ತೆಗೆದಿಡಲು ಉದ್ದೇಶಿಸಲಾಗಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಉನ್ನತ ಅಧಿಕಾರಿಯೊಬ್ಬರು “ಉದಯವಾಣಿ’ಗೆ ತಿಳಿಸಿದರು.

ಮತ್ತೂಂದೆಡೆ ರಾಜ್ಯದಲ್ಲಿ ಕಳೆದೆರಡು ದಶಕಗಳಿಂದ ಸುಮಾರು 10,800 ಎಕರೆ ಕೈಗಾರಿಕಾ ಪ್ರದೇಶ ಖಾಲಿ ಬಿದ್ದಿದೆ. ಇದರಲ್ಲಿ 7,500 ಎಕರೆ ಸ್ಟೀಲ್‌ ಘಟಕಕ್ಕೆ ಸಂಬಂಧಿಸಿದ್ದಾಗಿದೆ. ಉಳಿದದ್ದು ವಿವಿಧ ಕೈಗಾರಿಕೆಗಳ ಉದ್ದೇಶಕ್ಕೆ ಪಡೆದಿದ್ದಾಗಿದೆ. ಕೈಗಾರಿಕೆ ಸ್ಥಾಪನೆ ವಿಳಂಬ ವಾದ ಹಿನ್ನೆಲೆಯಲ್ಲಿ 1,117 ಉದ್ದಿಮೆದಾರರಿಗೆ ನೋಟಿಸ್‌ ನೀಡಲಾಗಿದೆ. ಇದರಲ್ಲಿ ಈಗಾಗಲೇ 69 ಉದ್ಯಮಿಗಳಿಂದ 386 ಎಕರೆ ವಾಪಸ್‌ ಪಡೆಯಲಾಗಿದೆ. ರಾಜ್ಯದಲ್ಲಿ 52,008 ಎಕರೆ ವಿಸ್ತೀರ್ಣದಲ್ಲಿ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿಪಡಿಸಲಾಗಿದೆ. ಸ್ವಾಧೀನಪಡಿಸಿಕೊಳ್ಳಲು ಉದ್ದೇಶಿಸಿರುವ ಭೂಮಿಯಲ್ಲಿ ಬೆಂಗಳೂರು ನಗರ ಮತ್ತು ಗ್ರಾಮಾಂತರದಲ್ಲೇ 20 ಸಾವಿರ ಎಕರೆ ಭೂಸ್ವಾಧೀನ ಗುರಿ ಇದೆ ಎನ್ನಲಾಗಿದೆ.

100 ಕಿ.ಮೀ.ಗೊಂದು ಏರ್‌ಪೋರ್ಟ್‌: ಈ ಮಧ್ಯೆ ರಾಜ್ಯದಲ್ಲಿ ಪ್ರತಿ ನೂರು ಕಿ.ಮೀ.ಗೊಂದು ವಿಮಾನ ನಿಲ್ದಾಣ ನಿರ್ಮಿಸಲು ಸರ್ಕಾರ ಯೋಜನೆ ರೂಪಿ ಸಿದೆ. ಪ್ರಸ್ತುತ 11 ನಿಲ್ದಾಣಗಳಿದ್ದು, ಇನ್ನೂ 5ರಿಂದ 6 ನಿಲ್ದಾಣಗಳು ಮುಂದಿನ 18 ತಿಂಗಳಲ್ಲಿ ತಲೆಯೆತ್ತಲಿವೆ.

“ಬಾದಾಮಿ, ರಾಯಚೂರು, ಕೊಪ್ಪಳ, ದಾವಣ ಗೆರೆ, ಚಿಕ್ಕಮಗಳೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾ ಣಕ್ಕೆ ಯೋಜನೆ ರೂಪಿಸಲಾಗಿದೆ. ಪ್ರತಿ ನಿಲ್ದಾಣಕ್ಕೆ ಕನಿಷ್ಠ 400-500 ಎಕರೆ ಭೂಮಿಯ ಅವಶ್ಯಕತೆ ಇದ್ದು, ಇದನ್ನು ಗುರುತಿಸುವ ಕೆಲಸ ನಡೆದಿದೆ. ವಿಮಾನಯಾನ ಸಂಪರ್ಕದ ಜತೆಗೆ ಮತ್ತೂಂದೆಡೆ ಕೈಗಾರಿಕಾ ಕಾರಿಡಾರ್‌ಗಳ ನಿರ್ಮಾಣಕ್ಕೂ ಸಿದ್ಧತೆ ನಡೆದಿದೆ. ಇದಕ್ಕೆ ಪೂರಕವಾಗಿ ವಿದ್ಯುತ್‌ ಲಭ್ಯತೆ ರಾಜ್ಯದಲ್ಲಿ ಸಾಕಷ್ಟಿದೆ. ಹಾಗಾಗಿ, ಭವಿಷ್ಯದಲ್ಲಿ ಎರಡು- ಮೂರನೇ ಹಂತದ ನಗರಗಳ ಭಾಗ್ಯದ ಬಾಗಿಲು ತೆರೆಯಲಿದೆ’ ಎಂದು ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸುತ್ತಾರೆ.

-ವಿಜಯಕುಮಾರ ಚಂದರಗಿ

ಟಾಪ್ ನ್ಯೂಸ್

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ

Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ

Bengaluru: ಸಾಲ ವಾಪಸ್‌ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ

Bengaluru: ಸಾಲ ವಾಪಸ್‌ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.