ಕಸಕ್ಕೆ 200 ರೂ. ಮಾಸಿಕ ಶುಲ್ಕ ತಾತ್ಕಾಲಿಕ ತಡೆ


Team Udayavani, Jun 13, 2020, 5:41 AM IST

kasa-200

ಬೆಂಗಳೂರು: ನಗರದಲ್ಲಿ ಪ್ರತಿ ಮನೆಗಳಿಂದ ಉತ್ಪತ್ತಿಯಾಗುವ ಕಸಕ್ಕೆ ಬಿಬಿಎಂಪಿ ಘನತ್ಯಾಜ್ಯ ನಿರ್ವಹಣೆ ಉಪನಿಯಮ-2020ರಡಿ ಮಾಸಿಕ 200 ರೂ. ನಿಗದಿ ಮಾಡುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ನಿಯಮ  ಬದಲಾವಣೆ ಮಾಡಲು ಪಾಲಿಕೆ ಮುಂದಾಗಿದೆ. ಉದ್ದೇಶಿತ ಶುಲ್ಕ ವಿಧಿಸುವ ಸಂಬಂಧ ಶುಕ್ರವಾರ ನಡೆದ ಪಾಲಿಕೆ ಸಭೆಯಲ್ಲಿ ವಿರೋಧ ಪಕ್ಷದ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು.

ಸಾರ್ವಜ ನಿಕರು ಆಸ್ತಿ ತೆರಿಗೆ ಜತೆಗೆ ಶೇ.2  ತ್ಯಾಜ್ಯ  ಉಪಕರ ನೀಡುತ್ತಿದ್ದಾರೆ. ಈಗ ಹೊಸ ಉಪನಿಯಮದಿಂದ ಮಾಸಿಕ ಪ್ರತಿ ಮನೆಗೆ 200 ರೂ. ನಿಗದಿ ಮಾಡಿದರೆ ಜನರಿಗೆ ಮತ್ತಷ್ಟು ಹೊರೆಯಾಗಲಿದೆ. ಇದು ಗಬ್ಬರ್‌ ಸಿಂಗ್‌ ಟ್ಯಾಕ್ಸ್‌ ಎಂದು ವಿರೋಧ ಪಕ್ಷದ ನಾಯಕ ಅಬ್ದುಲ್‌ ವಾಜಿದ್‌  ಟೀಕಿಸಿದರು. ತ್ಯಾಜ್ಯ ನಿರ್ವಹಣೆ ತೆರಿಗೆ ವಿಧಿಸುತ್ತಿರುವುದೇಕೆ ಎಂದು ಪ್ರಶ್ನೆ ಮಾಡಿದರು. ಈ ವೇಳೆ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು.

ಮಧ್ಯ ಪ್ರವೇಶಿಸಿದ ಬಿಜೆಪಿ ಸದಸ್ಯ ಪದ್ಮನಾಭರೆಡ್ಡಿ, ಈ ಬಗ್ಗೆ ಚರ್ಚೆ ಅನಗತ್ಯ. ಪೂರ್ಣ  ಚರ್ಚೆಮಾಡಿ ಸರ್ಕಾರಕ್ಕೆ ಕಳುಹಿಸಿಕೊಡಬೇಕು. ಅಲ್ಲಿವರೆಗೂ ಇದು ಜಾರಿಗೆ ಬರುವುದಿಲ್ಲ ಎಂದರು. ಮೇಯರ್‌ ಎಂ. ಗೌತಮ್‌ ಕುಮಾರ್‌ ಮಾತನಾಡಿ, ಘನತ್ಯಾಜ್ಯ ನಿರ್ವಹಣಾ  ಉಪನಿಯಮದ ತಿದ್ದುಪಡಿ, ಜಾರಿಗೊಳಿಸಲು 90 ದಿನಗಳ ಕಾಲಾವಕಾಶವಿದ್ದು, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಅಗತ್ಯ ತಿದ್ದುಪಡಿಗಳನ್ನು ಮಾಡಲಾಗುವುದು ಎಂದರು.

ವೇತನ ನೀಡಿ: ಬಿಬಿಎಂಪಿ ಶಾಲೆಗಳಲ್ಲಿನ ಅತಿಥಿ ಶಿಕ್ಷಕರನ್ನು ಕೆಲಸದಿಂದ ತೆಗೆಯಬಾರದು ಹಾಗೂ ಬಾಕಿ ಉಳಿಸಿಕೊಂಡಿರುವ ಅವರ ಮೂರು ತಿಂಗಳ ವೇತನವನ್ನು ಕೂಡಲೇ ಕೊಡಬೇಕು ಎಂದು ಮಾಜಿ ಮೇಯರ್‌ ಶಾಂತಕುಮಾರಿ  ಒತ್ತಾಯಿಸಿದರು. ಬಿಬಿಎಂಪಿ ಆಯುಕ್ತ ಬಿ.ಎಚ್‌.ಅನಿಲ್‌ ಕುಮಾರ್‌ ಪ್ರತಿಕ್ರಿಯಿಸಿ, ಯಾವ ಅತಿಥಿ ಶಿಕ್ಷಕರನ್ನು ಕೆಲಸದಿಂದ ತೆಗೆಯುವುದಿಲ್ಲ. ಕೋವಿಡ್‌ 19ದಿಂದ ಶಾಲೆಗಳನ್ನು ತೆರೆದಿಲ್ಲ. ಸರ್ಕಾರ ಶಾಲೆಗಳನ್ನು ಪ್ರಾರಂಭಿಸುವ ತೀರ್ಮಾನ  ತೆಗೆದುಕೊಂಡಿಲ್ಲ. ಹೀಗಾಗಿ, ಸದ್ಯಕ್ಕೆ ಕೆಲಸಕ್ಕೆ ಬರದಂತೆ ಸೂಚಿಸಲಾಗಿದೆ. ಮಾರ್ಚ್‌ವರೆಗೂ ವೇತನ ನೀಡಿದ್ದು, ಏಪ್ರಿಲ್‌ ತಿಂಗಳ ವೇತನ ಹಾಗೂ ಸಂಬಳ ಹೆಚ್ಚಳಕ್ಕೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಮಳೆ ಅನಾಹುತ ತಡೆಗೆ ತಂಡ: ನಗರದಲ್ಲಿ ಮಳೆ ಅನಾಹುತ ತಪ್ಪಿಸುವ ನಿಟ್ಟಿನಲ್ಲಿ ಪಾಲಿಕೆಯ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಸೂಕ್ತ ವ್ಯವಸ್ಥೆ ಮಾಡಿ ಕೊಂಡಿಲ್ಲ ಎಂದು ಪಾಲಿಕೆಯ ಹಲವು ಸದಸ್ಯರು ಅಸಮಾಧಾನ  ವ್ಯಕ್ತಪಡಿಸಿದರು. ವಿದ್ಯಾರಣ್ಯಪುರ ವಾರ್ಡ್‌ನ ಪಾಲಿಕೆ ಸದಸ್ಯೆ ಕುಸುಮಾ ಮಾತನಾಡಿ, ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ಚರಂಡಿ ನೀರು ನುಗ್ಗಿ ತೊಂದರೆಯಾಗುತ್ತಿದೆ. ಅಧಿಕಾರಿಗಳಿಗೆ ಕರೆ ಮಾಡಿದರೆ, ಕರೆ  ಸ್ವೀಕರಿಸುತ್ತಿಲ್ಲ. ಮರಗಳು ಬಿದ್ದರೂ ತೆರವು ಮಾಡುತ್ತಿಲ್ಲ ಎಂದು ದೂರಿದರು. ಆಯುಕ್ತರು ಪ್ರತಿಕ್ರಿಯಿಸಿ ಮಳೆ ಅನಾಹುತ ತಪ್ಪಿಸಲು ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದರು.

ಮಾಸ್ಕ್ ಧರಿ ಸದಿದ್ದರೆ ದಂಡ: ಮಾಸ್ಕ್ ಧರಿಸುವ ಸಂಬಂಧ ಶೂನ್ಯ ವೇಳೆಯಲ್ಲಿ ಚರ್ಚೆ ನಡೆಯಿತು. ಪಾಲಿಕೆ ಸದಸ್ಯ ಡಾ. ರಾಜು ಅವರು ಮಾಸ್ಕ್ ತೆಗೆದು ಮಾತನಾಡಲು ಆರಂಭಿಸಿದರು. ಮಧ್ಯ ಪ್ರವೇಶಿಸಿದ ಮಾಜಿ ಮೇಯರ್‌ ಸಂಪತ್‌  ಕುಮಾರ್‌, ಮಾಸ್ಕ್ ಹಾಕಿಕೊಳ್ಳಿ ಇಲ್ಲವೇ ದಂಡ ಬೀಳುತ್ತದೆ ಎಂದರು. ಕಾರ್‌ನಲ್ಲಿ ಹೋಗು ವವರು, ಅಂಗಡಿಯಲ್ಲಿ ಇರುವವರು ಮಾಸ್ಕ್ ಧರಿಸದೆ ಇದ್ದರೂ ದಂಡ ವಿಧಿಸಲಾಗುತ್ತಿದೆ. ಹೀಗಾಗಿ, ಮಾಸ್ಕ್ ದಂಡಕ್ಕೆ ಸಂಬಂಧಿಸಿದಂತೆ ಸ್ಪಷ್ಟ  ಮಾರ್ಗಸೂಚಿ ನೀಡಬೇಕು ಎಂದುಅಬ್ದುಲ್‌ ವಾಜಿದ್‌ ಆಗ್ರಹಿಸಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.