Bangaloreಗೆ ಪ್ರತ್ಯೇಕ ಆರೋಗ್ಯ ವಿಭಾಗ; ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ಡೆಂಘೀ ಪ್ರಕರಣ
ಪಾಲಿಕೆ, ಇಲಾಖಾಧಿಕಾರಿಗಳ ಜತೆ ಸಚಿವ ಗುಂಡೂರಾವ್ ಸಭೆ
Team Udayavani, Sep 8, 2023, 8:25 AM IST
ಬೆಂಗಳೂರು: ಆಡಳಿತಾತ್ಮಕ ದೃಷ್ಟಿಯಿಂದ ಬೆಂಗಳೂರಿಗೆ ಪ್ರತ್ಯೇಕ ಆರೋಗ್ಯ ವಿಭಾಗ ಅಥವಾ ಕಮೀಷನರೇಟ್ ರಚಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ರಾಜಧಾನಿ ಬೆಂಗಳೂರಿನಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗುರುವಾರ ಪಾಲಿಕೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದರು. ಬೆಂಗಳೂರು ವ್ಯಾಪ್ತಿಯಲ್ಲಿ ಆರೋಗ್ಯ ಕ್ಷೇತ್ರ ಬಲಪಡಿಸುವ ನಿಟ್ಟಿನಲ್ಲಿ ಇಲಾಖೆಯಲ್ಲಿ ಪ್ರತ್ಯೇಕ ವಿಭಾಗ ರಚಿಸುವುದಾಗಿ ತಿಳಿಸಿದರು.
ಡೆಂಘೀ ಮೇಲ್ವಿಚಾರಣ ತಂತ್ರಾಂಶ: ಪ್ರಸ್ತುತ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಮ್ಮ ಕ್ಲಿನಿಕ್‌ಗಳನ್ನು ಪಾಲಿಕೆ ನಿರ್ವಹಿಸುತ್ತಿದೆ. ಆದರೆ, ಇನ್ನೂ ಆರೋಗ್ಯ ಸೇವೆಗಳನ್ನು ಒದಗಿಸಲು ಸಾಧ್ಯವಿಲ್ಲ. ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂ à ಪ್ರಕರಣ ನಿಯಂತ್ರಣದಲ್ಲಿ ಮುಂಜಾಗ್ರತೆ ವಹಿಸುವುದು ಅಗತ್ಯ. ಈ ನಿಟ್ಟಿನಲ್ಲಿ ಡೆಂಘೀ ಮೇಲ್ವಿಚಾರಣ ತಂತ್ರಾಂಶ ಅನಾವರಣಗೊಳಿಸುವುದಾಗಿ ಮಾಹಿತಿ ನೀಡಿದರು.
ಔಷಧಿ ಸಿಂಪಡಣೆಗೆ ಸೂಚನೆ: ರಾಜಧಾನಿಯಲ್ಲಿ ಜುಲೈನಲ್ಲಿ 1,649, ಆಗಸ್ಟ್‌ನಲ್ಲಿ 1,589, ಸೆಪ್ಟೆಂಬ ರ್‌ನಲ್ಲಿ 416 ಡೆಂ à ಪ್ರಕರಣ ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಎಲ್ಲಾ ಕಡೆ ಔಷಧಿ ಸಿಂಪಡಣೆ, ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲು ಎಲ್ಲಾ ಆರೋಗ್ಯ ವೈದ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಬಿಬಿಎಂಪಿ ಪ್ರತ್ಯೇಕ ಜಿಲ್ಲೆ ಎಂದು ಪರಿಗಣನೆ: ಪಾಲಿಕೆ ವ್ಯಾಪ್ತಿಯಲ್ಲಿ 6 ಹೈಟೆಕ್ ಲ್ಯಾಬ್‌ಗಳಿದ್ದು, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ನಮ್ಮ ಕ್ಲಿನಿಕ್‌ಗಳಲ್ಲಿ ಸಂಗ್ರಹ ಮಾಡುವ ಬ್ಲಿಡ್ ಸ್ಯಾಂಪಲ್‌ಗಳನ್ನು ಲ್ಯಾಬ್‌ಗಳಿಗೆ ರವಾನೆ(ಹಬ್ ಆ್ಯಂಡ್ ನ್ಪೋಕ್ ಮಾಡಲ್) ಹಾಗೂ ಇನ್ನಿತರೆ ಸೌಲಭ್ಯಗಳ ಪೂರೈಕೆಗಾಗಿ ಅನುದಾನದ ಅಗತ್ಯ ವಿದೆ. ಎನ್.ಎಚ್.ಎಂನಿಂದ ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ನಗರದಲ್ಲಿ ಎಲ್ಲಾ ಆರೋಗ್ಯ ಸೇವೆಗಳನ್ನು ಸಮನಾಂತರವಾಗಿ ತರುವ ಉದ್ದೇಶದಿಂದ ಬಿಬಿಎಂಪಿಯನ್ನು ಪ್ರತ್ಯೇಕ ಜಿಲ್ಲೆ ಎಂದು ಪರಿಗಣಿಸಲು ನಿರ್ಧಾರ ಮಾಡಲಾಗಿದ್ದು, ಈ ಬಗ್ಗೆ ಉನ್ನತ ಮಟ್ಟದಲ್ಲಿ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಹೇಳಿದರು.
ಪಾಲಿಕೆ ಆಯುಕ್ತ ತುಷಾರ್ ಗಿರಿನಾಥ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಿ.ರಂದೀಪ್, ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಡಾ.ತ್ರಿಲೋಕ್‌ಚಂದ್ರ, ಎನ್. ಎಚ್.ಎಂ ಅಭಿಯಾನ ವೀಕ್ಷಕ ನವೀನ್‌ಭಟ್, ಮುಖ್ಯ ಆರೋಗ್ಯಾಧಿಕಾರಿ ಡಾ.ಬಾಲಸುಂದರ್ ಉಪಸ್ಥಿತರಿದ್ದರು.
ನಮ್ಮ ಕ್ಲಿನಿಕ್ ಸಂಜೆ ಸೇವೆ ಬಿಬಿಎಂಪಿ ವ್ಯಾಪ್ತಿಯಲ್ಲಿ 50 ನಮ್ಮ ಕ್ಲಿನಿಕ್ ಗಳು ಬೆಳಗ್ಗೆ 8ರಿಂದ ರಾತ್ರಿ 8ಗಂಟೆಯವರೆಗೆ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ. ಈ ಸಮಯದಲ್ಲಿ ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಲ್ಯಾಬ್ ಟೆಕ್ನಿಷಿಯನ್‌ಗಳು, ಮಧ್ಯಾಹ್ನ 12ರಿಂದ ರಾತ್ರಿ 8 ಗಂಟೆಯವರೆಗೆ ವೈದ್ಯರು, ನರ್ಸ್‌ಗಳಿರುವ ವ್ಯವಸ್ಥೆಯನ್ನು ಮಾಡಲಾಗುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.