Dating ಆ್ಯಪ್‌ನಲ್ಲಿ ಪರಿಚಯವಾದ ಮಹಿಳೆಯಿಂದ ಯುವಕನಿಗೆ ಕಿರುಕುಳ
Team Udayavani, Jan 18, 2024, 8:49 AM IST
ಬೆಂಗಳೂರು: ಆನ್‌ಲೈನ್ ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾದ ಯುವಕನೊಬ್ಬನಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಮಹಿಳೆ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಬಾಲಿವುಡ್ ನಿರ್ದೇಶಕಿ ದೀಪಿಕಾ ನಾರಾಯಣ ಭಾರದ್ವಾಜ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಬೆಂಗಳರು ನಗರ ಪೊಲೀಸರ ಖಾತೆಗೆ ಟ್ಯಾಗ್ ಮಾಡಿದ್ದಾರೆ.
ಅದಕ್ಕೆ ಉತ್ತರಿಸಿರುವ ನಗರ ಪೊಲೀಸರು, ಕೂಡಲೇ ಸಮೀಪದ ಠಾಣೆಗೆ ದೂರು ನೀಡಿ, ಜತೆಗೆ ತಮ್ಮ ಮೊಬೈಲ್ ನಂಬರ್ ಅನ್ನು ತಮಗೆ ನೀಡುವಂತೆ ಸೂಚಿಸಿದ್ದಾರೆ. ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾದ ಯುವಕನನ್ನು ಒಮ್ಮೆ ಭೇಟಿಯಾದ ಮಹಿಳೆ, ಆತನೊಂದಿಗೆ ಆತ್ಮೀಯವಾಗಲು ಮುಂದಾಗಿದ್ದಾಳೆ. ಆದರೆ, ಯುವಕ ಆಕೆಯಿಂದ ಅಂತರ ಕಾಯ್ದುಕೊಂಡಿದ್ದಾನೆ. ಅದರಿಂದ ಬೇಸರಗೊಂಡ ಆಕೆ, ತನ್ನನ್ನು ಮತ್ತೂಮ್ಮೆ ಭೇಟಿಯಾಗ ಬೇಕೆಂದು ದುಂಬಾಲು ಬಿದ್ದಿದ್ದಾಳೆ. ಆದರೆ ಯುವಕ ಅದನ್ನು ತಿರಸ್ಕರಿಸಿದ್ದಾನೆ.
ಆದರೂ ಆಕೆ, ಯುವಕನಿಗೆ ಬ್ಲ್ಯಾಕ್‌ಮೇಲ್ ಮಾಡಲು ಆರಂಭಿಸಿದ್ದು, ಹಣ ಕೊಡಬೇಕೆಂದು ಬೇಡಿಕೆ ಇಟ್ಟಿದ್ದಾಳೆ. ಅದನ್ನು ಪ್ರಶ್ನಿಸಿದ ಯವಕ ಹಣ ಕೊಡಲು ಸಾಧ್ಯವಿಲ್ಲ ಎಂದಿದ್ದಾನೆ. ಆಗ ಆಕೆ, ಯುವಕನಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಲು ಆರಂಭಿಸಿದ್ದಾಳೆ. ಅಲ್ಲದೇ ತನ್ನೊಂದಿಗೆ ದೈಹಿಕ ಸಂಬಂಧ ಬೆಳಸಲು ಮುಂದಾಗಿದ್ದಾಳೆ. ಅದನ್ನು ಯುವಕ ತಿರಸ್ಕರಿಸಿದ್ದಾನೆ.
ಆದರೂ ಬಿಡದ ಮಹಿಳೆ, “ನಿನ್ನ ಭಾವಚಿತ್ರವನ್ನು ಮಾಫ್ì ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾಳೆ. ಈ ರೀತಿ ಮಾಡದಿರಲು ತಾನೂ ಕೇಳಿದಷ್ಟು ಹಣ ಕೊಡಬೇಕೆಂದು ಧಮ್ಕಿ ಹಾಕಿದ್ದಾಳೆ.ಅದರಿಂದ ಬೇಸತ್ತ ಯುವಕ ಠಾಣೆಗೆ ದೂರು ನೀಡಲು ಹೋಗಿದ್ದಾನೆ.
ಠಾಣೆಯಲ್ಲಿದ್ದ ಪೊಲೀಸ್ ಸಿಬ್ಬಂದಿ, ಮಹಿಳೆ ನಿಮ್ಮ ವಿರುದ್ಧ ಈಗಾಗಲೇ ದೂರು ನೀಡಿದ್ದಾಳೆ. ಹೀಗಾಗಿ ನಿಮ್ಮನ್ನು ಬಂಧಿಸಬೇಕಾಗುತ್ತದೆ ಎಂದು ಹೆದರಿಸಿದ್ದಾರೆ. ಅದರಿಂದ ಯುವಕ ಆತಂಕಗೊಂಡಿದ್ದಾನೆ. ಹೀಗಾಗಿ ಆ ಯುವಕನ ಜತೆ ನಾನು ಮಾತನಾಡಿದ್ದೇನೆ ಮತ್ತು ಅವನಿಗೆ ಹೋರಾಡಲು ಆತ್ಮವಿಶ್ವಾಸವನ್ನು ನೀಡಿದ್ದೇನೆ. ಅಲ್ಲದೇ ಸಂಬಂಧಪಟ್ಟ ಬೆಂಗಳೂರು ಠಾಣೆಯ ಹಿರಿಯ ಪೊಲೀಸ್ ಅಧಿಕಾರಿಯನ್ನು ಸಂಪರ್ಕಿಸಿದ್ದು, ಸಕರಾತ್ಮಕ ಸ್ಪಂದನೆ ನೀಡುವುದಾಗಿ ಹೇಳಿದ್ದಾರೆ ಎಂದು ದೀಪಿಕಾ ನಾರಾಯಣ ಭಾರದ್ವಾಜ್ ಉಲ್ಲೇಖಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.