Bengaluru: ಪಾರ್ಕ್ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Team Udayavani, Nov 25, 2024, 10:28 AM IST
ಬೆಂಗಳೂರು: ಪಾರ್ಕ್ನಲ್ಲಿ ಮಲಗಿದ್ದಾಗ ಮರ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ರಾಜಾ ಜಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ರಾಜಾಜಿನಗರದ ನಿವಾಸಿ ಲಕ್ಷ್ಮಣ್ (31) ಮೃತರು. ಲಕ್ಷ್ಮಣ್, ಬಿಬಿಎಂಪಿ ಕಸದ ಲಾರಿ ಚಾಲಕ ನಾಗಿದ್ದು, ಪೋಷಕರೊಂದಿಗೆ ರಾಜಾಜಿನಗರದಲ್ಲಿ ವಾಸವಾಗಿದ್ದ.
ಭಾನುವಾರ ಮಧ್ಯಾಹ್ನ ರಾಜಾಜಿ ನಗರದ ನವರಂಗ್ ಸಮೀಪದ ಪಾರ್ಕಿನಲ್ಲಿ ಮಲಗಿದ್ದ. ಈ ವೇಳೆ ಮರವೊಂದು ಏಕಾಏಕಿ ಆತನ ಮೇಲೆ ಬಿದ್ದಿದೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಸಾರ್ವಜನಿಕರು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಿಸದೆ ಸಂಜೆ ಲಕ್ಷ್ಮಣ್ ಮೃತಪಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದರು.
ಘಟನೆ ಸಂಬಂಧ ರಾಜಾಜಿನಗರ ಠಾಣೆಯಲ್ಲಿ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.