Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

ಭಾರತದಲ್ಲಿ ವೈಜ್ಞಾನಿಕ ಸಂಶೋಧನೆಗೆ ಅಸಾಮಾನ್ಯ ಕೊಡುಗೆ ನೀಡಿದ ಪರಿಣಿತರಿಗೆ ಗೌರವ ; 6 ತಜ್ಞರಿಗೆ 6 ವಿಭಾಗಗಳಲ್ಲಿ ಗೌರವ ; ಪ್ರಶಸ್ತಿ ಮೊತ್ತ ತಲಾ 84 ಲಕ್ಷ

Team Udayavani, Nov 15, 2024, 12:27 PM IST

8-bng

ಬೆಂಗಳೂರು: ಆರು ವಿಭಾಗಗಳಲ್ಲಿ “ಇನ್ಫೊಸಿಸ್‌ ಪ್ರಶಸ್ತಿ 2024’ಕ್ಕೆ ಪಾತ್ರರಾಗಿರುವ 6 ಸಾಧಕರ ಹೆಸರನ್ನು ಇನ್ಫೊಸಿಸ್‌ ಸೈನ್ಸ್‌ ಫೌಂಡೇಷನ್‌ (ಐಎಸ್‌ಎಫ್) ಘೋಷಿಸಿದೆ.

ಜಯನಗರದಲ್ಲಿರುವ ಇನ್ಫೊಸಿಸ್‌ ಸೈನ್ಸ್‌ ಫೌಂಡೇಷನ್‌ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ “ಇನ್ಫೊಸಿಸ್‌ ಪ್ರಶಸ್ತಿ 2024’ಕ್ಕೆ ಆಯ್ಕೆಯಾದವರ ಹೆಸರುಗಳನ್ನು ಐಎಸ್‌ಎಫ್ ನ ಟ್ರಸ್ಟಿಗಳಾದ ಕ್ರಿಸ್‌ ಗೋಪಾಲಕೃಷ್ಣನ್‌ (ಟ್ರಸ್ಟಿಗಳ ಮಂಡಳಿಯ ಅಧ್ಯಕ್ಷ), ನಾರಾಯಣ ಮೂರ್ತಿ, ಕೆ.ದಿನೇಶ್‌, ಡಾ. ಪ್ರತಿಮಾ ಮೂರ್ತಿ, ಮೋಹನದಾಸ್‌ ಪೈ ಮತ್ತು ಎಸ್‌.ಡಿ.ಶಿಬುಲಾಲ್‌ ಘೋಷಿಸಿದರು.

ಐಎಸ್‌ಎಫ್ ನ ಇತರ ಟ್ರಸ್ಟಿಗಳಾದ ನಂದನ್‌ ನಿಲೇಕಣಿ, ಶ್ರೀನಾಥ್‌ ಬಾಟ್ನಿ ಮತ್ತು ಸಲೀಲ್‌ ಪಾರೇಖ್‌ ಈ ವರ್ಷದ ಪ್ರಶಸ್ತಿಗೆ ಆಯ್ಕೆಯಾಗಿರುವವರನ್ನು ಅಭಿನಂದಿಸಿದರು. ಪ್ರತಿ ವಿಭಾಗದಲ್ಲಿ ನೀಡುವ ಪ್ರಶಸ್ತಿಯು ಚಿನ್ನದ ಪದಕ, ಪ್ರಶಂಸಾಪತ್ರ, 84 ಲಕ್ಷ ರೂ. (1 ಲಕ್ಷ ಅಮೆರಿಕನ್‌ ಡಾಲರ್‌) ಒಳಗೊಂಡಿರುತ್ತದೆ.

ಅರುಣ್‌ ಚಂದ್ರಶೇಖರ್‌: ಅರ್ಥಶಾಸ್ತ್ರ ವಿಭಾಗದಲ್ಲಿ “ಇನ್ಫೊಸಿಸ್‌ ಪ್ರಶಸ್ತಿ 2024’ನ್ನು ಸ್ಟ್ಯಾನ್ಫೋರ್ಡ್‌ ವಿವಿಯ ಅರ್ಥಶಾಸ್ತ್ರ ವಿಭಾಗದ ಪೊ›. ಅರುಣ್‌ ಚಂದ್ರಶೇಖರ್‌ಗೆ ಘೋಷಿಸಲಾಗಿದೆ. ಕಂಪ್ಯೂ ಟರ್‌ ವಿಜ್ಞಾನ, ಮೆಷಿನ್‌ ಲರ್ನಿಂಗ್‌ನಿಂದ ತಾತ್ವಿಕ ಮಾದರಿಗಳ ನೆರವು ಪಡೆದು, ದತ್ತಾಂಶ ಬಳಕೆ ಮಾಡಿ ಸಾಮಾಜಿಕ, ಆರ್ಥಿಕ ಜಾಲ ಗಳ ಅಧ್ಯಯನಕ್ಕೆ ಕೊಡುಗೆ.

ಶ್ಯಾಮ್‌ ಗೊಲ್ಲಕೋಟ: ಎಂಜಿನಿಯರಿಂಗ್‌ ಮತ್ತು ಕಂಪ್ಯೂಟರ್‌ ವಿಜ್ಞಾನ ವಿಭಾಗದಲ್ಲಿ ವಾಷಿಂಗ್ಟನ್‌ ವಿಶ್ವವಿದ್ಯಾಲಯದ ಕಂಪ್ಯೂಟರ್‌ ವಿಜ್ಞಾನ ಮತ್ತು ಎಂಜಿನಿಯರಿಂಗ್‌ ಸ್ಕೂಲ್‌ನ ಪೊ›ಫೆಸರ್‌ ಶ್ಯಾಮ್‌ ಗೊಲ್ಲ ಕೋಟರನ್ನು ಆಯ್ಕೆ ಮಾಡಲಾಗಿದೆ. ಸಾಮಾಜಿಕ ವಾಗಿ ಎಂಜಿನಿಯರಿಂಗ್‌ನ ಹಲವು ವಿಭಾಗಗಳಲ್ಲಿ ನಡೆಸಿದ ಸಂಶೋಧನೆಗೆ ಪ್ರಶಸ್ತಿ.

ಮಹಮೂದ್‌ ಕೂರಿಯಾ: ಮಾನವಿಕ ಮತ್ತು ಸಮಾಜ ವಿಜ್ಞಾನ ವಿಭಾಗದಲ್ಲಿ ಎಡಿನ್ಬರ್ಗ್‌ ವಿವಿಯ ಇತಿಹಾಸ, ಶಾಸ್ತ್ರೀಯ ಮತ್ತು ಪುರಾತತ್ವ ಸ್ಕೂಲ್‌ನ ಪ್ರಾಧ್ಯಾ ಪಕ ಮಹಮೂದ್‌ ಕೂರಿ ಯಾ ಅವರಿಗೆ ಪ್ರಶಸ್ತಿ ಘೋಷಿ ಸಲಾಗಿದೆ. ಜಾಗತಿಕ ದೃಷ್ಟಿಕೋ ನದಿಂದ ಇಸ್ಲಾಂ ಮತ್ತು ಸಾಗರ ಸಂಬಂಧಿ ವಿಷಯ, ಇನ್ನಿತರ ಸಂಶೋಧನೆ, ಕೊಡುಗೆ ಗುರುತಿಸಿ ಪ್ರಶಸಿ.

ಸಿದ್ಧೇಶ್‌ ಕಾಮತ್‌: ಜೀವ ವಿಜ್ಞಾನ ವಿಭಾಗದಲ್ಲಿ ಪುಣೆಯ ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ಜೀವವಿಜ್ಞಾನ ವಿಭಾಗದ ಸಹ ಪ್ರಾಧ್ಯಾಪಕ ಸಿದ್ಧೇಶ್‌ ಕಾಮತ್‌ಗೆ ಪ್ರಶಸ್ತಿ ಸಂದಿದೆ. ಜೀವಿಗಳ ಮೇಲೆ ಪ್ರಭಾವ ಬೀರುವ ಕೊಬ್ಬಿನ ಅಂಶಗಳ ಬಗ್ಗೆ ಅವರು ನಡೆಸಿರುವ ಸಂಶೋಧನೆ ಗುರುತಿಸಿ ಈ ಪ್ರಶಸ್ತಿ ಘೋಷಿಸಲಾಗಿದೆ.

ನೀನಾ ಗುಪ್ತಾ: ಗಣಿತ ವಿಜ್ಞಾನ ವರ್ಗದಲ್ಲಿ ಕೋಲ್ಕತ್ತದ ಭಾರತೀಯ ಸಾಂಖಿಕ ಸಂಸ್ಥೆಯ (ಇಂಡಿಯನ್‌ ಸ್ಟ್ಯಾಟಿಸ್ಟಿಕಲ್‌ ಇನ್ಸ್ಟಿಟ್ಯೂಟ್) ತಾತ್ವಿಕ ಸಂಖ್ಯಾಶಾಸ್ತ್ರ ಮತ್ತು ಗಣಿತ ವಿಭಾಗದ ಪ್ರಾಧ್ಯಾಪಕಿ ನೀನಾ ಗುಪ್ತಾಗೆ ಪ್ರಶಸ್ತಿ. ಆಸ್ಕರ್‌ ಜಾರಿಸ್ಕಿ 1949ರಲ್ಲಿ ಎತ್ತಿದ ಜಾರಿಸ್ಕಿ ಕ್ಯಾನ್ಸಲೇಷನ್‌ ಪ್ರಾಬ್ಲಿಮ್‌ ಸುತ್ತ ನಡೆಸಿರುವ ಕೆಲಸ ಗುರುತಿಸಿ ಈ ಪ್ರಶಸ್ತಿ.

ವೇದಿಕಾ ಖೇಮಾನಿ: ಭೌತ ವಿಜ್ಞಾನ ವಿಭಾಗದಲ್ಲಿ ಸ್ಟ್ಯಾನ್ಫೋರ್ಡ್‌ ವಿವಿಯಸಹ ಪ್ರಾಧ್ಯಾಪಕಿ ವೇದಿಕಾ ಖೇಮಾನಿ ಅವರಿಗೆ ಪ್ರಶಸ್ತಿ ಘೋಷಿಸಲಾಗಿದೆ. ಕ್ವಾಂಟಂ ಕಂಪ್ಯೂಟಿಂಗ್‌ ಹಾಗೂ ಇತರ ತತ್ರಜ್ಞಾನಗಳ ಭವಿಷ್ಯದ ಮೇಲೆ ಬಹುಮುಖ್ಯವಾದ ಪರಿಣಾಮ ಉಂಟು ಮಾಡ ಬಲ್ಲ ರೀತಿಯಲ್ಲಿ ಅವರ ಕೊಡುಗೆ ಗಮನಿಸಿ ಈ ಪ್ರಶಸ್ತಿ ಘೋಷಿಸಲಾಗಿದೆ.

ಟಾಪ್ ನ್ಯೂಸ್

ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ

ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ

Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ

Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ

Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!

Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!

ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ

ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ

Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Theft Case: ರಿಯಲ್‌ ಎಸ್ಟೇಟ್‌ ಉದ್ಯಮಿ ಮನೆಗೆ ನುಗ್ಗಿ 50 ಲಕ್ಷ ಮೌಲ್ಯದ ಚಿನ್ನ ಕಳವು

Theft Case: ರಿಯಲ್‌ ಎಸ್ಟೇಟ್‌ ಉದ್ಯಮಿ ಮನೆಗೆ ನುಗ್ಗಿ 50 ಲಕ್ಷ ಮೌಲ್ಯದ ಚಿನ್ನ ಕಳವು

Bengaluru: ಮದ್ಯಪಾನ, ಅತಿ ವೇಗದ ಚಾಲನೆ: 689 ಕೇಸ್‌, 1.33 ಲಕ್ಷ ರೂ. ದಂಡ

Bengaluru: ಮದ್ಯಪಾನ, ಅತಿ ವೇಗದ ಚಾಲನೆ: 689 ಕೇಸ್‌, 1.33 ಲಕ್ಷ ರೂ. ದಂಡ

Bengaluru: ಪತ್ನಿ ಮೇಲಿನ ಕೋಪಕ್ಕೆ 4.5 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ

Bengaluru: ಪತ್ನಿ ಮೇಲಿನ ಕೋಪಕ್ಕೆ 4.5 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ

ಮಾಲಿನ್ಯ ನಿಯಂತ್ರಣ ಮಂಡಳಿ ನೇಮಕಕ್ಕೆ ವಿದ್ಯಾರ್ಹತೆ ಸಡಿಲ: ಹೈಕೋರ್ಟ್‌ಗೆ ಅರ್ಜಿ

ಮಾಲಿನ್ಯ ನಿಯಂತ್ರಣ ಮಂಡಳಿ ನೇಮಕಕ್ಕೆ ವಿದ್ಯಾರ್ಹತೆ ಸಡಿಲ: ಹೈಕೋರ್ಟ್‌ಗೆ ಅರ್ಜಿ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ

ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ

Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ

Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ

Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!

Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!

ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ

ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.