Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

ನಗರದಲ್ಲಿ ಕೊರೆಸಿದ 144 ಬೋರ್‌ವೆಲ್‌ಗ‌ಳ ಪೈಕಿ 130ರಲ್ಲಿ ನೀರು ಲಭ್ಯ ; ತಂತ್ರಜ್ಞಾನ ಬಳಸಿಕೊಂಡು ಜಲಮೂಲ ಪತ್ತೆ ಹಚ್ಚಿದ ಭೂವಿಜ್ಞಾನಿಗಳು

Team Udayavani, May 3, 2024, 1:21 PM IST

9

ಬೆಂಗಳೂರು: ಹೊಸತನದ ತಂತ್ರಜ್ಞಾನ ಅಳವಡಿಸಿ ಕೊಳ್ಳುವಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡ ಳಿಯು ಹೊಸದಾಗಿ ಕೊರೆಸಿರುವ ಕೊಳವೆಬಾವಿಗಳಲ್ಲಿ ನೀರು ದೊರೆತಿದೆ.

ಇತ್ತೀಚೆಗೆ ಕೊರೆಸಲಾದ 144 ಬೋರ್‌ವೆಲ್‌ಗ‌ಳ ಪೈಕಿ 130 ಬೋರ್‌ವೆಲ್‌ಗ‌ಳಲ್ಲಿ ಉತ್ತಮ ನೀರು ಲಭ್ಯವಾಗುವ ಮೂಲಕ ಶೇ.90ರಷ್ಟು ಸಕ್ಸಸ್‌ ರೇಟ್‌ ಪಡೆದುಕೊಂಡಿದೆ. ಬೆಂಗಳೂರು ನಗರದಲ್ಲಿ ಅಂತರ್ಜಲ ಕೊರತೆ ಯಿಂದಾಗಿ ಆದಂತಹ ನೀರಿನ ಅಭಾವವನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ಬೆಂಗಳೂರು ಜಲ ಮಂಡಳಿಯು ಹಲವಾರು ಮುಂಜಾಗ್ರತಾ ಕ್ರಮ ಗಳನ್ನು ಅಳವಡಿಸಿಕೊಳ್ಳಲು ಮುಂದಾಗಿತ್ತು.

ಇದರಲ್ಲಿ ಅವಶ್ಯವಿರುವ ಕಡೆಗಳಲ್ಲಿ ಹೊಸದಾಗಿ ಕೊಳವೆಬಾವಿ ಕೊರೆಸುವುದು ಕೂಡ ಒಂದಾಗಿದೆ. ಹೆಚ್ಚಿನ ತಂತ್ರಜ್ಞಾನ ಬಳಸದೇ ಇದ್ದಂತಹ ಸಂದರ್ಭದಲ್ಲಿ ಬಹಳಷ್ಟು ಕೊಳವೆ ಬಾವಿಗಳು ನೀರು ಸಿಗದೆ ವಿಫ‌ಲವಾಗಿದ್ದವು. ಇದರಿಂದ ಜಲಮಂಡಳಿಗೆ ಕೊಳವೆಬಾವಿ ಕೊರೆಸುವಲ್ಲಿ ಬಹಳಷ್ಟು ಆರ್ಥಿಕ ನಷ್ಟವಾಗುತ್ತಿತ್ತು. ಒಂದು ಕೊಳವೆಬಾವಿ ಕೊರೆಸುವ ಕಡೆಗಳಲ್ಲಿ ಇನ್ನೊಂದು, ಅದೂ ಯಶಸ್ಸು ಕಾಣದೇ ಇದ್ದಲ್ಲಿ ಮತ್ತೂಂದು ಹೀಗೆ ಮುಂದುವರಿಯುತ್ತಲೇ ಇತ್ತು.

130 ಬೋರ್‌ವೆಲ್‌ಗ‌ಳಲ್ಲಿ ನೀರು: ಇದಕ್ಕೆ ಉತ್ತರ ಕಂಡುಕೊಳ್ಳುವ ನಿಟ್ಟಿನಲ್ಲಿ ಹಾಗೂ ಜಲಮಂಡಳಿಗೆ ಆರ್ಥಿಕವಾಗಿ ಹಣ ಉಳಿಸುವ ಉದ್ದೇಶದಿಂದ ಮಂಡಳಿಯ ಅಧ್ಯಕ್ಷ ಡಾ.ವಿ.ರಾಮ್‌ ಪ್ರಸಾತ್‌ ಮನೋಹರ್‌ ನೂತನ ತಂತ್ರಜ್ಞಾನ ಹಾಗೂ ತಂತ್ರಜ್ಞರ ಸಹಾಯ ಪಡೆಯಲು ಮುಂದಾದರು. ಮೂರು ಭೂ ವಿಜ್ಞಾನಿಗಳ ಸೇವೆಯನ್ನು ಪಡೆಯುತ್ತಿರುವ ಜಲಮಂಡಳಿಯು ಇದೀಗ 144 ಬೋರ್‌ ವೆಲ್‌ ಗಳನ್ನು ಕೊರೆಯಿಸಿದ್ದು, ಈ ಪೈಕಿ 130 ಬೋರ್‌ವೆಲ್‌ ಗಳಲ್ಲಿ ಉತ್ತಮ ನೀರು ಲಭ್ಯವಾಗುವ ಮೂಲಕ ಶೇ.90ರಷ್ಟು ಸಕ್ಸಸ್‌ ರೇಟ್‌ ಪಡೆದುಕೊಂಡಿವೆ.

ಶೇ.90ರಷ್ಟು ಯಶಸ್ಸು ಬಹಳ ಕಷ್ಟ: ಜಲಮಂಡಳಿಯ ಕೊಳವೆಬಾವಿಗಳ ಇತಿಹಾಸದಲ್ಲಿ ಇದೊಂದು ಹೊಸ ಮೈಲುಗಲ್ಲಾಗಿದೆ. ಕೊರೆಸಿರುವ ಬೋರ್‌ವೆಲ್‌ಗ‌ಳಲ್ಲಿ ಶೇ.90ರಷ್ಟು ಸಕ್ಸಸ್‌ ಆಗುವುದು ಬಹಳ ಕಷ್ಟ. ಈ ಸಾಧನೆಗೆ ಭೂವಿಜ್ಞಾನಿಗಳ ಕೊಡುಗೆ ಅಪಾರ. ಅವರು ನಗರದ ಭೂಮಿಯನ್ನು ಅಧ್ಯಯನ ಮಾಡಿ ಅಕ್ವಾಫೈರ್‌ ಇರುವ ಸ್ಥಳಗಳನ್ನು ಗುರುತಿಸುವ ಕಾರ್ಯ ಮಾಡಿದ್ದರು. ಸಂಕಷ್ಟದ ಸಮಯದಲ್ಲಿ ಇಂತಹ ಉತ್ತಮ ಫ‌ಲಿತಾಂಶ ದೊರಕುವುದರಿಂದ ಬಹಳ ಸಂತಸವಾಗುತ್ತದೆ ಎಂದು ಜಲಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

ಬತ್ತುತ್ತಲೇ ಇವೆ ಕೊಳವೆ ಬಾವಿಗಳು

ಬೆಂಗಳೂರಿನಲ್ಲಿ ಶೇ.56ರಷ್ಟು ಕೊಳವೆ ಬಾವಿಗಳು ಬತ್ತಿ ಹೋದರೆ, ಇನ್ನುಳಿದ ಶೇ.20ರಷ್ಟು ಕೊಳವೆ ಬಾವಿಗಳಲ್ಲಿ ಕಡಿಮೆ ನೀರು ಬರುತ್ತಿದ್ದು, ಶೀಘ್ರದಲ್ಲೇ ಬತ್ತುವ ಲಕ್ಷಣ ಗೋಚರಿಸಿದೆ. ಬೆಂಗಳೂರಿನ ಶೇ.60ರಷ್ಟು ಮಂದಿ ಕೊಳವೆ ಬಾವಿಗಳನ್ನೇ ಆಶ್ರಯಿಸಿರುವ ಹಿನ್ನೆಲೆಯಲ್ಲಿ ನೀರಿಗಾಗಿ ಭಾರಿ ಬೆಲೆ ತೆತ್ತಬೇಕಾದ ಅನಿವಾರ್ಯ ಪರಿಸ್ಥಿತಿ ಇದೆ. ಚಾಲ್ತಿಯಲ್ಲಿರುವ ಶೇ.50ರಷ್ಟು ಕುಡಿಯುವ ಶುದ್ಧ ನೀರಿನ ಘಟಕಗಳಲ್ಲಿ ನೀರಿನ ಪ್ರಮಾಣ ಕಡಿಮೆಯಿದ್ದು, ದಿನದ ಕೆಲವು ಗಂಟೆ ಮಾತ್ರ ಸೇವೆ ನೀಡುತ್ತಿವೆ. ಈ ಘಟಕಗಳ ಮುಂದೆ ಕುಡಿಯುವ ನೀರಿಗಾಗಿ ಸಾರ್ವಜನಿಕರು ಸರದಿ ಸಾಲಿನಲ್ಲಿ ನಿಲ್ಲುತ್ತಿರುವ ದೃಶ್ಯ ಅಲ್ಲಲ್ಲಿ ಕಾಣ ಸಿಗುತ್ತವೆ. ವೈಟ್‌ ಫೀಲ್ಡ್‌, ಯಲಹಂಕ, ರಾಜ ರಾಜೇಶ್ವರಿನಗರ, ಮಹದೇವಪುರ, ಮಾರತ್ತಳ್ಳಿ, ಸರ್ಜಾಪುರ ರಸ್ತೆ ಪ್ರಮುಖ ಭಾಗಗಳಲ್ಲಿ ನೀರಿಗೆ ಬೇಡಿಕೆ ವ್ಯಕ್ತವಾಗುತ್ತಿದೆ.

ಸಾರ್ವಜನಿಕರಿಗೆ ಸಮರ್ಪಕವಾಗಿ ನೀರು ಪೂರೈಸುವ ನಿಟ್ಟಿನಲ್ಲಿ ಜಲಮಂಡಳಿಯಿಂದ ಕೊಳವೆ ಬಾವಿ ಕೊರೆಸಲಾಗಿದೆ. ಸಾರ್ವಜನಿಕರು ಈ ಕೊಳವೆ ಬಾವಿ ಗಳನ್ನು ಸದ್ಬಳಕೆ ಮಾಡಿಕೊಳ್ಳಬಹುದು. ಬೆಂಗಳೂರಿಗರ ನೀರಿನ ಸಮಸ್ಯೆ ಪರಿಹರಿಸಲು ಜಲಮಂಡಳಿಯು ಸಿದ್ಧವಾಗಿದೆ. ●ಡಾ|ವಿ.ರಾಮ್‌ ಪ್ರಸಾತ್‌ ಮನೋಹರ್‌, ಅಧ್ಯಕ್ಷ, ಜಲಮಂಡಳಿ

■ ಅವಿನಾಶ ಮೂಡಂಬಿಕಾನ

ಟಾಪ್ ನ್ಯೂಸ್

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

3

Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ 

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.